AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSI Recruiment Scam: ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿಲ್ಲ; ಪ್ರಿಯಾಂಕ್ ಖರ್ಗೆ

ಅಕ್ರಮದಲ್ಲಿ ಭಾಗಿಯಾದವರನ್ನು ಹೆಸರಿಸಲು ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದರು

PSI Recruiment Scam: ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿಲ್ಲ; ಪ್ರಿಯಾಂಕ್ ಖರ್ಗೆ
ಶಾಸಕ ಪ್ರಿಯಾಂಕ್ ಖರ್ಗೆ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 13, 2022 | 12:15 PM

Share

ಕಲಬುರಗಿ: ಪೊಲೀಸ್​ ಸಬ್ ಇನ್​ಸ್ಪೆಕ್ಟರ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ನಡೆಸುತ್ತಿರುವ ತನಿಖೆ ಸರಿಯಾದ ದಿಕ್ಕಿನಲ್ಲಿ ಹೋಗುತ್ತಿಲ್ಲ. ಅಕ್ರಮದಲ್ಲಿ ಭಾಗಿಯಾದವರನ್ನು ಹೆಸರಿಸಲು ಅಧಿಕಾರಿಗಳು ಹಿಂಜರಿಯುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದರು. ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿದರು.

ಕರ್ನಾಟಕ ರಾಜಕಾರಣದ ಬಗ್ಗೆ ಇನ್ನಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

545 ಪಿಎಸ್​ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಕುರಿತು ವಿಚಾರಣೆ ಸಂದರ್ಭದಲ್ಲಿ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ‌ಸಿಐಡಿ ಅಧಿಕಾರಿಗಳಿಗೆ ಸವಾಲು ಹಾಕಿದ್ದಾನೆ. ಈ ಅಕ್ರಮದಲ್ಲಿ ಯಾರೆಲ್ಲ ಇದ್ದಾರೆಂದು ಹೇಳಲು ಸಿದ್ಧವಾಗಿದ್ದಾನೆ. ಆದರೆ ತನಿಖೆ ಮಾಡಲು ಸರ್ಕಾರಕ್ಕೆ ಧೈರ್ಯ ಇದೆಯೇ? ಹೆಸರು ಬಹಿರಂಗಪಡಿಸಲು ಸರ್ಕಾರ ಹಿಂದೇಟು ಹಾಕುತ್ತಿರುವುದೇಕೆ? ಅಕ್ರಮದಲ್ಲಿ ಭಾಗಿಯಾದ ಮಹಾ ಕಿಂಗ್​ಪಿನ್​ಗಳನ್ನು ಕರೆಸಿ ಏಕೆ ವಿಚಾರಿಸುತ್ತಿಲ್ಲ ಎಂದು ಪ್ರಶ್ನಿಸಿದರು. ಹಗರಣದ ಬಗ್ಗೆ ಮಾಹಿತಿ ನೀಡಲು ಯತ್ನಿಸಿದ ನನಗೆ ಮೂರು ಬಾರಿ ನೊಟೀಸ್ ನೀಡಿದ್ದಾರೆ. ಆದರೆ ಬಿಜೆಪಿ ಶಾಸಕರಿಗೆ, ಸಚಿವರಿಗೆ ಎಷ್ಟು ನೋಟಿಸ್ ನೀಡಲಾಗಿದೆ ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯ ಬಂಧವಾಗಿದೆ. ಆದರೂ ಆಕೆಯ ಹುದ್ದೆಯನ್ನು ಸರ್ಕಾರ ಹಿಂಪಡೆದಿಲ್ಲ. ದಿಶಾ ಸಮಿತಿ, ರಾಜ್ಯ ನರ್ಸಿಂಗ್ ಕೌನ್ಸಿಲ್ ಸದಸ್ಯತ್ವವನ್ನು ದಿವ್ಯಾಗೆ ನೀಡಲಾಗಿದೆ. ಈ ಸ್ಥಾನಮಾನ ಹಿಂಪಡೆಯಲು ಸರ್ಕಾರ ಮುಂದಾಗಿಲ್ಲ. ಪ್ರಕರಣದಲ್ಲಿ ಬಂಧಿತರಾದ ಹಲವು ಅಧಿಕಾರಿಗಳನ್ನು ಸರ್ಕಾರ ಅಮಾನತು ಮಾಡಿದೆ. ಆದರೆ ದಿವ್ಯಾ ಹಾಗರಗಿಗೆ ಕೊಟ್ಟಿರುವ ಸ್ಥಾನಮಾನವನ್ನು ಏಕೆ ಹಿಂಪಡೆದಿಲ್ಲ. ಸರ್ಕಾರದ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದರು.

ಹಗರಣದಲ್ಲಿ ಈವರೆಗೆ ಬಂಧನವಾಗಿರುವುದು ಕೇವಲ ಕಿಂಗ್​ಪಿನ್​ಗಳು ಮತ್ತು ಮಧ್ಯವರ್ತಿಗಳು ಮಾತ್ರ. ಆದರೆ ಮಹಾಕಿಂಗ್​ಪಿನ್​ಗಳು ಮತ್ತು ಸೂತ್ರಧಾರರು ಬೆಂಗಳೂರಿನಲ್ಲಿಯೇ ಇದ್ದಾರೆ. ಯಾರು ಯಾರಿಗೆ ದುಡ್ಡು ಕೊಟ್ಟಿದ್ದಾರೆ ಎನ್ನುವ ಬಗ್ಗೆ ಗಂಭೀರ ತನಿಖೆ ನಡೆಯಬೇಕಿದೆ. ಸರಿಯಾದ ರೀತಿಯಲ್ಲಿ ತನಿಖೆ ನಡೆದರೆ ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ಸಿಕ್ಕಿ ಬೀಳುತ್ತಾರೆ. ಮೊದಲ ಪತ್ರಿಕೆಯ ಪರೀಕ್ಷೆ ಅಕ್ರಮದ ತನಿಖೆಯನ್ನು ಸಮರ್ಪಕ ರೀತಿಯಲ್ಲಿ ಮಾಡಬೇಕಿದೆ ಎಂದು ಒತ್ತಾಯಿಸಿದರು.

Published On - 12:15 pm, Fri, 13 May 22