AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: ಸಿದ್ದರಾಮಯ್ಯ ‘ಹೂ‘ ಅನ್ನದೇ ಕಾಂಗ್ರೆಸ್​ ಜೆಡಿಎಸ್ ಒಪ್ಪಂದ ಆಗದು: ಸಚಿವ ಆರ್ ಅಶೋಕ್

ಸೋಮವಾರ ಜೆಡಿಎಸ್ ಪಕ್ಷದ ಶಾಸಕಾಂಗ ಸಭೆ ಕರೆದು ಕಲಬುರಗಿ ಪಾಲಿಕೆಯಲ್ಲಿ ಹೊಂದಾಣಿಕೆ ಕುರಿತು ನಿರ್ಧರಿಸುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

TV9 Web
| Edited By: |

Updated on: Sep 11, 2021 | 8:39 PM

Share

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿ ವಿಚಾರವಾಗಿ ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ನಡೆಸುತ್ತೇವೆ. ಸಭೆಯಲ್ಲಿ ಯಾರಿಗೆ ಬೆಂಬಲ ನೀಡಬೇಕೆಂದು ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದಕ್ಕೂ ಮೊದಲು ಅವರನ್ನು ಕಂದಾಯ ಸಚಿವ ಆರ್. ಅಶೋಕ್ ಭೇಟಿಯಾಗಿ ಚರ್ಚೆ ನಡೆಸಿದ್ದರು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆಗೆ ಚರ್ಚಿಸಿದ ನಂತರ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಲಬುರಗಿ ಪಾಲಿಕೆಯಲ್ಲಿ ಜೆಡಿಎಸ್ ಜತೆ ಹೊಂದಾಣಿಕೆ ಬಗ್ಗೆ ಸಿದ್ದರಾಮಯ್ಯ ಮಾತಾಡಿಲ್ಲ. ಮಲ್ಲಿಕಾರ್ಜುನ ಖರ್ಗೆ ಹೊಂದಾಣಿಕೆ ಬಗ್ಗೆ ಹೇಳಿರಬಹುದು. ಆದರೆ ಸಿದ್ದರಾಮಯ್ಯ ಹೇಳುವವರೆಗೆ ಅದು ಅಂತಿಮವಾಗದು ಎಂದು ಕೇತಗಾನಹಳ್ಳಿಯಲ್ಲಿ ತಿಳಿಸಿದ್ದಾರೆ.

ನಮ್ಮಲ್ಲಿ ಅಂತಹ ಯಾವುದೇ ರೀತಿ ಗೊಂದಲ ಇಲ್ಲ. ಜೆಡಿಎಸ್ ಜೊತೆ ಹೊಂದಾಣಿಕೆಗೆ ನಮ್ಮ ಪಕ್ಷದ ಒಪ್ಪಿಗೆಯಿದೆ. ಮೈಸೂರು ಪಾಲಿಕೆ ವಿಚಾರವಾಗಿ ಕೂಡ ನಾನು‌ ಮಾತನಾಡಿದ್ದೆ. ಇದು ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮಾತ್ರ ಹೊಂದಾಣಿಕೆಗೆ ನಾವು ಸಿದ್ಧರಿದ್ದೇವೆ. ಪಕ್ಷದ ವರಿಷ್ಠರು ಸೂಚಿಸಿದರೆ ದೇವೇಗೌಡರ ಜತೆ ಕೂಡ ಮಾತುಕತೆ ನಡೆಸುತ್ತೇನೆ ಎಂದು ಸಹ ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸಚಿವ ಆರ್. ಅಶೋಕ್ ಜತೆಗೆ ವಿವಿಧ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇನೆ. ರೈತರ ಸಮಸ್ಯೆಗಳನ್ನು ಅವರಿಗೆ ವಿವರಿಸಿದ್ದೇನೆ. ಸೋಮವಾರದ ಸಭೆಯಲ್ಲಿ ಶಾಸಕರ ಜತೆ ಚರ್ಚಿಸಿ ನಿರ್ಧರಿಸುವುದಾಗಿ ಅವರಿಗೂ ತಿಳಿಸಿದ್ದೇನೆ ಎಂದು ಜೆಡಿಎಸ್ ವರಿಷ್ಠ ಕುಮಾರಸ್ವಾಮಿ ವಿವರಿಸಿದ್ದಾರೆ.

ಇದನ್ನೂ ಓದಿ: 

ಕಲಬುರಗಿ ಪಾಲಿಕೆ ವಿಚಾರ: ದೇವೇಗೌಡರಿಗೆ ಕರೆ ಮಾಡಿ ಚರ್ಚಿಸಿದ್ದು ನಿಜ; ಉತ್ತರಕ್ಕೆ ಕಾಯುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಜೆಡಿಎಸ್​​ ಮನವೊಲಿಸುವ ಜವಾಬ್ದಾರಿ ಸಿಎಂ ಬೊಮ್ಮಾಯಿ ಹೆಗಲಿಗೆ; ಪಾಲಿಕೆ ಕೈ ತಪ್ಪುವ ಆತಂಕದಲ್ಲಿ ಕಾಂಗ್ರೆಸ್​

(Revenue Minister R Ashok says Siddaramaiah have to agree JDS and Congress friendship in Kalaburagi )

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್