AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ 10 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಆಹುತಿ: ಸಿಎಂ ಸಿದ್ದರಾಮಯ್ಯ

ಭೀಮಾ, ಕೃಷ್ಣಾ ನದಿ ಅಬ್ಬರಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿ ಹೋಗಿದೆ. ಜನರ ಬದುಕು ಪ್ರವಾಹದಿಂದ ಬೀದಿಗೆ ಬಿದ್ದಿದೆ. ಹೀಗಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಸಿದ್ದರಾಮಯ್ಯ, ಕಲಬುರಗಿ ಡಿಸಿ ಕಚೇರಿಯಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಳೆ ಹಾನಿ ಮತ್ತು ಸಾವು ನೋವುಗಳ ಬಗ್ಗೆ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮಳೆಗೆ 10 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಆಹುತಿ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಪ್ರಸನ್ನ ಹೆಗಡೆ|

Updated on:Oct 01, 2025 | 1:44 PM

Share

ಕಲಬುರಗಿ, ಸೆಪ್ಟೆಂಬರ್​ 30: ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಈಗಾಗಲೇ 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಂಟಿ ಸರ್ವೆ ನಡೆದಿದೆ. ಜಮೀನುಗಳಲ್ಲಿ ನೀರು ನಿಂತಿದ್ದರಿಂದ ಇನ್ನುಳಿದ ಜಂಟಿ ಸರ್ವೆ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ. ಕಲಬುರಗಿ ಡಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭೀಮಾ ಪ್ರವಾಹದಿಂದ 3 ಜಿಲ್ಲೆಗಳ 117 ಗ್ರಾಮಗಳಲ್ಲಿ ತೊಂದರೆ ಆಗಿದೆ. ಪ್ರಾಥಮಿಕ ಅಂದಾಜಿನಂತೆ 9,60,578 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ ಆಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕಾಳಜಿ ಕೇಂದ್ರಗಳಲ್ಲಿ 10 ಸಾವಿರ ಜನ

ಭೀಮಾ ಪ್ರವಾಹದಿಂದ ಬಹಳ ತೊಂದರೆ ಆಗಿದೆ. ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ 80 ಕಾಳಜಿ ಕೇಂದ್ರ ಓಪನ್ ಮಾಡಲಾಗಿದ್ದು, 10 ಸಾವಿರಕ್ಕೂ ಹೆಚ್ಚು ಜನರು ಇಲ್ಲಿ ಆಶ್ರಯ ಪಡೆದಿದ್ದಾರೆ. ರಾಜ್ಯದಲ್ಲಿ ಮುಂಗಾರು ಮಳೆಗೆ 52 ಜನ ಬಲಿಯಾಗಿದ್ದು, ಈವರೆಗೆ ಮಳೆಯಿಂದ ಮೃತಪಟ್ಟ ಎಲ್ಲರಿಗೂ ಪರಿಹಾರ ಹಣ ನೀಡಲಾಗಿದೆ. 422 ಜಾನುವಾರಗಳು ಮೃತಪಟ್ಟಿದ್ದು, ಇದಕ್ಕೂ ಪರಿಹಾರ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಮಾನದಿ ಭೋರ್ಗರೆತಕ್ಕೆ ಕಲ್ಯಾಣ ಕರ್ನಾಟಕ ತತ್ತರ: ಸಿಎಂ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ

ಪ್ರವಾಹದಿಂದ 547 ಮನೆಗಳಿಗೆ ಪೂರ್ಣ ಪ್ರಮಾಣದಲ್ಲಿ ಹಾನಿಯಾಗಿದ್ದು, 1.2 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಹಾನಿಯಾದ ಮನೆಗಳಿಗೆ ನೀಡಲು ಇಲ್ಲಿವರೆಗೆ 23 ಕೋಟಿ ಖರ್ಚು ಮಾಡಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ. ಅಲ್ಲದೆ, ಜಂಟಿ ಸರ್ವೆ ಮುಗಿದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡಲು ಸಿಎಂ ಇದೇ ವೇಳೆ ಅಧಿಕಾರಿಗಳಿಗೆ ಸೂಚಿಸಿದ್ರು. NDRF ಮಾರ್ಗಸೂಚಿಯಂತೆ 1 ಹೆಕ್ಟೇರ್‌ ಖುಷ್ಕಿ ಜಮೀನಿಗೆ 8.5 ಸಾವಿರ, ನೀರಾವರಿಗೆ ಒಂದು ಹೆಕ್ಟೇರ್‌ಗೆ 17 ಸಾವಿರ ರೂ. ಪರಿಹಾರ ನೀಡಬೇಕಿದೆ. ಖುಷ್ಕಿ ಜಮೀನು ಮತ್ತು ನೀರಾವರಿಗೆ ಹೆಚ್ಚುವರಿಯಾಗಿ 8.5 ಸಾವಿರ ಕೊಡಬೇಕೆಂದು ರಾಜ್ಯ ಸರ್ಕಾರ ನಿರ್ಧರಿಸಿರೋದಾಗಿ ಸಿಎಂ ತಿಳಿಸಿದ್ದಾರೆ.

ಸೇತುವೆ, ರಸ್ತೆ, ಬ್ಯಾರೇಜ್‌, ಶಾಲೆ, ಟ್ರಾನ್ಸ್‌ಫಾರ್ಮರ್‌ಗಳೂ ಮಳೆಯಿಂದ ಹಾಳಾಗಿವೆ. ಸಮೀಕ್ಷೆ ಮುಗಿದ ಬಳಿಕ ಇವುಗಳನ್ನ ದುರಸ್ತಿ ಮಾಡುತ್ತೇವೆ. ಕೇಂದ್ರ ಸರ್ಕಾರ ಸಹ ಪ್ರವಾಹಕ್ಕೆ ಸ್ಪಂದಿಸಬೇಕು. ಸರ್ವೆ ಮುಗಿದ ಬಳಿಕ ಹೆಚ್ಚು ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಿದ್ದು, ಪ್ರವಾಹದಿಂದ ಮನೆಗಳು ಮುಳುಗಿದ್ರೆ ತಕ್ಷಣವೇ 5 ಸಾವಿರ ನೀಡುತ್ತಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ಸಿಎಂ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:49 pm, Tue, 30 September 25

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?