PSI ಪರೀಕ್ಷೆ ದಿನ ಕಾಲೇಜು ಆವರಣದ ಹೂವಿನ ಕುಂಡದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಇಟ್ಟಿದ್ದ ಅಭ್ಯರ್ಥಿ ಪ್ರಭು! ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ

ಪರೀಕ್ಷೆ ದಿನ ಗೇಟ್​ನಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿರುತ್ತಾರೆ ಎಂದು ತಿಳಿದಿದ್ದ ಪ್ರಭು, ಹಿಂದಿನ ದಿನವೇ ಕಾಲೇಜು ಆವರಣಕ್ಕೆ ಬಂದಿದ್ದ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಬಚ್ಚಿಟ್ಟಿದ್ದ.

PSI ಪರೀಕ್ಷೆ ದಿನ ಕಾಲೇಜು ಆವರಣದ ಹೂವಿನ ಕುಂಡದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಇಟ್ಟಿದ್ದ ಅಭ್ಯರ್ಥಿ ಪ್ರಭು! ಸಿಐಡಿ ವಿಚಾರಣೆಯಲ್ಲಿ ಮಾಹಿತಿ ಲಭ್ಯ
ಆರೋಪಿ ಪ್ರಭು ಜೊತೆ ಪೊಲೀಸರು ಎಂಎಸ್ ಇರಾನಿ ಕಾಲೇಜಿಗೆ ಆಗಮಿಸಿದ್ದಾರೆ
Follow us
TV9 Web
| Updated By: sandhya thejappa

Updated on:May 03, 2022 | 3:47 PM

ಕಲಬುರಗಿ: ಎಂಎಸ್ ಇರಾನಿ ಕಾಲೇಜ್ನಲ್ಲಿ ಪಿಎಸ್ಐ ಪರೀಕ್ಷೆ (PSI Exam) ಬರೆದಿದ್ದ ಅಭ್ಯರ್ಥಿ ಪ್ರಭು, ಪರೀಕ್ಷೆ ಬರೆಯಲು ಎಲೆಕ್ಟ್ರಾನಿಕ್ ಡಿವೈಸ್ (Electronic Device) ಬಳಸಿದ್ದ ಎಂದು ಸಿಐಡಿ ವಿಚಾರಣೆ ವೇಳೆ ಮಾಹಿತಿ ಸಿಕ್ಕಿದೆ. ಪ್ರಭು ತಂದೆ ಶರಣಪ್ಪ, ರುದ್ರಗೌಡ ಪಾಟೀಲ್ನ ಆಡಿಟರ್ ಚಂದ್ರಕಾಂತ್ ಕುಲಕರ್ಣಿಗೆ ಸುಮಾರು 50 ಲಕ್ಷ ರೂಪಾಯಿ ನೀಡಿದ್ದ. ಮಗನಿಗಾಗಿ ಸಾಲ ಮಾಡಿ ಕೊಟ್ಟಿದ್ದ ಎನ್ನುವ ಸಂಗತಿಗಳು ಸಿಐಡಿ ಅಧಿಕಾರಿಗಳು ಕಲೆ ಹಾಕಿದ್ದಾರೆ. ಇನ್ನು ಒಂದು ದಿನ ಮೊದಲೇ ಪ್ರಭು ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ್ದನಂತೆ. ಈ ವೇಳೆ ಕಾಲೇಜು ಆವರಣದ ಹೂವಿನ ಕುಂಡದಲ್ಲಿ ಡಿವೈಸ್ ಇಟ್ಟಿದ್ದ ಎಂದು ತಿಳಿದುಬಂದಿದೆ.

ಪರೀಕ್ಷೆ ದಿನ ಗೇಟ್​ನಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಿರುತ್ತಾರೆ ಎಂದು ತಿಳಿದಿದ್ದ ಪ್ರಭು, ಹಿಂದಿನ ದಿನವೇ ಕಾಲೇಜು ಆವರಣಕ್ಕೆ ಬಂದಿದ್ದ. ಪರೀಕ್ಷಾ ಕೇಂದ್ರದ ಆವರಣದಲ್ಲಿ ಎಲೆಕ್ಟ್ರಾನಿಕ್ ಡಿವೈಸ್ ಬಚ್ಚಿಟ್ಟಿದ್ದ. ಪರೀಕ್ಷೆ ಮುಗಿದ ಬಳಿಕ ಡಿವೈಸ್ ತೆಗೆದುಕೊಂಡು ಹೋಗಿದ್ದ. ಎಂಎಸ್ಐ ಕಾಲೇಜ್ಗೆ ಆರೋಪಿ ಪ್ರಭುನನ್ನು ಪೊಲೀಸರು ಕರೆ ತಂದು ಸ್ಥಳ ಮಹಜರು ಮಾಡಿದರು.

ಎಂಟು ಅಭ್ಯರ್ಥಿಗಳು ಆಯ್ಕೆ: ಎಂಎಸ್ ಇರಾನಿ ಪದವಿ ಕಾಲೇಜಿನಲ್ಲಿ ಪರೀಕ್ಷೆ ಬರೆದವರ ಪೈಕಿ 8 ಜನ ಆಯ್ಕೆಯಾಗಿದ್ದರು. ಪಿಎಸ್​ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 8 ಜನರ ಹೆಸರಿತ್ತು. 8 ಅಭ್ಯರ್ಥಿಗಳ ಪೈಕಿ ಪ್ರಭುನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಉಳಿದ 7 ಅಭ್ಯರ್ಥಿಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಉಳಿದ 7 ಅಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿದ್ದಾರಾ? ಅಥವಾ ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದಾರಾ? ಈ ಎಲ್ಲದರ ಬಗ್ಗೆ ತನಿಖೆ ನಡೆಸಲಿದ್ದಾರೆ.

ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿ ಇಬ್ಬರು ಡಿವೈಎಸ್​ಪಿ, ಓರ್ವ ಸಿಪಿಐನ ವಿಚಾರಣೆ ನಡೆಸಲಾಗಿದೆ. ಪರೀಕ್ಷೆ ದಿನ ಮೂವರು ಪೊಲೀಸ್ ಅಧಿಕಾರಿಗಳು ಕರ್ತವ್ಯದಲ್ಲಿದ್ದರು. ವಾರದ ಹಿಂದೆಯೇ ಸಿಐಡಿ ಅಧಿಕಾರಿಗಳನ್ನು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಅವರ ಮೊಬೈಲ್​ಗಳನ್ನ ವಶಕ್ಕೆ ಪಡೆದಿದ್ದಾರೆ. ಅಕ್ರಮದಲ್ಲಿ ಪೊಲೀಸರು ಭಾಗಿಯಾಗಿದ್ದಾರಾ ಎನ್ನುವ ಬಗ್ಗೆ ತನಿಖೆ ಮುಂದುವರಿದಿದೆ.

ಇದನ್ನೂ ಓದಿ

ಡೆನ್ಮಾರ್ಕ್​ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಹೊರಡುವುದಕ್ಕೂ ಮೊದಲು ಜರ್ಮನಿ ಸರ್ಕಾರಕ್ಕೆ ಕೃತಜ್ಞತೆ

Viral Video: 37,000 ಅಡಿ ಎತ್ತರದಲ್ಲಿ ವಿಮಾನದಲ್ಲೇ ಮದುವೆಯಾದ ಜೋಡಿ; ವೈರಲ್ ವಿಡಿಯೋ ಇಲ್ಲಿದೆ

Published On - 3:31 pm, Tue, 3 May 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು