AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಪ್​ನಲ್ಲಿ ಹಣ ಅಡಗಿಸಿಟ್ಟಿದ್ದ ಎಂಜಿನಿಯರ್ ಶಾಂತಗೌಡ ಬಿರಾದಾರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಲೋಕೋಪಯೋಗಿ ಇಲಾಖೆಯ ಜೇವರ್ಗಿ ಎಂಜಿನಿಯರ್ ಶಾಂತಗೌಡ ಬಿರಾದಾರ್ ಜಾಮೀನು ಅರ್ಜಿಯನ್ನು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ.

ಪೈಪ್​ನಲ್ಲಿ ಹಣ ಅಡಗಿಸಿಟ್ಟಿದ್ದ ಎಂಜಿನಿಯರ್ ಶಾಂತಗೌಡ ಬಿರಾದಾರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಪೈಪ್​ನಲ್ಲಿ ಹಣ ಅಡಗಿಸಿಟ್ಟಿದ್ದ ಪಿಡಬ್ಲ್ಯುಡಿ ಎಂಜಿನಿಯರ್ ಶಾಂತಗೌಡ ಬಿರಾದಾರ್
TV9 Web
| Edited By: |

Updated on: Dec 01, 2021 | 7:31 PM

Share

ಕಲಬುರಗಿ: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿಯ ವೇಳೆ ಅಪಾರ ಪ್ರಮಾಣದ ನಗದು ಮತ್ತು ಆಸ್ತಿ ದಾಖಲೆಗಳು ಪತ್ತೆಯಾಗಿದ್ದ ಲೋಕೋಪಯೋಗಿ ಇಲಾಖೆಯ ಜೇವರ್ಗಿ ಎಂಜಿನಿಯರ್ ಶಾಂತಗೌಡ ಬಿರಾದಾರ್ ಜಾಮೀನು ಅರ್ಜಿಯನ್ನು ಕಲಬುರಗಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ ತಿರಸ್ಕರಿಸಿದೆ. ರಾಜ್ಯದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದ ಪೈಪ್​ನಲ್ಲಿ ನೋಟುಗಳ ಪತ್ತೆಯಾಗಿದ್ದು ಸಹ ಇವರ ಮನೆಯಲ್ಲಿಯೇ. ದಾಳಿ ಸಮಯದಲ್ಲಿ ಸಹಕಾರ ನೀಡಲಿಲ್ಲವೆಂಬ ಆರೋಪದ ಮೇಲೆ ಶಾಂತಗೌಡ ಬಿರಾದರ್ ಅವರನ್ನು ಎಸಿಬಿ ಬಂಧಿಸಿತ್ತು. ಜಾಮೀನು ನೀಡುವಂತೆ ಕೋರಿ ಶಾಂತಗೌಡ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ.24ರಂದು ಶಾಂತಗೌಡ ಅವರ ಮನೆ ಮತ್ತು ಕಚೇರಿ ಎಸಿಬಿ ದಾಳಿ ನಡೆಸಿತ್ತು. ಈ ವೇಳೆ ₹55 ಲಕ್ಷ ನಗದು ಸೇರಿ ₹4.5 ಕೋಟಿ ಮೌಲ್ಯದ ಆಸ್ತಿಯ ವಿವರಗಳು ಸಿಕ್ಕಿದ್ದವು.

ಕಲಬುರಗಿ ನಗರದ ಗುಬ್ಬಿ ಕಾಲೊನಿಯಲ್ಲಿದ್ದ ಪಿಡಬ್ಲೂಡಿ ಎಂಜಿನಿಯರ್ ಶಾಂತಗೌಡ ಬಿರಾದಾರ್ ಅವರ ಮನೆಯ ಬಚ್ಚಲುಮನೆ ಮತ್ತು ವಾಶ್ ಬೇಶನ್ ಪೈಪ್​ನಲ್ಲಿ ದುಡ್ಡಿನ ಕಂತೆ ಅಡಗಿಸಿಟ್ಟಿರುವುದು ಎಸಿಬಿ ಅಧಿಕಾರಿಗಳ ದಾಳಿ ವೇಳೆ ಬೆಳಕಿಗೆ ಬಂದಿತ್ತು. ಮನೆಯ ಎರಡನೇ ಪ್ಲೋರ್​ನಲ್ಲಿ ವಾಸವಾಗಿರುವ ಶಾಂತಗೌಡ ಮತ್ತು ಪುತ್ರ, ಎಸಿಬಿ ಅಧಿಕಾರಿಗಳು ಬರುತ್ತಿದ್ದಂತೆ ಹಣದ ಕಂತೆಯನ್ನು ಪೈಪ್​ಗೆ ಹಾಕಿದ್ದರು. ಪೈಪ್​ನಲ್ಲಿಯೇ ಐದು ಲಕ್ಷ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿತ್ತು. ಮನೆ, ಕಚೇರಿ ಮತ್ತು ಯಡ್ರಾಮಿಯಲ್ಲಿರುವ ತೋಟದ ಮನೆಯ ಮೇಲೆಯೂ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದರು.

ಕಲಬುರಗಿ ಗುಬ್ಬಿ ಕಾಲೋನಿಯಲ್ಲಿ ಮೂರಂತಸ್ತಿನ ಭವ್ಯ ಬಂಗಲೆ, ವಿವಿ ರಸ್ತೆಯಲ್ಲಿ ಎರಡು ನಿವೇಶನ, ಯಡ್ರಾಮಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ 40 ಎಕರೆ ಜಮೀನು, ಹಂಗರಗಾ ಗ್ರಾಮದಲ್ಲಿ ಮೂರು ಮನೆಗಳು ಸೇರಿ ಕೋಟಿಕೋಟಿ ರೂಪಾಯಿ ಮೊತ್ತದ ಆಸ್ತಿ ಪತ್ತೆಯಾಗಿತ್ತು. ಬೆಂಗಳೂರಿನಲ್ಲೂ ಆಸ್ತಿ ಇರುವ ಮಾಹಿತಿ ಸಿಕ್ಕಿದ್ದು, ಎರಡು ಕಾರ್, ಎರಡು ಬೈಕ್ ಸೇರಿ ವಾಹನಗಳು ಪತ್ತೆಯಾಗಿದ್ದವು.

ಇದನ್ನೂ ಓದಿ: ಪೈಪ್ ಮಾಸ್ಟರ್‌ ಶಾಂತಗೌಡ ಬಿರಾದರ್​ನ 14 ಎಕರೆ ಫಾರ್ಮ್​ಹೌಸ್​ ಹೇಗಿದೆ ಗೊತ್ತಾ? ವಿಡಿಯೋ ನೋಡಿ ಇದನ್ನೂ ಓದಿ: ಕಲಬುರಗಿ ಪಿಡಬ್ಲೂಡಿ ಜೆಇ ಶಾಂತಗೌಡ ಬಿರಾದರ್ ಮನೆಯ ಪೈಪ್​ನಲ್ಲಿ ಎಸಿಬಿ ಅಧಿಕಾರಿಗಳಿಗೆ ಕಂತೆ ಕಂತೆ ಹಣ ಸಿಕ್ಕಿದ್ದು ಹೀಗೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್