AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಮತ್ತೋರ್ವ ಆರೋಪಿಯನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸುಪ್ರಿಯಾ ಮಲ್ಲಿಕಾರ್ಜುನ ಹುಂಡೆಕಾರ್ ಬಂಧಿತ ಅಭ್ಯರ್ಥಿ.

PSI Recruitment Scam: ಮತ್ತೋರ್ವ ಆರೋಪಿಯನ್ನು ಬಂಧಿಸಿದ ಸಿಐಡಿ ಅಧಿಕಾರಿಗಳು
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 02, 2022 | 9:43 PM

Share

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ. ಸುಪ್ರಿಯಾ ಮಲ್ಲಿಕಾರ್ಜುನ ಹುಂಡೆಕಾರ್ ಬಂಧಿತ ಅಭ್ಯರ್ಥಿ. ಜಿಲ್ಲೆಯ ಜೇವರ್ಗಿ ತಾಲೂಕಿನ ಹಿಪ್ಪರಗಾ ಎಸ್. ಎನ್ ಗ್ರಾಮದ ನಿವಾಸಿ. ಬ್ಲೂಟೂತ್ ಬಳಸಿ ಅಕ್ರಮವಾಗಿ ಸುಪ್ರಿಯಾ ಪರೀಕ್ಷೆ ಬರೆದಿದ್ದು, ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಸುಪ್ರಿಯಾ ಹೆಸರು ಇತ್ತು ಎನ್ನಲಾಗುತ್ತಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಮತ್ತೆ ಆರು ಪ್ರತ್ಯೇಕ ಚಾರ್ಜ್‌ಶೀಟ್​ಗಳನ್ನು ಕಲಬುರಗಿ 3ನೇ ಜೆಎಂಎಫ್‌ಸಿ ಕೋರ್ಟ್‌ಗೆ ಈಗಾಗಲೇ ಸಲ್ಲಿಸಿದೆ. ಕಲಬುರಗಿ ನಗರದ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ಹಾಗೂ ಅಶೋಕ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಚಾರ್ಜ್‌ಶೀಟ್​ನ್ನು ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಿದೆ. ಇನ್ನು ಪ್ರಕರಣದಲ್ಲಿ ತೆಲೆ ಮೆರೆಸಿಕೊಂಡ ಉಳಿದ ಆರೋಪಿಗಳಿಗಾಗಿ ಸಿಐಡಿ ಶೋಧ ಕಾರ್ಯ ಮುಂದುವರೆಸಿದೆ.

ಅಶೋಕ್ ನಗರ ಪೊಲೀಸ್ ಠಾಣೆ ಕ್ರೈಂ ನಂಬರ್ 96/22 ಸಂಬಂಧ 788 ಪುಟ, ಕ್ರೈ ನಂಬರ್ 97/22 ಸಂಬಂಧ 1318 ಪುಟ, ಕ್ರೈಂ ನಂಬರ್ 98/22 ರ ಕೇಸ್ ಸಂಬಂಧ 1048 ಪುಟ, ಕ್ರೈಂ ನಂಬರ್ 99/22 ಸಂಬಂಧ 788 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಕ್ರೈಂ ನಂಬರ್ 57/22 ಸಂಬಂಧ 888 ಪುಟಗಳ ಚಾರ್ಜ್ ಶೀಟ್​ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗಿದೆ.

ಬಂಧಿತರ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲು

ಹಗರಣದಲ್ಲಿ ಬಂಧಿತರಾದವರ ಮೇಲೆ ಸಿಐಡಿ ಪೊಲೀಸರಿಂದ ಮತ್ತೊಂದು ಅಸ್ತ್ರ ಪ್ರಯೋಗ ಮಾಡಲಾಗಿದೆ. ಪಿಎಸ್​ಐ ನೇಮಕಾತಿ ಕೇಸ್​ನಲ್ಲಿ ಪಿ.ಸಿ. ಆಕ್ಟ್ ಅಳವಡಿಸಲಾಗಿದೆ. ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಪಿ.ಸಿ. ಆಕ್ಟ್(ಪ್ರಿವೆನ್ಷನ್ ಆಫ್ ಕರಪ್ಷನ್ ಆಕ್ಟ್. ಭ್ರಷ್ಟಾಚಾರ ತಡೆ ಕಾಯ್ದೆ) ಅಳವಡಿಸಲಾಗಿದೆ. ಪಿಎಸ್​ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಡಪಟ್ಟಿದೆ. ಪಿಎಸ್ಐ ನೇಮಕಾತಿಗಾಗಿಯೇ ಪಡೆದಿದ್ದ ಸುಮಾರು 1.5 ಕೋಟಿಗೂ ಹೆಚ್ಚಿನ ಹಣ ಪತ್ತೆಯಾಗಿದೆ. ಹಣದ ಮೂಲ ಪರಿಶೀಲನೆ ಮಾಡಿದಾಗ ಅದು ಲಂಚ ಪಡೆದಿದ್ದು ಎಂದು ದೃಡಪಟ್ಟಿದೆ. ಹೀಗಾಗಿ ಲಂಚ ನೀಡಿದವರು ಹಾಗೂ ಲಂಚ ಪಡೆದವರ ವಿರುದ್ಧ ಹೊಸ ಸೆಕ್ಷನ್ ಅಡಿಯಲ್ಲಿ ಸಹ ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಬಂಧಿತರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿ ತನಿಖೆಯನ್ನು ಮುಂದುವರೆಸಿದ್ದಾರೆ.

ಪಿ.ಸಿ. ಆಕ್ಟ್ ಹಾಕಿರುವ ಹಿನ್ನಲೆ ಕೋರ್ಟ್ ಬದಲಾವಣೆಯಾಗಲಿದೆ. ಇದುವರೆಗೆ ಒಂದನೇ ಎಸಿಎಂಎಂ ನ್ಯಾಯಾಲಯದಲ್ಲಿ ಕೇಸ್ ಇತ್ತು. ಆದರೆ ಇನ್ನು ಮುಂದೆ ಸಿಸಿಎಚ್ 23 ನೇ ನ್ಯಾಯಾಲಯದಲ್ಲಿ ಕೇಸ್ ನಡೆಯಲಿದೆ. ಹಣ ವರ್ಗಾವಣೆ ಹಾಗು ಬೇನಾಮಿ ಆಸ್ತಿ ಪತ್ತೆಯಾದ ಹಿನ್ನೆಲೆ ಇಡಿ ಸಹ ಪಿಎಸ್​ಐ ನೇಮಕಾತಿ ಹಗರಣದ ಕೇಸ್​ನಲ್ಲಿ ಎಂಟ್ರಿಯಾಗಲಿದೆ. ಅಲ್ಲದೆ ಈಗಾಗಲೇ ಕೆಲ ಆರೋಪಿಗಳನ್ನು ಇಡಿ ವಿಚಾರಣೆ ನಡೆಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:41 pm, Wed, 2 November 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?