AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!

PSI Recruitment scam: ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

Divya Hagaragi: ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!
ದಿವ್ಯಾ ದಂಪತಿಗೆ ಜೈಲುಭಾಗ್ಯ, ಜಡ್ಜ್​​ ಮುಂದೆ ಸಿಐಡಿ ಅಧಿಕಾರಿ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ ಇತರೆ ಆರೋಪಿಗಳು!
TV9 Web
| Edited By: |

Updated on:May 09, 2022 | 8:26 PM

Share

ಬೆಂಗಳೂರು/ ಕಲಬುರ್ಗಿ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ (PSI Recruitment scam) ಅಕ್ರಮ ಪ್ರಕರಣದಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಬಂಧಿಸಿರುವ ಬಂಧಿತ 11 ಅಭ್ಯರ್ಥಿಗಳಿಗೆ 14 ದಿನ ನ್ಯಾಯಾಂಗ ಬಂಧನ ನೀಡಲಾಗಿದೆ. ಪ್ರಕರಣದ ಇಬ್ಬರು ಆರೋಪಿಗಳಿಗೆ 4 ದಿನ ಸಿಐಡಿ ಕಸ್ಟಡಿ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಾಯಾಲಯ​ ಆದೇಶ ಮಾಡಿದೆ. ಈ ಮಧ್ಯೆ, ಬೆಂಗಳೂರಿನ ಈ ಆರೋಪಿಗಳು ಜಡ್ಜ್​​ ಮುಂದೆ ತನಿಖಾಧಿಕಾರಿಗಳ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಸಿಐಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಇಂದು 19 ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಖಾಲಿ ಪೇಪರ್​ ಮೇಲೆ ಸಿಐಡಿ ಸಹಿ ಪಡೆದಿದ್ದಾಗಿ ಆರೋಪ ಮಾಡಿರುವ ಆರೋಪಿಗಳು ವಿಚಾರಣೆಯ ವೇಳೆ ಅವಾಚ್ಯವಾಗಿ ತಮ್ಮನ್ನು ನಿಂದಿಸಿರುವುದಾಗಿ ಜಡ್ಜ್​ ಮುಂದೆ ಅಲವತ್ತುಕೊಂಡಿದ್ದಾರೆ. OMR ಮತ್ತು ಕಾರ್ಬನ್ ಕಾಪಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್​ ಠಾಣೆ ಪೊಲೀಸರು ಇವರನ್ನು ಬಂಧಿಸಿದ್ದರು.

ದಿವ್ಯಾ-ರಾಜೇಶ್ ಹಾಗರಗಿ ದಂಪತಿಗೆ ಜೈಲುಭಾಗ್ಯ: ಇನ್ನು ಅತ್ತ ಕಲಬುರಗಿಯಲ್ಲಿ ಬಿಜೆಪಿ ನಾಯಕಿ, ಹಗರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು (Kalaburgi Divya Hagaragi) ನ್ಯಾಯಾಂಗ ವಶಕ್ಕೆ ನೀಡಿ ಕಲಬುರಗಿ 3ನೇ ಜೆಎಂಎಫ್​ಸಿ ನ್ಯಾಯಾಲಯ ಆದೇಶಿಸಿದೆ. ದಿವ್ಯಾ ಹಾಗರಗಿ 11 ದಿನಗಳ ಸಿಐಡಿ ಕಸ್ಟಡಿ ಇಂದಿಗೆ ಅಂತ್ಯವಾದ ಬಳಿಕ, ಜಡ್ಜ್​​​ ಮುಂದೆ ಹಾಜರುಪಡಿಸಿದ್ದ ಸಿಐಡಿ ತನಿಖಾಧಿಕಾರಿಗಳು ದಿವ್ಯಾಳನ್ನ ಹಾರುಪಡಿಸಿದ್ದರು. ತತ್ಫಲವಾಗಿ ದಿವ್ಯಾ ಹಾಗರಗಿಯನ್ನು ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಪಿಎಸ್​ಐ ಪರೀಕ್ಷಾ ಅಕ್ರಮ ಆರೋಪದಡಿ ದಿವ್ಯಾ ಪತಿ ರಾಜೇಶ್ ಈಗಾಗಲೇ (ಏಪ್ರಿಲ್ 18 ರಿಂದ) ಕಲಬುರಗಿ ಜೈಲು ಸೇರಿದ್ದಾನೆ. ಹಾಗಾಗಿ ಪತಿ-ಪತ್ನಿ ಇಬ್ಬರೂ ಜೈಲಲ್ಲಿರಬೇಕಾದ ಸ್ಥಿತಿ ಬಂದೊದಗಿದೆ.

ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟ: 545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿ ಅಕ್ರಮ ಪ್ರಕರಣದ ಬಗ್ಗೆ ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಪ್ರಕರಣದ ಕಿಂಗ್​ಪಿನ್ ‘ಕೈ’​ ಶಾಸಕ ಪ್ರಿಯಾಂಕ್​ ಖರ್ಗೆ ಬಂಟನಾಗಿದ್ದಾನೆ. ಈಗಾಗಲೇ ಆತನನ್ನ ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಅನೇಕ ಅಧಿಕಾರಿಗಳು ಭಾಗಿ ಆಗಿದ್ದಾರೆ. ಅಕ್ರಮದಲ್ಲಿ ಭಾಗಿಯಾದ ಅಧಿಕಾರಿಗಳನ್ನು ಬಂಧಿಸಲಾಗುತ್ತಿದೆ. ಇದು ಪ್ರಾಮಾಣಿಕತೆ ತನಿಖೆಯ ಸಂಕೇತವಾಗಿದೆ. ಶೀಘ್ರದಲ್ಲೇ ತನಿಖೆ ಮುಗಿಸಿ ಮರು ಪರೀಕ್ಷೆ ನಡೆಸಲಾಗುತ್ತದೆ. ಮತ್ತೆ ಈ ರೀತಿ ಆಗದಂತೆ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: PSI Recruitment Scam: ಆರೋಪಿ ದಿವ್ಯಾ ಹಾಗರಗಿ ಕಾಣಿಸಿಕೊಂಡರು ಬಿಜೆಪಿ ಟ್ವೀಟ್​​ನಲ್ಲಿ! ಜೊತೆಗೆ ಯಾರಿದ್ದಾರೆ ನೋಡಿ!

ಇದನ್ನೂ ಓದಿ: ಅನ್ನ ಭಾಗ್ಯ, ತಾಳಿ ಭಾಗ್ಯ ಜನರನ್ನ ದರಿದ್ರ ಮಾಡುತ್ತದೆ; ಅದನ್ನ ಬಂದ್ ಮಾಡಿ: ಸಿಎಂ ಬೊಮ್ಮಾಯಿಗೆ ಶಾಸಕ ಯತ್ನಾಳ್ ಒತ್ತಾಯ

Published On - 8:21 pm, Mon, 9 May 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ