PSI Recruitment Scam: ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಹಗರಣ (PSI Recruitment Scam) ಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಮುಖ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಮತ್ತು ಮಹಾಂತೇಶ್ ಪಾಟೀಲ್ಗೆ ಕಲಬುರಗಿ ಹೈಕೋರ್ಟ್ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಜಿಲ್ಲೆಯ ಚೌಕ್ ಠಾಣೆಯಲ್ಲಿ ದಾಖಲಾಗಿದ್ದ ಕೇಸ್ನಲ್ಲಿ ಜಾಮೀನು ನೀಡಲಾಗಿದೆ. ಪ್ರಕರಣದಲ್ಲಿ ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ್ನು ಈ ಹಿಂದೆ ಅರೆಸ್ಟ್ ಮಾಡಲಾಗಿತ್ತು. ಸಹಚರರಿಬ್ಬರಿಗ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದ. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್ಗೆ ಭೇಟಿ ಮಾಡಿಸುತ್ತಿದ್ದರು.
ಎಸ್ಐ ಹಗರಣದ ಪ್ರಮುಖ ಆರೋಪಿಗೆ ಜಾಮೀನು
ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಗೆ ಹಾಗೂ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದ ಅಭ್ಯರ್ಥಿಗೆ ನ್ಯಾಯಾಲಯವು ಇತ್ತೀಚೆಗೆ ಜಾಮೀನು ಮಂಜೂರು ಮಾಡಿದೆ. ಪಿಎಸ್ಐ ಹಗರಣದ ಎ1 ಜಾಗೃತ್ ಹಾಗೂ ಮಹಿಳಾ ಕೋಟಾದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದ ರಚನಾಗೆ ಜಾಮೀನು ಸಿಕ್ಕಿದೆ. ಆರೋಪಿಗಳ ಪರ ವಕೀಲ ಶ್ಯಾಮ್ಸುಂದರ್ ಅವರು ವಾದ ಮಾಡಿದರು.
ಇದನ್ನೂ ಓದಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ; ಕಿಂಗ್ ಪಿನ್ ರುದ್ರಗೌಡ ಪಾಟೀಲ್ನ ಮತ್ತಿಬ್ಬರು ಸಹಚರರು ಅರೆಸ್ಟ್
545 ಪಿಎಸ್ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ (PSI Recruitment Scam) ಸಂಬಂಧಿಸಿದಂತೆ 17ನೇ ಆರೋಪಿ ರಚನಾಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ ಪಡೆದಿತ್ತು. ನೇಮಕಾತಿಯ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ರಚನಾ ಹನುಮಂತ್ ಮೊದಲ ರ‍್ಯಾಂಕ್ ಪಡೆದಿದ್ದಳು.
ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ರಚನಾ ಮೂರು ತಿಂಗಳಿನಿಂದ ನಾಪತ್ತೆಯಾಗಿದ್ದಳು. ಸಿಐಡಿ ತನಿಖೆಯಲ್ಲಿ ರಚನಾ 30 ಲಕ್ಷ ನೀಡಿದ್ದರೆಂಬ ಮಾಹಿತಿ ಬಹಿರಂಗವಾಗಿತ್ತು. ಈ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಪ್ರಕರಣ ದಾಖಲಾಗಿತ್ತು. ರಚನಾ ಸರ್ಕಾರದ ಮರುಪರಿಕ್ಷಾ ಆದೇಶದ ವಿರುದ್ಧವೂ ಪ್ರತಿಭಟನೆಯಲ್ಲಿಯೂ ಭಾಗಿಯಾಗಿದ್ದಳು. ಯಾವಾಗ ತನ್ನ ವಿರುದ್ಧ ಎಫ್ಐಆರ್ ದಾಖಲಾಯ್ತೋ ಅಂದಿನಿಂದ ರಚನಾ ನಾಪತ್ತೆಯಾಗಿದ್ದಳು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:55 pm, Thu, 15 December 22