ಸಿಎಂ ಬದಲಾವಣೆ ವಿಚಾರ‌ವಾಗಿ ಮತ್ತೋರ್ವ ಸ್ವಾಮೀಜಿ ಎಂಟ್ರಿ; ಬದಲಾವಣೆ ಸಮಯ ಬಂದ್ರೆ ಲಿಂಗಾಯತ ನಾಯಕರಿಗೆ ನೀಡ್ಬೇಕು!

ಕಾಂಗ್ರೆಸ್​ ಪಾಳಯದಲ್ಲಿ ಈಗಾಗಲೇ ಮುಖ್ಯಮಂತ್ರಿ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ಶುರುವಾಗಿದ್ದು, ಅದರಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಜಗದ್ಗುರು ಚಂದ್ರಶೇಖರನಾಥ ಸ್ವಾಮೀಜಿ ಅವರು ಸಿದ್ದರಾಮಯ್ಯ ಬದಲಾವಣೆ ಕುರಿತು ಮಾತನಾಡಿದ್ದರು. ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಇದಕ್ಕೆ ಧ್ವನಿಗೂಡಿಸಿದ್ದಾರೆ.

ಸಿಎಂ ಬದಲಾವಣೆ ವಿಚಾರ‌ವಾಗಿ ಮತ್ತೋರ್ವ ಸ್ವಾಮೀಜಿ ಎಂಟ್ರಿ; ಬದಲಾವಣೆ ಸಮಯ ಬಂದ್ರೆ ಲಿಂಗಾಯತ ನಾಯಕರಿಗೆ ನೀಡ್ಬೇಕು!
ರಂಭಾಪುರಿ ಪೀಠದ ಜಗದ್ಗುರು
Edited By: ಕಿರಣ್ ಹನುಮಂತ್​ ಮಾದಾರ್

Updated on: Jun 29, 2024 | 4:24 PM

ಕಲಬುರಗಿ, ಜೂ.29: ಕಾಂಗ್ರೆಸ್​(Congress)ನಲ್ಲಿ ಸಿಎಂ ಬದಲಾವಣೆ ಹಾಗೂ ಹೆಚ್ಚುವರಿ ಡಿಸಿಎಂ ಬಗ್ಗೆ ಚರ್ಚೆ ವಿಚಾರ ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು(Rambhaapuri Jagadguru Swamiji) ಈ ಕುರಿತು ಪ್ರತಿಕ್ರಿಯಿಸಿದ್ದು, ‘ಒಕ್ಕಲಿಗ ಸಮುದಾಯದ ಚಂದ್ರಶೇಖರಶ್ರೀ ಸಿಎಂ ಸಮ್ಮುಖದಲ್ಲೇ ಬದಲಾವಣೆ ಬಗ್ಗೆ ಮಾತನಾಡಿದ್ದು ವಿಪರ್ಯಾಸ ಎಂದಿದ್ದಾರೆ. ಇಂದು(ಶನಿವಾರ) ಕಲಬುರಗಿ(Kalaburagi) ನಗರದಲ್ಲಿ ಮಾತನಾಡಿದ ಅವರು, ಬದಲಾವಣೆ ಸಮಯ ಬಂದ್ರೆ ‘ಕೈ’ ಹೈಕಮಾಂಡ್ ಉದಾಸೀನತೆ ತೋರದೇ ವೀರಶೈವ ಲಿಂಗಾಯತ ನಾಯಕರಿಗೆ ನೀಡಬೇಕು ಎಂದಿದ್ದಾರೆ.

‘ಸಿಎಂ ಸ್ಥಾನ ನೀಡಲು ಅಗದಿದ್ದರೇ ಉಪಮುಖ್ಯಮಂತ್ರಿ ಆದರೂ ಮಾಡಬೇಕು. ಕಾಂಗ್ರೆಸ್ ಹೈಕಮಾಂಡ್ ಇಂತಹ ಬೆಳವಣಿಗೆಗೆ ಕಡಿವಾಣ ಹಾಕಬೇಕು, ಇಲ್ಲದಿದ್ದರೇ ಸರ್ಕಾರದ ಆಡಳಿತದ ಮೇಲೆ ಪರಿಣಾಮ ಬೀರುತ್ತದೆ. ಸಿದ್ದರಾಮಯ್ಯ ಅವರು ಯೋಗ್ಯರಿದ್ದರೆ ಸಿಎಂ ಸ್ಥಾನದಲ್ಲಿ ಅವರನ್ನೇ ಮುಂದುವರಿಸಿ ಎಂದು ಹೇಳಿದರು.

ಇದನ್ನೂ ಓದಿ:ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು; ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ ಆಗ್ರಹ

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದ ಚಂದ್ರಶೇಖರಶ್ರೀ

ಇದೇ ಜೂ.27 ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ‘ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಅವರು, ‘ದಯವಿಟ್ಟು ಡಿಸಿಎಂ ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಇದು ಸಾಧ್ಯ. ಹಾಗಾಗಿ ಸಿಎಂ ಸ್ಥಾನ ಡಿಕೆ ಶಿವಕುಮಾರ್​​ಗೆ ಅವರು ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದಿದ್ದರು. ಇದೀಗ ರಂಭಾಪುರಿ ಪೀಠದ ಜಗದ್ಗುರುಗಳು ಇದಕ್ಕೆ ಧ್ವನಿಗೂಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Sat, 29 June 24

ದತ್ತಾತ್ರೇಯ ಪಾಟೀಲ, ಕಲಬುರಗಿ

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
Follow Us