PSI Recruitment Scam: ಪರೀಕ್ಷಾ ಅಕ್ರಮ -ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್, ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ ಪ್ರೊ. ನಾಗರಾಜ್ ಅಮಾನತು
PSI Recruitment Scam: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ
ಕಲಬುರಗಿ: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ (PSI Recruitment Scam) ನಡೆದಿದೆ ಎನ್ನಲಾದ ಪರೀಕ್ಷಾ ಅಕ್ರಮದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ಕಲಬುರಗಿಯ ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. suspend). ಬೆರಳಚ್ಚು ವಿಭಾಗದ ಡಿವೈಎಸ್ಪಿ ಆರ್.ಆರ್. ಹೊಸಮನಿ (RR Hosamani DySP Fingerprints) ಮತ್ತು ಕಲಬುರಗಿ ಮಹಿಳಾ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ ಸಾಗರ್ ಮನೆಯ ಹಾದಿಹಿಡಿದ ಭ್ರಷ್ಟ ಆರೋಪಿಗಳು. ಇನ್ಸ್ಪೆಕ್ಟರ್ ದಿಲೀಪ್ (Dileep sagar PI Women Police Station incharge of Jnana jyothi college) ಅಕ್ರಮ ನಡೆಯುವಾಗ ಜ್ಞಾನಜ್ಯೋತಿ ಕಾಲೇಜಿನಲ್ಲಿ ಪರೀಕ್ಷಾ ಕರ್ತವ್ಯದಲ್ಲಿದ್ದರು.
ಮೈಸೂರು ವಿವಿ ಮೌಲ್ಯಮಾಪನ ಕುಲಸಚಿವ, ಬಂಧಿತ ಪ್ರೊ. ನಾಗರಾಜ್ ಅಮಾನತು ಇನ್ನು, ಅಸಿಸ್ಟೆಂಟ್ ಪ್ರೊಫೆಸರ್‌ಗಳ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣದಲ್ಲಿ ಪ್ರೊ. ಹೆಚ್. ನಾಗರಾಜ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರು ಆದೇಶ ಹೊರಡಿಸಿದ್ದಾರೆ. 2022ರ ಏಪ್ರಿಲ್ 27ರಿಂದ ಪೂರ್ವಾನ್ವಯವಾಗುವಂತೆ ಸಸ್ಪೆಂಡ್ ಮಾಡಲಾಗಿದೆ. ಶ್ರೀಯುತರು ಮೈಸೂರು ವಿವಿಯ ಭೂಗೋಳಶಾಸ್ತ್ರ ವಿಭಾಗದ ಪ್ರೊಫೆಸರ್ ಆಗಿದ್ರು.
ಕರ್ನಾಟಕ ವಿವಿಯ ಮೌಲ್ಯಮಾಪನ ಕುಲಸಚಿವರಾಗಿ ಪ್ರೊ. ನಾಗರಾಜ್ ನೇಮಕಗೊಂಡಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ನಾಗರಾಜ್ ನನ್ನು ಕುಲಸಚಿವ ಹುದ್ದೆಯಿಂದ ಬಿಡುಗಡೆಗೊಳಿಸಿ, ಅಮಾನತು ಆದೇಶ ಹೊರಡಿಸಲಾಗಿದೆ. ಪ್ರಕರಣದ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಆರೋಪಿ ಪ್ರೊ. ಹೆಚ್. ನಾಗರಾಜ್‌ನನ್ನು ಪೊಲೀಸರು ಬಂಧಿಸಿದ್ದರು. ಹೀಗಾಗಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತು ಆದೇಶ ನೀಡಲಾಗಿದೆ.
ಇದನ್ನೂ ಓದಿ: ಕೊರೊನಾ ಕಾಟದಿಂದ ಎರಡು ವರ್ಷದ ಬಳಿಕ ಬೆಳಗಾವಿಯಲ್ಲಿ ಮನೆಮಾಡಿದ ಶಿವಾಜಿ ಜಯಂತಿ ಸಂಭ್ರಮ