12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್

12,000 ರೂ. ಲಂಚ ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ಅದೇ ರೀತಿಯಾಗಿ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಭೂಮಾಪಕ, ಉಡುಪಿಯಲ್ಲಿ ಲಂಚ ಪಡೆಯುವಾಗ ನಾಡಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

12 ಸಾವಿರ ರೂ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಆಳಂದ ತಹಶೀಲ್ದಾರ್​, ರೆವಿನ್ಯೂ ಇನ್ಸ್​ಪೆಕ್ಟರ್
ಲೋಕಾಯುಕ್ತ ಬಲೆಗೆ ಬಿದ್ದ ತಹಶೀಲ್ದಾರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Aug 31, 2023 | 8:23 PM

ಕಲಬುರಗಿ, ಆಗಸ್ಟ್​ 31: 12,000 ರೂ. ಲಂಚ (bribe) ಸ್ವೀಕರಿಸುವಾಗ ತಹಶೀಲ್ದಾರ್​ ಮತ್ತು ರೆವಿನ್ಯೂ ಇನ್ಸ್​ಪೆಕ್ಟರ್​ ರೆಡ್​ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಆಳಂದ ತಾಲೂಕು ಕಚೇರಿಯಲ್ಲೇ ನಡೆದಿದೆ. ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್, ಆರ್​ಐ ರಾಜಶೇಖರ್​ ಬಲೆಗೆ ಬಿದ್ದಿರುವ ಅಧಿಕಾರಿಗಳು. ಜಮೀನಿಗೆ ಕೃಷಿಯೇತರ ಪ್ರಮಾಣಪತ್ರ ನೀಡಲು ಮೆಹಬೂಬ್ ಪಟೇಲ್​​ ಎನ್ನುವವರಿಂದ 12,000 ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಮಹೆಬೂಬ್ ಪಟೇಲ್ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದು, ಲಂಚ ಪಡೆಯುವಾಗ ಬಂಧಿಸಿದ್ದಾರೆ.

ಕಂದಾಯ ಇಲಾಖೆಯ ಸರ್ವೇಯರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಭೂಮಾಪಕ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ನಡೆದಿದೆ. ರಮೇಶಪ್ಪ ಬಲೆಗೆ ಬಿದ್ದ ಭೂಮಾಪಕ. ಜಮೀನಿನ ಸರ್ವೆಗಾಗಿ ರೈತ ಹೊನ್ನಪ್ಪ ಎನ್ನುವವರಿಂದ ₹1 ಲಕ್ಷ ರೂ. ಲಂಚ ಕೇಳಿದ್ದು, ಮುಂಗಡವಾಗಿ 3,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ.

ಇದನ್ನೂ ಓದಿ: Davanagere News: ನಗರ ಸಭೆ ಸದಸ್ಯೆಯ ಬಳಿಕ ಲೋಕಾಯುಕ್ತ ಬಲೆಗೆ ಬಿದ್ದ ಮತ್ತೊಬ್ಬ ಅಧಿಕಾರಿ

ಉಡುಪಿಯಲ್ಲಿ ಸಹ ಲಂಚ ಪಡೆಯುವಾಗ ನಾಡಕಚೇರಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರುನಲ್ಲಿ ನಡೆದಿದೆ. ನಿಜಾಮುದ್ದಿನ್ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ. ಸಂತತಿ ನಕ್ಷೆ ಸಿದ್ದಪಡಿಸಲು ನಿನ್ನೆ ನಾಲ್ಕು ಸಾವಿರ ರೂ. ಪಡೆದಿದ್ದು, ಇಂದು ಬಾಕಿ 1 ಸಾವಿರ ರೂ. ಲಂಚ ಪಡೆಯುವಾಗ ಲೋಕಯುಕ್ತ ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Lokayukta Raid: ಮುಂದುವರಿದ ಭ್ರಷ್ಟರ ಬೇಟೆ, ಲಂಚಕ್ಕೆ ಕೈಯೊಡ್ಡುತ್ತಿದ್ದ ಅಧಿಕಾರಿ ಲೋಕಾಯುಕ್ತ ಬಲೆಗೆ

ಸದ್ಯ ನಾಡ ಕಚೇರಿ ಸಿಬ್ಬಂದಿ ನಿಜಾಮುದ್ದಿನ್ ವಶಕ್ಕೆ ಪಡೆದು ವಿಚಾರಣೆ ಮಾಡಿದ್ದು, ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದ‌ ಎಂದು ಮಾಹಿತಿ ಸಿಕ್ಕಿದೆ ಲೋಕಯುಕ್ತ ಡಿವೈಎಸ್ಪಿ ಕೆಸಿ ಪ್ರಕಾಶ್, ಇನ್ಸ್ಪೆಕ್ಟರ್ ರಫೀಕ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು