ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ: ಕಲಬುರಗಿ ಜಿಲ್ಲೆ ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ

ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ ಉಂಟಾದ ಕಾರಣ ವಾಡಿ ಪಟ್ಟಣದಲ್ಲಿ ವಿಧಿಸಲಾಗಿದ್ದ ನಿಷೇದಾಜ್ಞೆಗೆ ಪೂರಕವಾಗಿ ಪುರಸಭೆ ವ್ಯಾಪ್ತಿಯಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸಿ ಕಲಬುರಗಿ ಡಿಸಿ ಫೌಜಿಯಾ ತರನ್ನುಮ್ ಮಂಗಳವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ಶ್ರೀರಾಮ ಮೆರವಣಿಗೆ ವೇಳೆ ಗಲಾಟೆ: ಕಲಬುರಗಿ ಜಿಲ್ಲೆ ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ
ವಾಡಿ ಪಟ್ಟಣದಲ್ಲಿ ನಿಷೇದಾಜ್ಞೆ ಜೊತೆಗೆ ಮದ್ಯ ಮಾರಾಟ ನಿಷೇಧ
Follow us
| Updated By: ಸಾಧು ಶ್ರೀನಾಥ್​

Updated on:Jan 23, 2024 | 2:25 PM

ಕಲಬುರಗಿ ಜಿಲ್ಲೆ ವಾಡಿ ಪುರಸಭೆ ವ್ಯಾಪ್ತಿಯಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ‌ ಹೊರಡಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ನಿಮಿತ್ತ ನಿನ್ನೆ ವಾಡಿ ಪಟ್ಟಣದಲ್ಲಿ ಆಯೋಜಿಸಿದ್ದ ಶೋಭಾಯಾತ್ರೆ ಹಾಗೂ ಶ್ರೀರಾಮನ ಮೂರ್ತಿ ಮೆರವಣಿಗೆ ವೇಳೆಯಲ್ಲಿ ಗಲಾಟೆ ಉಂಟಾದ ಪರಿಣಾಮ ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದಲ್ಲಿ ವಿಧಿಸಲಾಗಿದ್ದ ನಿಷೇದಾಜ್ಞೆಗೆ ಪೂರಕವಾಗಿ ಪುರಸಭೆ ವ್ಯಾಪ್ತಿಯಲ್ಲಿ ಸಂಪೂರ್ಣ ಮದ್ಯ ಮಾರಾಟ ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಇಂದು ಮಂಗಳವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.

ಜನವರಿ 23ರ ಮಂಗಳವಾರ ಮಧ್ಯರಾತ್ರಿಯಿಂದ ನಾಳಿದ್ದು ಜನವರಿ 25 ಗುರುವಾರ ಮಧ್ಯರಾತ್ರಿ 12ಗಂಟೆವರೆಗೆ ವಾಡಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವಂತೆ ಎಲ್ಲಾ ತರಹದ ಮದ್ಯ ತಯಾರಿಕಾ ಘಟಕಗಳನ್ನು, ಮದ್ಯಪಾನ, ಸಾರಾಯಿ, ಸೇಂದಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ.

Also Read: ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ – ಕೇಸರಿ ಬ್ಯಾನರ್ ತೆರವಿಗೆ ಪುರಸಭೆ ಆಡಳಿತಾಧಿಕಾರಿ ವಿವಾದಿತ ಆದೇಶ

ಇದಕ್ಕೂ ಮೊದಲು ಉತ್ಸವ ನಿಮಿತ್ತ ಜನವರಿ 22ರಂದು ಮಾತ್ರ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಗಲಭೆ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸ್ ಅಧೀಕ್ಷಕರ ಮನವಿ ಮೇರೆಗೆ ಅದನ್ನು ಮೂರು ದಿನಗಳಿಗೆ ವಿಸ್ತರಿಸಿ ಹೊಸ ಆದೇಶ ಹೊರಡಿಸಲಾಗಿದೆ.

ಇದರ ಮಧ್ಯೆ ವಾಡಿ ಪಟ್ಟಣದಲ್ಲಿ ಬೆಳಗ್ಗೆಯಿಂದ ನಿಷೇದಾಜ್ಞೆ ಜಾರಿಗೆ ಬಂದಿದ್ದು ಅಂಗಡಿಮುಂಗಟ್ಟುಗಳಿಗೆ ಬೀಗ ಜಡಿಯಲಾಗಿದೆ. ರಸ್ತೆಗಳ ಮೇಲೆ ಜನ ಸಂಚಾರ ಅತಿ ವಿರಳವಾಗಿದೆ. ಶಾಲೆಗಳು ಎಂದಿನಂತೆ ನಡೆಯುತ್ತಿದ್ದು, ಕೆಲವು ಖಾಸಗಿ ಶಾಲೆಗಳು ಸ್ವಯಂ ಪ್ರೇರಿತವಾಗಿ ರಜೆ ಘೋಷಿಸಿದೆ. ಎಲ್ಲೆಡೆ ಪೊಲೀಸ್ ಬಿಗಿ ಬಂದೋಬಸ್ತು ಹಾಕಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Tue, 23 January 24