ಕಲಬುರಗಿ: ಜಿಲ್ಲೆಯ ಜಿಮ್ಸ್ ಆಸ್ಪತ್ರೆಯಲ್ಲಿ ಹೇಯ ಕೃತ್ಯ ನಡೆದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ಮೆಹಬೂಬ್ ಪಾಷಾ ಎಂಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ. ಮಾರ್ಚ್ 17ರ ರಾತ್ರಿ 11 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು ಆರೋಪಿಯನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ.
ಮಹಿಳೆ ಕಳೆದ ಏಳು ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಲ್ಲರೂ ಮಲಗಿದ ಸಮಯ ನೋಡಿಕೊಂಡು ಆರೋಪಿ ರಾತ್ರಿ ಅಕ್ರಮವಾಗಿ ಆಸ್ಪತ್ರೆಗೆ ಬಂದು, ವಾರ್ಡ್ಗೆ ನುಗ್ಗಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದನ್ನು ಕಂಡ ಮತ್ತೋರ್ವ ವ್ಯಕ್ತಿ ಆರೋಪಿಯನ್ನು ಹಿಡಿದು ಆಸ್ಪತ್ರೆ ಸಿಬ್ಬಂದಿಗೆ ಒಪ್ಪಿಸಿದ್ದಾನೆ. ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು: ಹುಣಸೂರು ತಾಲೂಕಿನ ಯಶೋಧರಪುರ ಬಳಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಸವಾರ ಮಾದೇಶ ಗೌಡ(57) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮದೇಶ, ಹೆಚ್.ಡಿ.ಕೋಟೆ ಆಸ್ಪತ್ರೆಯ ಡಿ.ಗ್ರೂಪ್ ನೌಕರನಾಗಿದ್ದರು. ಗ್ರಾಮದಿಂದ ಹುಣಸೂರು ಕಡೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಕ್ಯಾಂಟರ್ ಗೂಡ್ಸ್ ವಾಹನ ಪಿರಿಯಾಪಟ್ಟಣದ ಕಡೆಯಿಂದ ಹುಣಸೂರು ಕಡೆಗೆ ಬರುತ್ತಿದ್ದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 8:56 am, Sat, 18 March 23