AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!

ಆರ್​ಎಸ್​ಎಸ್ ನಿಷೇಧಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದಿದ್ದಾರೆ. ಆದರೆ, ಅವರ ತವರು ಜಿಲ್ಲೆ ಕಲಬುರಗಿಯಲ್ಲೇ ಕಾಂಗ್ರೆಸ್ ಶಾಸಕ ಎಂವೈ ಪಾಟೀಲ್ ಒಡೆತನದ ಶಾಲೆಯಲ್ಲೇ ಆರ್​ಎಸ್​ಎಸ್ ಬೈಠಕ್ ಹಾಗೂ ಪಥಸಂಚಲನ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ. ಸದ್ಯ, ಪಾಟೀಲ್ ಅವರು ಶಾಲೆಯಲ್ಲಿ ಅನುಮತಿ ಕೊಟ್ಟ ಬಗ್ಗೆ ಸಮರ್ಥಿಸಿಕೊಳ್ಳುವ ಮಾತುಗಳನ್ನಾಡಿದ್ದರೂ, ಆರ್​​ಎಸ್​​ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಶಾಸಕರ ಒಡೆತನದ ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!
ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​ಎಸ್​ಎಸ್ ಬೈಠಕ್, ಪಥಸಂಚಲನ!
ದತ್ತಾತ್ರೇಯ ಪಾಟೀಲ್​
| Edited By: |

Updated on: Oct 13, 2025 | 11:36 AM

Share

ಕಲಬುರಗಿ, ಅಕ್ಟೋಬರ್ 13: ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕರ್ನಾಟಕದಲ್ಲಿ ಆರ್​ಎಸ್​ಎಸ್ ಅನ್ನು (RSS) ನಿಷೇಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಮತ್ತೊಂದೆಡೆ, ಅವರದೇ ತವರು ಜಿಲ್ಲೆ ಕಲಬುರಗಿಯಲ್ಲಿ, ಅವರದೇ ಪಕ್ಷದ ಶಾಸಕ ಎಂವೈ ಪಾಟೀಲ್ (MY Patil) ಒಡೆತನದ ಶಾಲೆಯಲ್ಲಿ ಭಾನುವಾರ ಸಂಜೆ ಆರ್​ಎಸ್​ಎಸ್ ಬೈಠಕ್ ನಡೆದಿದೆ. ಅಷ್ಟೇ ಅಲ್ಲದೆ, ಶಾಲೆಯ ಆವರಣದಲ್ಲಿ ಆರ್​ಎಸ್​ಎಸ್ ಪಥಸಂಚಲನ ಕೂಡ ನಡೆದಿದೆ. ಅಫಜಲಪುರ ಕಾಂಗ್ರೆಸ್ (Congress) ಶಾಸಕ ಎಂವೈ ಪಾಟೀಲ್ ಒಡೆತನದ ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿಯೇ ಬೌದ್ಧಿಕ ಕಾರ್ಯಕ್ರಮ ನಡೆದಿದೆ.

ಶಾಲೆಯಲ್ಲಿ ಆರ್​ಎಸ್​ಎಸ್ ಬೈಠಕ್ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಮಹಾಂತೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅನುದಾನಿತ ಶಾಲೆ ಆವರಣದಲ್ಲಿ ಆರ್​​ಎಸ್​​ಎಸ್ ಪಥಸಂಚಲನ ನಡೆಸಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಶಾಲೆ ಸಾರ್ವಜನಿಕರ ಸ್ವತ್ತು. ಇಲ್ಲಿಯವರೆಗೆ ಎಲ್ಲಾ ಪಕ್ಷದವರಿಗೆ ಕಾರ್ಯಕ್ರಮ ಮಾಡಿಕೊಡಲು ಜಾಗ ಕೊಟ್ಟಿದ್ದೇವೆ. ನಮ್ಮದು ದ್ರಾವಿಡ, ಬುಡಕಟ್ಟು ಮನಸ್ಥಿತಿ. ಆದರೆ, ಆರ್​​ಎಸ್​ಎಸ್ ಅವರನ್ನು ಆರ್ಯ ಸಮಾಜ ಪರಿಕಲ್ಪನೆ ಇದೆ. ಆರ್​​ಎಸ್​ಎಸ್ ಮೂಲ ಉದ್ದೇಶವೇ ಬೇರೆ. ಅವರು ನಡೆದುಕೊಳ್ಳುತ್ತಿರುವ ರೀತಿಯೇ ಬೇರೆ ಎಂದರು.

ಆರ್​​ಎಸ್​ಎಸ್ ನಿಷೇಧ ಬಗ್ಗೆ ಎಂವೈ ಪಾಟೀಲ್ ಹೇಳಿದ್ದೇನು?

ಆರ್​​ಎಸ್​ಎಸ್ ಚಟುವಟಿಕೆ ನಿಷೇಧ ಕುರಿತು ಸಿಎಂಗೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಬಗ್ಗೆ ಕಲಬುರಗಿಯಲ್ಲಿ ಕಾಂಗ್ರೆಸ್ ಶಾಸಕ ಎಂ.ವೈ.ಪಾಟೀಲ್ ಪ್ರತಿಕ್ರಿಯಿಸಿದ್ದು, ಅದಕ್ಕೆ ಯಾವುದೇ ಆಕ್ಷೇಪವಿಲ್ಲ. ಆರ್​​ಎಸ್​ಎಸ್ ಸಂಘಟನೆ ಉದ್ದೇಶ ಸರಿಯಲ್ಲ. ಅವರಲ್ಲೂ ಸ್ವಾತಂತ್ರ್ಯಕ್ಕೆ ಬಲಿಯಾದವರು ಒಬ್ಬರೋ ಇಬ್ಬರೋ ಇರಬಹುದು. ಆರ್​​ಎಸ್​​ಎಸ್​​ನವರು ಲಾಠಿ ಬಿಟ್ಟು ತಿರಂಗಾ ಬಾವುಟ ಹಿಡಿಯಲಿ. ಅವರು ತಿರಂಗಾ ಬಾವುಟ ಹಿಡಿದ್ರೆ ನಾವು ಸ್ವಾಗತ ಮಾಡುತ್ತೇವೆ. ಅದು ಬಿಟ್ಟು ಲಾಠಿ ಹಿಡಿದು ಪಥಸಂಚಲನ ಮಾಡಿದರೆ ಖಂಡಿಸುತ್ತೇವೆ ಎಂದಿದ್ದಾರೆ.

ಶಾಲೆ ಆವರಣದಲ್ಲಿ ಆರ್​​ಎಸ್​ಎಸ್ ಪಥಸಂಚಲನ: ವಿಡಿಯೋ

ಆರ್​​ಎಸ್​ಎಸ್ ಯಾಕೆ ಕೇಂದ್ರ ಕಚೇರಿ ಮೇಲೆ ತಿರಂಗಾ ಬಾವುಟ ಹಾರಿಸಲ್ಲ? ಅದು ದೇಶ ಕಟ್ಟುವ ಸಂಘಟನೆ ಅಲ್ಲ, ಬದಲಾಗಿ ದೇಶ ಒಡೆಯುವ ಸಂಘಟನೆ ಎಂದು ಎಂವೈ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: RSS ಚಟುವಟಿಕೆ ನಿಷೇಧಕ್ಕೆ ಮನವಿ: ಸಿಎಂಗೆ ಪ್ರಿಯಾಂಕ್ ಖರ್ಗೆ ಬರೆದ ಪತ್ರದಲ್ಲೇನಿದೆ?

ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಘದ ಪಥಸಂಚಲನ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದು ಸಂಘಟದ ಚಟುವಟಿಕೆಗಳ ನಿಷೇಧಕ್ಕೆ ಮನವಿ ಮಾಡಿದ್ದಾರೆ. ಆದರೆ, ಅದೇ ಸಮಯದಲ್ಲಿ ಅವರದೇ ಪಕ್ಷದ ಶಾಸಕರೊಬ್ಬರ ಒಡೆತನದ ಶಾಲೆಯಲ್ಲೇ ಆರ್​​ಎಸ್​ಎಸ್ ಕಾರ್ಯಕ್ರಮ ನಡೆದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ