ಗಾಣಗಾಪುರದಲ್ಲಿ ರಾರಾಜಿಸುತ್ತಿದೆ ಪಿಎಸ್ಐ ಅಕ್ರಮ ಪ್ರಕರಣ ಪ್ರಮುಖ ಆರೋಪಿಗಳ ಕಟೌಟ್, ರುದ್ರಗೌಡ ಪಾಟೀಲ್​​ಗೆ ಸಿಐಡಿಯಿಂದ ನೋಟಿಸ್​​

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 23, 2023 | 7:44 AM

ದಿ.ವಿಠ್ಠಲ್ ಹೇರೂರು ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ರುದ್ರಗೌಡ ಪಾಟೀಲ್, ಮಹಾಂತೇಶ್ ಪಾಟೀಲ್​ರ ಬ್ಯಾನರ್​ಗಳನ್ನು ಹಾಕಲಾಗಿದೆ.

ಗಾಣಗಾಪುರದಲ್ಲಿ ರಾರಾಜಿಸುತ್ತಿದೆ ಪಿಎಸ್ಐ ಅಕ್ರಮ ಪ್ರಕರಣ ಪ್ರಮುಖ ಆರೋಪಿಗಳ ಕಟೌಟ್, ರುದ್ರಗೌಡ ಪಾಟೀಲ್​​ಗೆ ಸಿಐಡಿಯಿಂದ ನೋಟಿಸ್​​
ಗಾಣಗಾಪುರದಲ್ಲಿ ರಾರಾಜಿಸುತ್ತಿದೆ ಪಿಎಸ್ಐ ಅಕ್ರಮ ಪ್ರಕರಣ ಪ್ರಮುಖ ಆರೋಪಿಗಳ ಕಟೌಟ್
Follow us on

ಕಲಬುರಗಿ: ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ(PSI Recruitment Scam) ಸಂಬಂಧಿಸಿ ಪ್ರಮುಖ ಆರೋಪಿಗಳಾದ ರುದ್ರಗೌಡ ಪಾಟೀಲ್, ಮಹಾಂತೇಶ್ ಪಾಟೀಲ್​ರ ಕಟೌಟ್​, ಬ್ಯಾನರ್​ಗಳು ಎಲ್ಲೆಡೆ ರಾರಾಜಿಸುತ್ತಿವೆ. ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ಪಾಟೀಲ್​ ಸಹೋದರರ ಬ್ಯಾನರ್​ಗಳನ್ನು ಹಾಕಲಾಗಿದೆ.

ನಾಳೆ ನಡೆಯಲಿರುವ ದಿ.ವಿಠ್ಠಲ್ ಹೇರೂರು ಮೂರ್ತಿ ಅನಾವರಣ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ರುದ್ರಗೌಡ ಪಾಟೀಲ್, ಮಹಾಂತೇಶ್ ಪಾಟೀಲ್​ರ ಬ್ಯಾನರ್​ಗಳನ್ನು ಹಾಕಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಘಟಕರು ಸಿಎಂಗೆ ಆಹ್ವಾನ ನೀಡಿದ್ದಾರೆ. ಆದ್ರೆ ಸಿಎಂ ಬರೋದು ಇನ್ನು ಅಧಿಕೃತವಾಗಿಲ್ಲ.

ಕಿಂಗ್​​ಪಿನ್ ರುದ್ರಗೌಡ ಪಾಟೀಲ್​​ಗೆ ಸಿಐಡಿಯಿಂದ ನೋಟಿಸ್​​

ಇನ್ನು ಮತ್ತೊಂದೆಡೆ ಕಿಂಗ್ ಪಿನ್ ರುದ್ರಗೌಡ ಪಾಟೀಲ್​ಗೆ ಸಿಐಡಿ ನೋಟಿಸ್ ನೀಡಿದೆ. ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಜನವರಿ 21 ರಂದು ನೋಟಿಸ್ ನೀಡಿದ್ದು ಕಲಬುರಗಿ ನಗರದಲ್ಲಿರೋ ಸಿಐಡಿ ಕಚೇರಿಗೆ ಹಾಜರಾಗುವಂತೆ ತಿಳಿಸಿದೆ. ಜಾಮೀನು ಸಿಕ್ಕ ಮೇಲೆ ರುದ್ರಗೌಡ ಸಿಐಡಿ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಹಿಂದೆ ನಾಲ್ಕು ನೋಟಿಸ್ ನೀಡಿದ್ರು ಗೈರಾಗಿದ್ದರು.

ಇದನ್ನೂ ಓದಿ: PSI Recruitment scam: ಪಿಎಸ್​ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ: ಕಿಂಗ್​ಪಿನ್​​ ರುದ್ರಗೌಡ ಪಾಟೀಲ್ ಸೇರಿ ಐವರ ಮನೆ ಮೇಲೆ ಇಡಿ ದಾಳಿ

ಜನ ಬಯಸಿದರೆ ಅಸೆಂಬ್ಲಿ ಚುನಾವಣೆಗೆ ಸ್ಪರ್ಧಿಸುವೆ – PSI ಅಕ್ರಮ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಘೋಷಣೆ, ಕ್ಷೇತ್ರವೂ ಪ್ರಕಟ!

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಪ್ರಮುಖ ಆರೋಪಿಯಾಗಿರುವ ರುದ್ರಗೌಡ ಪಾಟೀಲ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ನಿನ್ನೆ(ಜ.20) ಸಿಐಡಿ ಅಧಿಕಾರಿಗಳು ಆರೋಪಿ ರುದ್ರಗೌಡ ಪಾಟೀಲ್ ಬಂಧಿಸಲು ಬಂದಿದ್ದರು. ಈ ವೇಳೆ ಅಧಿಕಾರಿಗಳನ್ನು ತಳ್ಳಿ ರುದ್ರಗೌಡ ಪರಾರಿಯಾಗಿದ್ದರು. ಸದ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.

ಬಿಡುಗಡೆಯಾದ ವಿಡಿಯೋದಲ್ಲೇನಿದೆ?

ನಿನ್ನೆ ಪರಾರಿಯಾದ ಬಳಿಕ ರುದ್ರಗೌಡ ಪಾಟೀಲ್ ಬಗ್ಗೆ ಅನೇಕ ಮಾತುಗಳು ಕೇಳಿ ಬಂದಿದ್ದವು. ಈ ಬೆನ್ನಲ್ಲೆ ಇಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಜನ ಭಯಸಿದ್ರೆ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿಯೇ ಸ್ಪರ್ದೆ ಮಾಡ್ತೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲಾ, ಇಲ್ಲೇ ಇದ್ದೇನೆ. ಇಡಿ ಅಧಿಕಾರಿಗಳು ಬಂದಾಗ ಅವರ ವಿಚಾರಣೆ ಎದುರಿಸಿದ್ದೇನೆ. ಇಡಿ ಅಧಿಕಾರಿಗಳು ಬಂದು ಹೋದ ಮೇಲೆ ನಾನು ಹೊರಗೆ ಹೋಗಿದ್ದೆ ಎಂದಿದ್ದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:42 am, Mon, 23 January 23