PSI ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ

ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು.

PSI ನೇಮಕಾತಿ ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಬಂಧನ
ಪಿಎಸ್​ಐ ನೇಮಕಾತಿ ಹಗರಣದ ಆರೋಪಿ ದಿವ್ಯಾ ಹಾಗರಗಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 29, 2022 | 9:50 AM

ಬೆಂಗಳೂರು: ಪೊಲೀಸ್​ ಸಬ್​ಇನ್​ಸ್ಪೆಕ್ಟರ್ ನೇಮಕಾತಿ ಹಗರಣದ (PSI Recruitment Scam) ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ದಿವ್ಯಾರನ್ನು ಪುಣೆಯಿಂದ ಕಲಬುರಗಿಗೆ ಕರೆತರಲಾಗುತ್ತಿದೆ. 10 ಗಂಟೆಗೆ ಅವರು ಕಲಬುರಗಿ ತಲುಪಬಹುದು ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ. ಕಲಬುರಗಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರ ಜ್ಞಾನಜ್ಯೋತಿ ಶಾಲೆಯಲ್ಲಿ ಅಕ್ರಮ ನಡೆದಿತ್ತು ಎಂದು ತನಿಖೆ ವೇಳೆ ತಿಳಿದುಬಂದಿತ್ತು. ಸಿಐಡಿ ಎಸ್​ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡವು ದಿವ್ಯಾ ಹಾಗರಗಿ ಅವರನ್ನು ವಶಕ್ಕೆ ಪಡೆದುಕೊಂಡಿದೆ.

ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪಿಎಸ್​ಐ ಪರೀಕ್ಷೆ ಅಕ್ರಮ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ದಿವ್ಯಾ ಹಾಗರಗಿ ಮನೆ ಮೇಲೆ ದಾಳಿ ನಡೆಸಿದ್ದ ಸಿಐಡಿ ತಂಡವು ತನಿಖೆಗೆ ಅಸಹಕಾರ, ಆರೋಪಿಗಳ ನಾಪತ್ತೆಗೆ ಬೆಂಬಲ ಆರೋಪದ ಮೇಲೆ ರಾಜೇಶ್ ಹಾಗರಗಿಯನ್ನ ಬಂಧಿಸಿದ್ದರು. ನಾಪತ್ತೆಯಾಗಿದ್ದ ದಿವ್ಯಾ ಹಾಗರಗಿಗಾಗಿ ಕಳೆದ 18 ದಿನಗಳಿಂದ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ಈಕೆ ಪ್ರಭಾವಿ ಬಿಜೆಪಿ ಮುಖಂಡೆ. ದಿಶಾ ಕಮಿಟಿಯ ಸದಸ್ಯೆ, ರಾಜ್ಯ ನರ್ಸಿಂಗ್ ಬೋರ್ಡ್ ಸದಸ್ಯೆ ಕೂಡಾ ಆಗಿದ್ದಾರೆ. ಈ ಹಿಂದೆ ಕಲಬುರಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿದ್ದರು. ಕಳೆದ ಫೆಬ್ರುವರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಾ ದಿವ್ಯಾ ಹಾಗರಗಿ ಮನೆಗೆ ಹೋಗಿ ಆತಿಥ್ಯ ಸ್ವೀಕರಿಸಿದ್ದರು.

ದಿವ್ಯಾ ಹಾಗರಗಿಯೇ ತಮ್ಮ ಸಿಬ್ಬಂದಿ ಮೇಲೆ ಒತ್ತಡ ಹೇರಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು. ಪರೀಕ್ಷೆ ಮುಗಿದ ಮೇಲೆ ಒಎಂಆರ್ ಶೀಟ್​ನಲ್ಲಿ ಖಾಲಿ ಬಿಟ್ಟಿರೋ ಪ್ರಶ್ನೆಗಳಿಗೆ ಉತ್ತರ ಬರೆಸಿದ್ದಾರೆ ಎನ್ನುವುದು ಇವರ ವಿರುದ್ಧ ಕೇಳಿ ಬಂದಿದ್ದ ಪ್ರಮುಖ ದೂರು. ಇದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಹತ್ತು ಜನ ಅಭ್ಯರ್ಥಿಗಳು ಪಿಎಸ್​ಐ ಆಗಿ ನೇಮಕವಾಗಿದ್ದರು. ಹತ್ತು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ ಬರೆದಿರೋ ಆರೋಪವಿದೆ. ಈ ಪೈಕಿ ಈಗಾಗಲೇ ನಾಲ್ವರು ಅಭ್ಯರ್ಥಿಗಳು ಮತ್ತು ಮೂರು ಜನ ಕೊಠಡಿ ಮೇಲ್ವಿಚಾರಕಿಯರನ್ನು ಪೊಲೀಸರು ಬಂಧಿಸಿದ್ದಾರೆ.

2021 ರ ಆಗಸ್ಟ್ 3 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆದಿತ್ತು. 2022ರ ಜನವರಿ 19 ರಂದು ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕೂಡಾ ಪ್ರಕಟ ಮಾಡಲಾಗಿತ್ತು. ನೇಮಕಾತಿಯಲ್ಲಿ ಗೋಲ್‌ಮಾಲ್‌ ಆಗಿದೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಗೃಹ ಇಲಾಖೆಯಿಂದ ತನಿಖೆಯನ್ನು ಸಿಐಡಿಗೆ ನೀಡಿತ್ತು.

ವಿಚಾರಣೆಗೆ ಹಾಜರಾಗದ ಶಾಂತಿಬಾಯಿ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಪರೀಕ್ಷೆ ಬರೆದ ಎಲ್ಲ ಅಭ್ಯರ್ಥಿಗಳಿಗೂ ನೋಟಿಸ್​ ಜಾರಿ ಮಾಡಲಾಗಿದೆ. ದಾಖಲೆ ಪರಿಶೀಲನೆಗೆ ಬರುವಂತೆ ನೋಟಿಸ್​ ನೀಡಿದರೂ ಯಾದಗಿರಿ ಜಿಲ್ಲಾ ಪಂಚಾಯಿತಿಯ ಹೊರಗುತ್ತಿಗೆ ನೌಕರನ ಪತ್ನಿ ಶಾಂತಿಬಾಯಿ ವಿಚಾರಣೆಗೆ ಹಾಜರಾಗಿಲ್ಲ. ಸೇಡಂ ತಾಲೂಕಿನ​​ ಕೊನಾಪುರ ತಾಂಡಾ ನಿವಾಸಿ ಏಪ್ರಿಲ್​ 11ರಿಂದ ಶಾಂತಿಬಾಯಿ, ಬಸ್ಯಾ ನಾಯ್ಕ್​ ನಾಪತ್ತೆಯಾಗಿದ್ದಾರೆ. ಕೊನಾಪುರ ತಾಂಡಾಕ್ಕೆ ಸಿಐಡಿ ಅಧಿಕಾರಿಗಳ ಸಿಐಡಿ ತಂಡ ಹೋಗಿದ್ದಾಗಲೂ ಶಾಂತಿಬಾಯಿ ಊರಲ್ಲಿ ಇರಲಿಲ್ಲ. ನಂತರ ಬಸ್ಯಾ ನಾಯ್ಕ್​ಗೆ ಅಧಿಕಾರಿಗಳು ಫೋನ್ ಮಾಡಿ, ದಾಖಲೆ ಪರಿಶೀಲನೆ ಮಾಡುತ್ತೇವೆ ಬನ್ನಿ ಎಂದು ಹೇಳಿದ್ದರು. ವಿಚಾರಣೆಗೆ ಬರುವುದಾಗಿ ಹೇಳಿದ್ದ ದಂಪತಿ ನಂತರ ನಾಪತ್ತೆಯಾಗಿದ್ದಾರೆ.

ಪ್ರಕರಣದ ಆರೋಪಿಗಳಾಗಿರುವ ಜ್ಯೋತಿ ಪಾಟೀಲ್, ಮಂಜುನಾಥ್​ ಮೇಳಕುಂದಿ ಅವರಿಗೆ ಶಾಂತಿಬಾಯಿ ಲಕ್ಷಾಂತರ ರೂಪಾಯಿ ಹಣ ತೆತ್ತು ನೇಮಕವಾಗಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಸಿಐಡಿ ತಂಡ ಜ್ಯೋತಿ ಪಾಟೀಲ್​ರನ್ನು ಬಂಧಿಸಿದ್ದು, ನಾಪತ್ತೆಯಾದ ದಂಪತಿಗೆ ಶೋಧ ಮುಂದುವರಿದಿದೆ.

ಜ್ಯೋತಿ ಪಾಟೀಲ್​ಗೆ ಬೆಂಗಳೂರು ಲಿಂಕ್

ಪಿಎಸ್ಐ ಪರೀಕ್ಷೆ ನೇಮಕಾತಿ ಅಕ್ರಮದ ಒಂದೊಂದೇ ವಿಚಾರಗಳು ಇದೀಗ ಬೆಳಕಿಗೆ ಬರುತ್ತಿವೆ. ಬಂಧಿತ ಜ್ಯೋತಿ ಪಾಟೀಲ್​ ಈ ಹಿಂದೆ ಬೆಂಗಳೂರು ವಿಧಾನಸೌಧದ ಆರ್​ಡಿಪಿಆರ್ ಇಲಾಖೆಯಲ್ಲಿ ಎಸ್​ಡಿಎ ಆಗಿದ್ದರು. ಕಲಬುರಗಿಯವರಿಗೆ ‘ನಿಮ್ಮ ಕೆಲಸ ಯಾವುದೇ ಇಲಾಖೆಯಲ್ಲಿದ್ದರೂ ನಾನು ಮಾಡಿಸಿಕೊಡ್ತೀನಿ’ ಎಂದು ಹೇಳುತ್ತಿದ್ದರು. ಹಣ ಕೊಟ್ಟರೆ ಕೆಲಸ ಮಾಡಿಸಿಕೊಡುತ್ತಿದ್ದರು. ದಿಢೀರ್ ಶ್ರೀಮಂತರಾಗಲು ಹಲವು ಅಕ್ರಮ ನಡೆಸಿದ್ದರು ಎಂಬ ಆರೋಪಗಳು ಕೇಳಿ ಬಂದಿವೆ. ಕಳೆದ ಕೆಲ ದಿನಗಳ ಹಿಂದಷ್ಟೇ ಕಲಬುರಗಿ ಜಿಲ್ಲೆಗೆ ಜ್ಯೋತಿ ಪಾಟೀಲ್ ವರ್ಗಾವಣೆಯಾಗಿದ್ದರು.

ಮಧ್ಯವರ್ತಿಗಳಿಗೆ ಸಂಕಷ್ಟ

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾಗಿರುವ ಮಧ್ಯವರ್ತಿಗಳಿಗೆ ಸಂಕಷ್ಟ ಎದುರಾಗಿದೆ. ಸರ್ಕಾರಿ ನೌಕರಿಯಿದ್ದರೂ ಮಧ್ಯವರ್ತಿ ಕೆಲಸ ಮಾಡಿದ್ದ ಜ್ಯೋತಿ ಪಾಟೀಲ್ ಈಗಾಗಲೇ ಸಿಐಡಿ ಬಲೆಗೆ ಬಿದ್ದಿದ್ದಾರೆ. ಕಿಂಗ್​ಪಿನ್ ಮಂಜುನಾಥ್ ಜೊತೆ ಜ್ಯೋತಿ ಪಾಟೀಲ್ ₹ 50 ಲಕ್ಷಕ್ಕೆ ಡೀಲ್ ಕುದರಿಸಿದ್ದರು. ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಶಾಂತಿಬಾಯಿ ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದರು ಎಂದು ಹೇಳಲಾಗಿದೆ. ಶಾಂತಿಬಾಯಿ ಓಎಂಆರ್​ನಲ್ಲಿ ತುಂಬಿದ್ದ ಉತ್ತರಗಳು 11 ಮಾತ್ರ. ಆದರೆ ಆಕೆಗೆ ಸಿಕ್ಕ ಅಂಕಗಳು 101. ಪರೀಕ್ಷೆ ಮುಗಿದ ಮೇಲೆ ಓಎಂಆರ್​ನಲ್ಲಿ ಕೊಠಡಿ ಮೇಲ್ವಿಚಾರಕಿಯರು ಉತ್ತರ ತುಂಬಿದ್ದರು. ಶಾಂತಿಬಾಯಿ ಓಎಂಆರ್ ಪರಿಶೀಲಿಸಿದಾಗ ಅಕ್ರಮ ಬಯಲಿಗೆ ಬಂದಿದೆ. ಸದ್ಯ ಅಭ್ಯರ್ಥಿ ಶಾಂತಿಬಾಯಿ ಸಹ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ: PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

ಇದನ್ನೂ ಓದಿ: ಗೌರವಯುತವಾಗಿ ಶರಣಾಗಿ, ಇಲ್ಲಾಂದ್ರೆ ಆಸ್ತಿ ಮುಟ್ಟುಗೋಲು ಹಾಕ್ತೇವೆ -ಹಾಗರಗಿಗೆ ಗೃಹ ಸಚಿವ ಎಚ್ಚರಿಕೆ ಮಿಶ್ರಿತ ಕಿವಿಮಾತು

Published On - 6:45 am, Fri, 29 April 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ