AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruitment Scam: ಜ್ಞಾನಜ್ಯೋತಿ ಶಾಲೆ ಪುನರಾರಂಭ, ಶ್ರೀಧರ್ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆ

ಸಿಐಡಿಗೆ ಹೆದರಿ ಮೇ 16ರ ರಾತ್ರಿ ಅವರೆಲ್ಲರೂ ಮತ್ತೆ ಬಸವೇಶ್ವರ ನಗರದ ಶ್ರೀಧರ್ ನಿವಾಸಕ್ಕೆ ಹಣ ತಂದಿಟ್ಟು ಹೋಗಿದ್ದರು.

PSI Recruitment Scam: ಜ್ಞಾನಜ್ಯೋತಿ ಶಾಲೆ ಪುನರಾರಂಭ, ಶ್ರೀಧರ್ ನಿವಾಸದಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 18, 2022 | 3:27 PM

Share

ಕಲಬುರ್ಗಿ: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಪಿಎಸ್​ಐ ಹುದ್ದೆಗಳ ನೇಮಕಾತಿ ಹಗರಣದ ಕೇಂದ್ರ ಬಿಂದುವಾಗಿರುವ ನಗರದ ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯು ಮತ್ತೆ ಆರಂಭವಾಗಿದೆ. ಜ್ಞಾನಜ್ಯೋತಿ ಇಂಗ್ಲಿಷ್ ಶಾಲೆಯಲ್ಲಿಯೇ ಪರೀಕ್ಷಾ ಅಕ್ರಮ ನಡೆದಿತ್ತು. ಪ್ರಕರಣ ಸಂಬಂಧ ಈವರೆಗೆ ಸಿಐಡಿ ಪೊಲೀಸರು 32 ಜನರನ್ನು ಬಂಧಿಸಿದ್ದು, ವಿಚಾರಣೆ ಚುರುಕಾಗಿ ನಡೆಯುತ್ತಿದೆ. ಶಾಲೆಯ ಒಡತಿ ದಿವ್ಯಾ ಹಾಗರಗಿ ಮತ್ತು ಅವರ ಪತಿ ರಾಜೇಶ್ ಈಗಾಗಲೇ ಜೈಲಿನಲ್ಲಿದ್ದಾರೆ.

ಮಕ್ಕಳ ಹಿತದೃಷ್ಟಿಯಿಂದ ಶಾಲೆಯನ್ನು ಮತ್ತೆ ತೆರೆಯಲಾಗಿದೆ ಎಂದು ಸಿಬ್ಬಂದಿ ಹೇಳಿದರು. ಸದ್ಯದ ಮಟ್ಟಿಗೆ ದಿವ್ಯಾ ಸೋದರ ಸಂಬಂಧಿಯೊಬ್ಬರು ಶಾಲೆಯ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.

ಶ್ರೀಧರ್ ನಿವಾಸದಲ್ಲಿ ಬೃಹತ್ ಮೊತ್ತದ ಹಣ

ಬೆಂಗಳೂರು: ಹಗರದ ಆರೋಪಿ ಶ್ರೀಧರ್ ನಿವಾಸದಲ್ಲಿ ದೊಡ್ಡಮೊತ್ತದ ಹಣ ಪತ್ತೆಯಾಗಿದೆ. ಮೇ 14ರಂದು ಮೊದಲಬಾರಿ ದಾಳಿ ಮಾಡಿದ್ದ ಸಿಐಡಿ ಅಧಿಕಾರಿಗಳಿಗೆ ₹ 16 ಲಕ್ಷ ನಗದು ಸಿಕ್ಕಿತ್ತು. ಉಳಿದ ಹಣ ಸಿಕ್ಕಿರಲಿಲ್ಲ. ಸಿಐಡಿ ಅಧಿಕಾರಿಗಳಿಗೆ ಶ್ರೀಧರ್ ಬಳಿ ಬೃಹತ್ ಮೊತ್ತದ ಹಣ ಇದೆ ಎನ್ನುವ ಮಾಹಿತಿ ಇತ್ತು. ಮೇ 14ರ ದಾಳಿಯ ನಂತರ ಈ ಸಂಬಂಧ ಮತ್ತಷ್ಟು ಮಾಹಿತಿ ಕಲೆಹಾಕಿದರು.

ಶ್ರೀಧರ್ ಆತನ ಗೆಳೆಯರ ಮೂಲಕ ಹಣವನ್ನು ಬೇರೆಡೆಗೆ ಸಾಗಿಸಿರುವುದು ಬೆಳಕಿಗೆ ಬಂತು. ನಂತರ ಶ್ರೀಧರನ ಗೆಳೆಯರನ್ನು ಒಬ್ಬೊಬ್ಬರಾಗಿ ವಿಚಾರಣೆ ಒಳಪಡಿಸಲಾಯಿತು. ಸಿಐಡಿಗೆ ಹೆದರಿ ಮೇ 16ರ ರಾತ್ರಿ ಅವರೆಲ್ಲರೂ ಮತ್ತೆ ಬಸವೇಶ್ವರ ನಗರದ ಶ್ರೀಧರ್ ನಿವಾಸಕ್ಕೆ ಹಣ ತಂದಿಟ್ಟು ಹೋಗಿದ್ದರು. ಹಣವು ಮನೆ ತಲುಪಿದ ಕೆಲವೇ ಗಂಟೆಗಳ ಅಂತರದಲ್ಲಿ ಸಿಐಡಿ ಅಧಿಕಾರಿಗಳು ಮತ್ತೆ ದಾಳಿ ಮಾಡಿದ್ದರು.

ಈ ವೇಳೆ ಕೊಠಡಿಯೊಂದರಲ್ಲಿ ₹ 1.55 ಕೋಟಿ ನಗದು ಪತ್ತೆಯಾಗಿತ್ತು. ಬ್ರೋಕರ್ ಕೇಶವಮೂರ್ತಿ ನಿವಾಸದಲ್ಲಿ ₹ 30 ಲಕ್ಷ ಸಿಕ್ಕಿತ್ತು. ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು ₹ 2 ಕೋಟಿ ನಗದನ್ನು ಸಿಐಡಿ ವಶಪಡಿಸಿಕೊಂಡಿದೆ.

Published On - 3:27 pm, Wed, 18 May 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ