PSI Recruitment Scam: ಕಿಂಗ್ ಪಿನ್ ರುದ್ರಗೌಡ್ ಪಾಟೀಲ್ ಕಾಂಗ್ರೆಸ್ ಟಿಕೆಟ್​ಗೆ ದುಂಬಾಲು​

ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಕಿಂಗ್ ಪಿನ್ ರುದ್ರಗೌಡ್ ಪಾಟೀಲ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ, ಕಲಬುರಗಿ ಜಿಲ್ಲೆಯ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಟಿಕೆಟ್ ನೀಡುವಂತೆ ಕಾಂಗ್ರೆಸ್​ಗೆ ಮನವಿ ಮಾಡಿದ್ದಾನೆ.

Follow us
TV9 Web
| Updated By: ವಿವೇಕ ಬಿರಾದಾರ

Updated on:Feb 14, 2023 | 10:07 AM

ಕಲಬುರಗಿ: ರಾಜ್ಯದಲ್ಲಿ ತೀರ್ವ ಸಂಚಲನ ಮೂಡಿಸಿದ್ದ ಪಿಎಸ್ಐ ನೇಮಕಾತಿ ಅಕ್ರಮ (PSI Recruitment Scam) ಪ್ರಕರಣದ ತನಿಖೆ ಇನ್ನು ಮುಗಿದಿಲ್ಲ. ಆದರೆ ಅಕ್ರಮದ ಪ್ರಮುಖ ಕಿಂಗ್ ಪಿನ್​ಗಳಲ್ಲಿ ಓರ್ವನೆಂದು ಹೇಳಲಾಗಿರುವ ರುದ್ರಗೌಡ್ ಪಾಟೀಲ್ (Rudragouda Patil), ಇದೀಗ ವಿಧಾನಸಭೆ ಮೇಲೆ ಕಣ್ಣು ಹಾಕಿದ್ದಾನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ (Assembly Election), ಕಲಬುರಗಿ ಜಿಲ್ಲೆಯ ಅಫಜಲಪುರ (Afzalpur) ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಚಿಸಿದ್ದು, ಟಿಕೆಟ್ ನೀಡುವಂತೆ ಕಾಂಗ್ರೆಸ್​ಗೆ (Congress) ಮನವಿ ಮಾಡಿದ್ದಾನೆ. ಈ ಬಗ್ಗೆ ಮಾಹಿತಿ ನೀಡಿರುವ ಪಿಎಸ್ಐ ನೇಮಕಾತಿ ಅಕ್ರಮದ ಆರೋಪಿಯಾಗಿರುವ ರುದ್ರಗೌಡ್ ಪಾಟೀಲ್ ಸಹೋದರ ಮಹಾಂತ್ ಪಾಟೀಲ್, ತಮ್ಮ ಸಹೋದರ ರುದ್ರಗೌಡ್ ಪಾಟೀಲ್​​ಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಕೈ ನಾಯಕರಿಗೆ ಮನವಿ ಮಾಡಿದ್ದೇವೆ. ಟಿಕೆಟ್ ನೀಡದೇ ಇದ್ದರೆ ಬಂಡಾಯ ಕೈ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ದಿಸೋದು ಗ್ಯಾರಂಟಿ ಅಂತ ಹೇಳಿದ್ದಾರೆ.

ಜೈಲಿನಲ್ಲಿರುವ ರುದ್ರಗೌಡ್ ಪಾಟೀಲ್

ಇನ್ನು ಪಿಎಸ್ಐ ನೇಮಕಾತಿ ಅಕ್ರಮದ ಪ್ರಮುಖ ಆರೋಪಿಯಾಗಿರುವ ರುದ್ರಗೌಡ್ ಪಾಟೀಲ್, ಸದ್ಯ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಜಾಮೀನು ಪಡೆಯಲು ಸಾಕಷ್ಟು ಯತ್ನ ನಡೆಸುತ್ತಿದ್ದಾನೆ. ಚುನಾವಣೆಗೆ ಮುನ್ನವೇ ಜಾಮೀನು ಪಡೆಯಬೇಕು. ಜಾಮೀನು ಸಿಗದಿದ್ದರೆ ಜೈಲಿನಿಂದಲೇ ಸ್ಪರ್ಧೆ ಮಾಡಲು ರುದ್ರಗೌಡ್ ನಿರ್ಧರಿಸಿದ್ದು, ಅದಕ್ಕಾಗಿ ತಮ್ಮ ಕುಟುಂಬ ಮತ್ತು ಬೆಂಬಲಿಗರ ಮೂಲಕ ಸಿದ್ದತೆ ಆರಂಭಿಸಿದ್ದಾನೆ. ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಸಿಕ್ಕಿಬೀಳುವ ಮೊದಲೇ ರುದ್ರಗೌಡ್ ರಾಜಕೀಯ ಎಂಟ್ರಿ ಮಾಡಿದ್ದು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದತೆ ಮಾಡಿಕೊಂಡಿದ್ದ. ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡಿದ್ದನು. ಆದರೆ ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ ಹೆಸರು ಕೇಳಿಬಂದಿದ್ದದರಿಂದ, ಸಿಐಡಿ ಅಧಿಕಾರಿಗಳು ರುದ್ರಗೌಡ್ ನನ್ನು ಬಂಧಿಸಿದ್ದರು.

ಈ ಹಿಂದೆ ಗ್ರಾಮ ಪಂಚಾಯತ್ ಸದಸ್ಯ, ಅಧ್ಯಕ್ಷನಾಗಿ ಕೆಲಸ ಮಾಡಿರುವ ರುದ್ರಗೌಡ್ ಪಾಟೀಲ್, ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲಿಕ್ಕೆ ಸಾಕಷ್ಟು ತಯಾರಿ ಮಾಡಿಕೊಂಡಿದ್ದನು. ತಮ್ಮ ಸಮುದಾಯ ಸೇರಿದಂತೆ ಕ್ಷೇತ್ರದಲ್ಲಿ ಯುವ ಪಡೆ ಕಟ್ಟಿಕೊಂಡು ಚುನಾವಣೆಗೆ ಅಖಾಡ ಸಿದ್ದಮಾಡಿಕೊಂಡಿದ್ದನು. ಈ ಸಮಯದಲ್ಲಿಯೇ ಪಿಎಸ್ಐ ಕೇಸ್ ಉರುಳು ರುದ್ರಗೌಡ್ ಪಾಟೀಲ್​​ಗೆ ಸುತ್ತುಕೊಂಡಿತ್ತು. ರುದ್ರಗೌಡ್ ಪಾಟೀಲ್ ಬಂಧನವಾದಾಗ ಕೂಡಾ, ರಾಜಕೀಯ ಕಾರಣಕ್ಕಾಗಿ ತಮ್ಮ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ಬಂಧಿಸಲಾಗಿದೆ. ತಾವು ರಾಜಕೀಯವಾಗಿ ಬೆಳೆಯುವದನ್ನು ತಡೆಗಟ್ಟುವ ತಂತ್ರವನ್ನು ಅನೇಕರು ಮಾಡಿದ್ದಾರೆ ಅಂತ ಆರೋಪಿಸಿದ್ದ.

ಈ ಹಿಂದೆ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ರುದ್ರಗೌಡ್ ಪಾಟೀಲ್ ಸಹೋದರ, ಮಹಾಂತೇಶ್ ಪಾಟೀಲ್ ಜಾಮೀನಿನ ಮೇಲೆ ಹೊರಗಡೆ ಇದ್ದು, ತಮ್ಮ ಸಹೋದರನ ಪರವಾಗಿ ಕೆಲಸ ಆರಂಬಿಸಿದ್ದಾರೆ. ಸಹೋದರನಿಗೆ ಕೈ ಟಿಕೆಟ್ ನೀಡುವಂತೆ ಕೈ ಮುಖಂಡರಿಗೆ ಮನವಿ ಮಾಡಿದ್ದೇವೆ. ತಾವು ಜೈಲಲ್ಲಿದ್ದರಿಂದ ಕೈ ಟಿಕೆಟ್​​ಗೆ ಅರ್ಜಿ ಸಲ್ಲಿಸಲು ಆಗಿಲ್ಲ. ನಾವು ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇವೆ. ಪಕ್ಷ ಕಟ್ಟಲು ಶ್ರಮಿಸಿದ್ದೇವೆ. ಪಕ್ಷ ಟಿಕೆಟ್ ನೀಡದೇ ಇದ್ದರೆ, ಬಂಡಾಯ ಅಭ್ಯರ್ಥಿಯಾಗಿ ರುದ್ರಗೌಡ್ ಪಾಟೀಲ್ ಸ್ಪರ್ಧಿಸುವದು ಖಚಿತ ಎಂದು ಮಹಾಂತೇಶ್ ಪಾಟೀಲ್ ಹೇಳಿದ್ದಾನೆ.

ವರದಿ: ಸಂಜಯ್ ಚಿಕ್ಕಮಠ ಟಿವಿ9 ಕಲಬುರಗಿ

Published On - 9:54 am, Tue, 14 February 23

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ