ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಇಸ್ಮಾಯಿಲ್​ ಬಂಧನ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ-ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೊಲೀಸ್​ ಕಾನ್ಸ್​ಟೇಬಲ್​ ಇಸ್ಮಾಯಿಲ್ ಜಮಾದಾರ್ ಬಂಧನವಾಗಿದೆ.

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಇಸ್ಮಾಯಿಲ್​ ಬಂಧನ
ಇಸ್ಮಾಯಿಲ್ ಜಮಾದಾರ್​ ಬಂಧಿತ ಆರೋಪಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 12, 2022 | 11:39 AM

ಕಲಬುರಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment) ಭ್ರಷ್ಟಾಚಾರ ಪ್ರಕರಣ ಹಿನ್ನೆಲೆ ಅಕ್ರಮವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ಧಾರವಾಡ ಜಿಲ್ಲಾ ಪೊಲೀಸ್​ ತರಬೇತಿ ಕೇಂದ್ರದಲ್ಲಿ ಕಾನ್ಸ್​ಟೇಬಲ್ ಆಗಿದ್ದ​ ಇಸ್ಮಾಯಿಲ್​ನನ್ನ​ ಬಂಧನ ಮಾಡಲಾಗಿದೆ. ಇನ್​ಸರ್ವೀಸ್​ ಕೋಟಾದಲ್ಲಿ ಇಸ್ಮಾಯಿಲ್ ಜಮಾದಾರ್ ಆಯ್ಕೆಯಾಗಿದ್ದು, ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ ರಾತ್ರಿ ಇಸ್ಮಾಯಿಲ್ ಜಮಾದಾರ್​ನನ್ನ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆ, ಸಿಐಡಿ ಪೊಲೀಸರಿಂದ​ ಸೆರೆ ಹಿಡಿಯಲಾಗಿದೆ. ಇಸ್ಮಾಯಿಲ್ ಜಮಾದಾರ್​ ಸೇರಿ 6 ಜನರ ವಿರುದ್ಧ ಕೇಸ್ ದಾಖಲಾಗಿತ್ತು. ಸಿಐಡಿ ಡಿವೈಎಸ್​ಪಿ ಪ್ರಕಾಶ್​ ರಾಠೋಡ್​ ಠಾಣೆಗೆ ದೂರು ನೀಡಿದ್ದರು. ಕಲಬುರಗಿಯ ಸ್ಟೇಷನ್​ ಬಜಾರ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಸಿ ಇಸ್ಮಾಯಿಲ್ ಗೋವಾದಲ್ಲಿ ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. DAR​ ಕಾನ್ಸ್​ಟೇಬಲ್​ ಇಸ್ಮಾಯಿಲ್ ಜಮಾದಾರ್​ಗಾಗಿ ಸಿಐಡಿ ಶೋಧ ನಡೆಸಿದ್ದರು.

ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಠಿಣ ಶ್ರಮ ವಹಿಸಿದ್ದು, ಆರೋಪಿಗಳ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲದೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳು ನಿರಂತರವಾಗಿ ಅರೆಸ್ಟ್ ಆಗುತ್ತಿದ್ದಾರೆ. ಇನ್ನು ಅಧಿಕಾರಿಗಳ ಹಾರ್ಡ್​ವರ್ಕ್​ನಿಂದ ಬಂಧನಕ್ಕೆ ಒಳಗಾಗಿರುವ ಯಾರಿಗೂ ಜಾಮೀನು ಸಿಗುತ್ತಿಲ್ಲ. ದಿವ್ಯಾ ಹಾಗರಗಿ, ಮಹಾಂತೇಶ್ ಪಾಟೀಲ್ ಸೇರಿ 8 ಆರೋಪಿಗಳ ಜಾಮೀನು ಅರ್ಜಿಗಳು ತಿರಸ್ಕೃತವಾಗಿವೆ. ನಿನ್ನೆ ಜಾಮೀನು ಅರ್ಜಿ ತಿರಸ್ಕೃತಗೊಳಿಸಿ ಕಲಬುರಗಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

ಇದನ್ನೂ ಓದಿ: Janvi Rayala: ‘ರಾಜಾ ರಾಣಿ 2’ ಶೋಗೆ ಹೊಸ ನಿರೂಪಕಿ; ವೇದಿಕೆಗೆ ಎಂಟ್ರಿ ಕೊಟ್ಟ ಜಾನ್ವಿ ರಾಯಲ ಬಗ್ಗೆ ನಿಮಗೆಷ್ಟು ಗೊತ್ತು?

ಕಲಬುರಗಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲು

ನಗರದ ನೊಬೆಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರದಲ್ಲಿ ಇಸ್ಮಾಯಿಲ್ ಖಾದೀರ್ ಅಕ್ರಮವಾಗಿ ಪರೀಕ್ಷೆ ಬರೆದಿದ್ದ. ಕಿಂಗ್ ಪಿನ್ ರುದ್ರಗೌಡ ಪಾಟೀಲ್ ನೀಡಿದ್ದ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆದು ಇನ್ ಸರ್ವಿಸ್ ಕೋಟಾದಲ್ಲಿ ಆಯ್ಕೆಯಾಗಿದ್ದ. ಸದ್ಯ ಧಾರವಾಡದಲ್ಲಿ ಮೀಸಲು ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿರೋ ಇಸ್ಮಾಯಿಲ್, ರುದ್ರಗೌಡ ಪಾಟೀಲ್ ಸೇರಿ ಆರು ಜನರ ವಿರುದ್ಧ ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸಿಐಡಿ ಡಿವೈಎಸ್​ಪಿ ಪ್ರಕಾಶ್ ರಾಠೋಡ್ ರಿಂದ ದೂರು ದಾಖಲಾಗಿದೆ. ಕಳೆದ ಒಂದು ವಾರದಿಂದ ಇಸ್ಮಾಯಿಲ್ ಖಾದೀರ್ ನಾಪತ್ತೆಯಾಗಿದ್ದಾನೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:42 am, Sun, 12 June 22

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ