ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ

ಸುರಪುರ ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನ ಹಿನ್ನೆಲೆ ಅಂತಿಮ ದರ್ಶನ ಪಡೆಯಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಗೆ ಆಗಮಿಸಿದರು. ವಿಮಾನ ನಿಲ್ದಾಣದ ಬಳಿ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಸಾಧ್ಯತೆ ಬಗ್ಗೆ ಮಾತನಾಡಿದ ಖರ್ಗೆ, ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸುಳ್ಳು, ನೇರ ಮತದಾನ ನಡೆಯಲಿದೆ ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಸುಳ್ಳು, ನೇರ ಮತದಾನ ಆಗಲಿದೆ ಎಂದ ಮಲ್ಲಿಕಾರ್ಜುನ ಖರ್ಗೆ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi

Updated on: Feb 26, 2024 | 2:27 PM

ಕಲಬುರಗಿ, ಫೆ.26: ರಾಜ್ಯಸಭೆ ಚುನಾವಣೆಯಲ್ಲಿ (Rajya Sabha Elections) ಕಾಂಗ್ರೆಸ್​ಗೆ ಅಡ್ಡ ಮತದಾನ ಭೀತಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ (Mallikarjun Kharge) ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸುಳ್ಳು, ನೇರ ಮತದಾನ ನಡೆಯಲಿದೆ ಎಂದು ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್ ಸಂಪೂರ್ಣ ನಾಶ ಆಗುತ್ತದೆ ಎಂಬ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್‌ ಹೇಳಿಕೆ ವಿಚಾರವಾಗಿ ಮಾತನಾಡಿದ ಖರ್ಗೆ, ಅವರು ವಿರೋಧ ಪಕ್ಷದವರಿದ್ದಾರೆ. ಏನು ಬೇಕಾದರೂ ಹೇಳುತ್ತಾರೆ. ಎಸ್​ಪಿ, ಆಮ್ ಆದ್ಮಿ ಪಕ್ಷ, ಝಾರ್ಖಂಡ್, ಬಿಹಾರದಲ್ಲಿ ನಮ್ಮ ಮೈತ್ರಿ ಘೋಷಣೆಯಾಗಿದೆ. ಹೊಂದಾಣಿಕೆ ಆಗಬೇಕಿದೆ ಎಂದರು.

ಇದನ್ನೂ ಓದಿ: Rajya Sabha Election: ನಾಳೆ ರಾಜ್ಯಸಭೆ ಚುನಾವಣೆ: ಅಡ್ಡ ಮತದಾನ ಭೀತಿ, ಶಾಸಕರ ಹಿಡಿದಿಡಲು ಕಾಂಗ್ರೆಸ್ ಕಸರತ್ತು

ಪ್ರಜಾಪ್ರಭುತ್ವದಲ್ಲಿ ಅಹಂನಿಂದ ಮಾತಾಡಿದರೆ ಜನ ಅವರಿಗೆ ಪಾಠ ಕಲಿಸುತ್ತಾರೆ. ಕಲಬುರಗಿಗೆ ಬಂದು ಚವ್ಹಾಣ್‌ ಏನೇನೋ ಮಾತಾಡಿ ಹೋಗುವುದಲ್ಲ. 371 ಜೆ ಈ ಭಾಗಕ್ಕೆ ತಂದಿದ್ದೇವೆ, ರಾಜ್ಯ ಸರ್ಕಾರ ಐದು ಸಾವಿರ ಕೋಟಿ ಕೊಡುತ್ತಿದೆ. ಕೆಕೆಆರ್​ಡಿಬಿಗೆ 10 ಸಾವಿರ ಕೋಟಿ ಕೊಡಿಸಲು ಹೇಳಿ ಚವ್ಹಾಣ್​ಗೆ. ಸುಮ್ಮನೆ ಮಾತಾಡಿ ಹೋಗುವುದಲ್ಲ. ನಮ್ಮ ಅಸ್ಥಿತ್ವವೇ ನಿಮಗೆ ಗೊತ್ತಿಲ್ಲ ಅಂದರೆ ನಮಗ್ಯಾಕೆ ಟೀಕೆ ಮಾಡುತ್ತೀರಾ? ನಾವು ಶಕ್ತಿ ಶಾಲಿ ಇದ್ದೇವೆ ಅಂತಾ ಅವರಿಗೆ ಗೊತ್ತಿಲ್ಲ ಎಂದರು.

ರಾಜ ವೆಂಕಟಪ್ಪ ನಿಧನಕ್ಕೆ ಖರ್ಗೆ ಸಂತಾಪ

ಸುರಪುರ ಕಾಂಗ್ರೆಸ್ ಶಾಸಕ ರಾಜಾವೆಂಕಟಪ್ಪ ನಾಯಕ್ ವಿಧಿವಶ ಹಿನ್ನಲೆ ಅಂತಿಮ ದರ್ಶನ ಪಡೆಯಲು ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ, ರಾಜಾವೆಂಕಟಪ್ಪ ನಾಯಕ್‌ ಅವರನ್ನ ಕಳೆದುಕೊಂಡಿರುವುದು ನನಗೆ ಅತೀವ ದುಖಃವಾಗಿದೆ ಎಂದರು.

ಯಾವುದೇ ಚುನಾವಣೆ ಇರಲಿ, ನನ್ನನ್ನ ಬಿಟ್ಟು ವೆಂಕಟಪ್ಪನಾಯಕ್ ಪ್ರಚಾರ ಮಾಡುತ್ತಿರಲಿಲ್ಲ. ನಾನು ಹೇಳುತ್ತಿರುವ ಮಾತನ್ನ ಅವರು ಚಾಚುತಪ್ಪದೇ ಮಾಡುತ್ತಿದ್ದರು. ನಾನು ಯಾವಗಲೂ ರಾಜಾವೆಂಕಟಪ್ಪ ನಾಯಕ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದೇನೆ, ಮುಂದೆಯು ನಿಲ್ಲುತ್ತೇನೆ. ರಾಜಾವೆಂಕಟಪ್ಪರನ್ನ ಲೋಕಸಭೆ ಚುನಾವಣೆಗೆ ನಿಲ್ಲಿಸಬೇಕು ಅಂದುಕೊಂಡಿದ್ದೆ. ಆದರೆ ದುರ್ದೈವ, ರಾಜಾವೆಂಕಟಪ್ಪ ನಾಯಕ್‌ ಅವರ ಆಕಸ್ಮಿಕ ಸಾವಾಗಿದೆ. ವೆಂಕಟಪ್ಪನಾಯಕ್‌ ಅವರನ್ನ ಕಳೆದುಕೊಂಡ ಅವರ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ದೇವರು ನೀಡಲಿ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ನಾನು ಸುರಪುರಕ್ಕೆ ತೆರಳಲಿದ್ದೇನೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ