AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಕಿಂಗ್​ಪಿನ್ ರುದ್ರಗೌಡ ಪಾಟೀಲ್ ಸಹಚರ ಬಂಧನ

ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪ್ರಕಾಶ್ ಬಂಧಿತ ಆರೋಪಿ. ಪ್ರಕಾಶ್ ರುದ್ರಗೌಡ ಪಾಟೀಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ನೀಡುವುದು ಮತ್ತು ಹಣ ಪಡೆಯುವ ಕೆಲಸ ಮಾಡುತ್ತಿದ್ದ.

ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣ; ಕಿಂಗ್​ಪಿನ್ ರುದ್ರಗೌಡ ಪಾಟೀಲ್ ಸಹಚರ ಬಂಧನ
ಸಿಐಡಿ ಅಧಿಕಾರಿಗಳು ಕಿಂಗ್ಪಿನ್ ರುದ್ರಗೌಡ ಪಾಟೀಲ್ ಸಹಚರ ಪ್ರಕಾಶ್​ನನ್ನು ಅರೆಸ್ಟ್ ಮಾಡಿದ್ದಾರೆ
TV9 Web
| Edited By: |

Updated on:May 28, 2022 | 9:51 AM

Share

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ (PSI Recruitment Scam) ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಪ್ರಕರಣದಲ್ಲಿ ಈಗಾಗಲೇ ಹಲವರು ಬಂಧನಕ್ಕೆ ಒಳಗಾಗಿದ್ದಾರೆ. ಇನ್ನು ನಿನ್ನೆ (ಮೇ 27) ಪ್ರಕರಣದ ಕಿಂಗ್​ಪಿನ್​ ಆಗಿರುವ ರುದ್ರಗೌಡ ಪಾಟೀಲ್ ಸಹಚರನನ್ನು ಸಿಐಡಿ (CID) ಅಧಿಕಾರಿಗಳು ಬಂಧಿಸಿದ್ದಾರೆ. ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ಪ್ರಕಾಶ್ ಬಂಧಿತ ಆರೋಪಿ. ಪ್ರಕಾಶ್ ರುದ್ರಗೌಡ ಪಾಟೀಲ್ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಅಭ್ಯರ್ಥಿಗಳಿಗೆ ಬ್ಲೂಟೂತ್, ಎಲೆಕ್ಟ್ರಾನಿಕ್ ಡಿವೈಸ್ ನೀಡುವುದು ಮತ್ತು ಹಣ ಪಡೆಯುವ ಕೆಲಸ ಮಾಡುತ್ತಿದ್ದ.

ಬೆಂಗಳೂರಿನಲ್ಲಿ ಇಂದು ಧರಣಿ: ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಬಯಲಾದ ಬೆನ್ನಲ್ಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಮರು ಪರೀಕ್ಷೆ ನಡೆಸುವುದಾಗಿ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಆದರೆ ಈ ನಿರ್ಧಾರವನ್ನು ವಿರೋಧಿಸಿ ಅಭ್ಯರ್ಥಿಗಳು ಈಗಾಗಲೇ ಪ್ರತಿಭಟನೆ ನಡೆಸಿದ್ದರು. ಇಂದು ಕೂಡಾ ಮರು ಪರೀಕ್ಷೆ ಆದೇಶ ರದ್ದುಗೊಳಿಸುವಂತೆ ಆಗ್ರಹಿಸಿ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಧರಣಿ ನಡೆಸಲಿದ್ದಾರೆ.

ಇದನ್ನೂ ಓದಿ: Vijay Singla: ಭ್ರಷ್ಟಾಚಾರ ಪ್ರಕರಣ; ಪಂಜಾಬ್ ಮಾಜಿ ಸಚಿವ ವಿಜಯ್ ಸಿಂಗ್ಲಾಗೆ 14 ದಿನ ನ್ಯಾಯಾಂಗ ಬಂಧನ

ಇದನ್ನೂ ಓದಿ
Image
Faf du Plessis: ಪಂದ್ಯ ಮುಗಿದ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಏನು ಹೇಳಿದ್ರು ಗೊತ್ತೇ?
Image
Vijay Singla: ಭ್ರಷ್ಟಾಚಾರ ಪ್ರಕರಣ; ಪಂಜಾಬ್ ಮಾಜಿ ಸಚಿವ ವಿಜಯ್ ಸಿಂಗ್ಲಾಗೆ 14 ದಿನ ನ್ಯಾಯಾಂಗ ಬಂಧನ
Image
ಇಂದು ಹು-ಧಾ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ: ಮಧ್ಯಾಹ್ನ 1.30ಕ್ಕೆ ಕೈ ಎತ್ತುವ ಮೂಲಕ ಮೇಯರ್ ಆಯ್ಕೆ ಪ್ರಕ್ರಿಯೆ
Image
‘RRR ಚಿತ್ರದಲ್ಲಿ ಇರೋದು ಸಲಿಂಗಕಾಮದ ಕಥೆ’: ಈ ರೀತಿ ಆರೋಪ ಮಾಡಿದ್ದು ಯಾರು?

ಕೆಲವರು ನಾಪತ್ತೆ: ಪಿಎಸ್​ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ ಹೆಸರಿರುವ ಕೆಲವರು ನಾಪತ್ತೆಯಾಗಿದ್ದು, ನಾಪತ್ತೆಯಾದ ಅಭ್ಯರ್ಥಿಗಳಿಗಾಗಿ ಸಿಐಡಿ ಶೋಧ ಕಾರ್ಯ ಮುಂದುವರೆದಿದೆ. ಬಂಧಿತ ಕಿಂಗ್​ಪಿನ್​ಗಳು ಹಲವು ಅಭ್ಯರ್ಥಿಗಳ ಹೆಸರು ಹೇಳಿದ್ದರು. ಪರೀಕ್ಷಾ ಅಕ್ರಮಕ್ಕೆ ನೆರವು ನೀಡಿದ್ದಾಗಿ ಕಿಂಗ್​ಪಿನ್​ಗಳು ಹೇಳಿದ್ದರು. ಕಿಂಗ್​ಪಿನ್​ಗಳು ನೀಡಿರುವ ಮಾಹಿತಿ ಮೇರೆಗೆ ಪೊಲೀಸರು ಶೋಧ ಮಾಡಲಾಗುತ್ತಿದೆ. ಕಳೆದ 1 ತಿಂಗಳಿಂದ ಅಭ್ಯರ್ಥಿ ಶಾಂತಿಬಾಯಿ ನಾಪತ್ತೆಯಾಗಿದ್ದು, PSI ಪರೀಕ್ಷೆಯಲ್ಲಿ ಅಕ್ರಮವೆಸಗಿ ಶಾಂತಿಬಾಯಿ ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:42 am, Sat, 28 May 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್