AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi News: ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1

ಕಲಬುರಗಿಯ ವಿವಿಧ ತಾಲೂಕಿನ ತಹಶೀಲ್ದಾರ ನೇತೃತ್ವದ ಕಂದಾಯ ನ್ಯಾಯಾಲಯಗಳಲ್ಲಿ ಇಂದಿನ ದಿನಕ್ಕೆ ಒಂದು ವರ್ಷ ಮೀರಿದ ಯಾವುದೇ ಪ್ರಕರಣ ಬಾಕಿ ಇಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನಂತೆ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಕಂದಾಯ ಇಲಾಕೆಯ ಪ್ರಗತಿ ಚಿತ್ರಣ ವಿವರಿಸಿದ್ದಾರೆ.

Kalaburagi News: ಸಕಾಲ ಅರ್ಜಿ ವಿಲೇವಾರಿ, ರಾಜ್ಯದಲ್ಲಿಯೇ ಕಲಬುರಗಿ ನಂ-1
ಸಾಂದರ್ಭಿಕ ಚಿತ್ರ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Nov 28, 2023 | 6:42 PM

Share

ಕಲಬುರಗಿ, ನವೆಂಬರ್ 28: ಸಾರ್ವಜನಿಕರಿಗೆ ಕಾಲಮಿತಿಯಲ್ಲಿ ಸರ್ಕಾರಿ ಸೇವೆ ನೀಡುವ ಸಕಾಲ ಯೋಜನೆಯಡಿ (SAKALA Application) ನವೆಂಬರ್-2023ರ ತಿಂಗಳಲ್ಲಿ ಅರ್ಜಿ ವಿಲೇವಾರಿಯಲ್ಲಿ ಕಲಬುರಗಿ (Kalaburagi) ಜಿಲ್ಲೆ ಶೇ 100 ರಷ್ಟು ಸಾಧನೆಯೊಂದಿಗೆ ರಾಜ್ಯದಲ್ಲಿ ನಂಬರ್-1 ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ-2011 ಮತ್ತು ತಿದ್ದುಪಡಿ ಅಧಿನಿಯಮ-2014ರಂತೆ 100ಕ್ಕೂ ಹೆಚ್ಚಿನ ಇಲಾಖೆಗಳ 1,181 ಸೇವೆಗಳನ್ನು ಕಾಲಮಿತಿಯಲ್ಲಿ ನಾಗರಿಕರಿಗೆ ನೀಡಲಾಗುತ್ತಿದೆ. ಕಳೆದ ಜೂನ್-2023 ಮಾಹೆಯಲ್ಲಿ ಅರ್ಜಿ ವಿಲೇವಾರಿ ಪ್ರಮಾಣ ಶೇ.82.54ರಷ್ಟು ಇದ್ದರೆ, ಪ್ರಸ್ತುತ ನವೆಂಬರ್ ಮಾಹೆಯಲ್ಲಿ ಸಲ್ಲಿಕೆಯಾದ 1,02,002 ಅರ್ಜಿಗಳಲ್ಲಿ 1,07,011 ಅರ್ಜಿ ವಿಲೇವಾರಿ ಮಾಡುವ ಮೂಲಕ ಇದರ ಪ್ರಮಾಣ ಶೇ.100.34ಕ್ಕೆ ಹೆಚ್ಚಿಸಿ ಆಡಳಿತಕ್ಕೆ ವೇಗ ನೀಡಲಾಗಿದೆ.

ಒಟ್ಟಾರೆ 2023ರ ಜೂನ್ ರಿಂದ ನವೆಂಬರ್ ವರೆಗೆ ವಿವಿಧ ಇಲಾಖೆಯಡಿ ಸ್ವೀಕೃತ 7,23,259 ಅರ್ಜಿಗಳಲ್ಲಿ 7,25,716 ಅರ್ಜಿ ವಿಲೇವಾರಿಗೊಳಿಸಿದೆ. ಇದರಲ್ಲಿ ಕಂದಾಯ ಇಲಾಖೆಯು ಬಹಪಾಲು ಅಂದರೆ 5,89,786 ಅರ್ಜಿಗಳಲ್ಲಿ 5,93,992 ಅರ್ಜಿ ವಿಲೇವಾರಿ ಮಾಡುವ ಮೂಲಕ ವಿಲೇವಾರಿ ಪ್ರಮಾಣವನ್ನು ಶೇ.79.72 ರಿಂದ ಶೇ.100.71ಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ 11 ತಾಲೂಕಿನ ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕ 371(ಜೆ), ಜಾತಿ-ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ವಿವಿಧ ಪಿಂಚಣಿಗಳ ಅರ್ಜಿ ವಿಲೇವಾರಿ ಮಾಡಲಾಗುತ್ತಿದ್ದು, ಕಳೆದ 6 ತಿಂಗಳ ಅವಧಿಯಲ್ಲಿ ಸಲ್ಲಿಕೆಯಾದ 5,30,968 ಅರ್ಜಿಗಳ ಪೈಕಿ ಇದೂವರೆಗೆ 5,14,363 ಅರ್ಜಿ ವಿಲೇ ಮಾಡಿ ಶೇ.96.87 ಸರಾಸರಿ ಪ್ರಗತಿ ಸಾಧಿಸಲಾಗಿರುತ್ತದೆ.

ರಾಜ್ಯ ಸರ್ಕಾರವು ಕರ್ನಾಟಕ ಭೂ ಕಂದಾಯ ನಿಯಮಗಳು-1966ಕ್ಕೆ ತಿದ್ದುಪಡಿ ತಂದು ಕೃಷಿ ಜಮೀನಿಗೆ ಸಂಬಂಧಿಸಿದಂತೆ ವರ್ಗಾವಣೆ ಕೈಗೊಳ್ಳುವಾಗ ವರ್ಗಾವಣೆಗಳ ಮುದ್ದತ್ತು (ಆಕ್ಷೇಪಣೆ ಸ್ವೀಕರಿಸು/ ನೋಟಿಸ್) ಅವಧಿಯನ್ನು ಈ ಹಿಂದಿದ್ದ 30 ದಿವಸಗಳ ಕಾಲಾವಧಿಯಿಂದ ನೋಂದಾಯಿತ ದಾಖಲೆಯ ಆಧಾರದ ಮೇಲೆ ಕೈಗೊಳ್ಳುವ ವರ್ಗಾವಣೆಗಳಲ್ಲಿ 7 ದಿವಸಗಳು, ನೋಂದಾಯಿತವಲ್ಲದ ದಾಖಲೆಯ ಆಧಾರದ ಮೇಲೆ ಕೈಗೊಳ್ಳುವ ವರ್ಗಾವಣೆಗಳಲ್ಲಿ 15 ದಿವಸಗಳ ಕಾಲಾವಧಿಯನ್ನು ನಿಗದಿಪಡಿಸಿದೆ. ಅದರಂತೆ ನೋಂದಾಯಿತ ದಾಖಲೆಗಳ ಮೇಲೆ ಮೇ-2023 ರಿಂದ ನವೆಂಬರ-2023ರ ವರೆಗೆ 12,818 ವರ್ಗಾವಣೆ ಅರ್ಜಿಗಳಲ್ಲಿ 12,435 ವಿಲೇ ಮಾಡಿದೆ. ನೋಂದಾಯಿತವಲ್ಲದ (ಪೌತಿ) ಪ್ರಕರಣಗಳ ಈ ಅವಧಿಯಲ್ಲಿ 5,196 ಪ್ರಕರಣ ಪೈಕಿ 5,741 ವಿಲೇಗೊಳಿಸಿದೆ. ಮೇ-2023 ಮಾಹೆಯಲ್ಲಿ ಅರ್ಜಿಗಳ ಸರಾಸರಿ ವಿಲೇವಾರಿ ದಿನಗಳು 34.27 ಆಗಿದ್ದರೆ, ಹಿಂದಿನ 6 ತಿಂಗಳ ಕಾಲಾವಧಿ ಗಮನಿಸಿದಾಗ ಸರಾಸರಿ ವಿಲೇವಾರಿ ದಿನಗಳು 12.86ಕ್ಕೆ ಇಳಿಕೆಯಾಗಿದೆ. ಇದು ಜನಪರ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ನೋಟಿಸು ರಹಿತ ವರ್ಗಾವಣೆಗಳ ಪ್ರಕರಣದಲ್ಲಿ 35,318 ಅರ್ಜಿಗಳಲ್ಲಿ 35,667 ವಿಲೇಗೊಳಿಸಿದ್ದು, ಇಲ್ಲಿಯೂ ಸಹ ವಿಲೇ ದಿನಗಳನ್ನು 2.40 ರಿಂದ 0.38ಕ್ಕೆ ಇಳಿಮುಖವಾಗಿಸಿದೆ.

ಪಹಣಿ ಕಾಲಂ (3) ಮತ್ತು (9) ಭಿನ್ನತೆಗಳನ್ನು ಸರಿಪಡಿಸುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೇ-2023 ರಿಂದ ನವೆಂಬರ-2023 ವರೆಗೆ ಒಟ್ಟು 5,631 ಪ್ರಕರಣಗಳಲ್ಲಿ 2,429 ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಪಹಣಿ ತಿದ್ದುಪಡಿ ಮಾಡಲಾಗಿದೆ. ಇನ್ನೂ ಇದೇ ಅವಧಿಯಲ್ಲಿ ಸಲ್ಲಿಕೆಯಾದ 7,960 ಪ್ರಕರಣಗಳಲ್ಲಿ 3,752 ಪ್ರಕರಣಗಳು ವಿಲೇ ಮಾಡಿ ಶೇ.47ರಷ್ಟು ಮೋಜಣಿ ಪಹಣಿಗಳ ತಿದ್ದುಪಡಿ ಸಹ ಮಾಡಲಾಗಿದೆ.

ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಮತ್ತು ಎಸ್.ಸಿ-ಎಸ್.ಟಿ. ಸಮುದಾಯಕ್ಕೆ ಮಂಜೂರು ಮಾಡಿದ ಜಮೀನು ಒತ್ತುವರಿಗೆ ಕಡಿವಾಣ ಹಾಕಲು ಕಳೆದ ಸೆಪ್ಟೆಂಬರ್ 17 ರಿಂದ ಇಲ್ಲಿಯ ವರೆಗೆ 3,574 ಪಿ.ಟಿ.ಸಿ.ಎಲ್ ಹಾಗೂ 1,359 ಸರ್ಕಾರಿ ಜಮೀನುಗಳನ್ನು ಫ್ಲ್ಯಾಗಿಂಗ್ ಮಾಡಲಾಗಿದೆ.

ಒಂದು ವರ್ಷ ಮೀರಿದ ಪ್ರಕರಣ ಬಾಕಿ ಇಲ್ಲ

ಜಿಲ್ಲೆಯ ವಿವಿಧ ತಾಲೂಕಿನ ತಹಶೀಲ್ದಾರ ನೇತೃತ್ವದ ಕಂದಾಯ ನ್ಯಾಯಾಲಯಗಳಲ್ಲಿ ಇಂದಿನ ದಿನಕ್ಕೆ ಒಂದು ವರ್ಷ ಮೀರಿದ ಯಾವುದೇ ಪ್ರಕರಣ ಬಾಕಿ ಇಲ್ಲ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ನಿರ್ದೇಶನಂತೆ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲಾಗುತ್ತಿದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಕಂದಾಯ ಇಲಾಕೆಯ ಪ್ರಗತಿ ಚಿತ್ರಣ ವಿವರಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ: 11 ತಿಂಗಳು ಶಾಲೆಗೆ ಗೈರಾಗಿದ್ದರೂ ಶಿಕ್ಷಕನಿಗೆ ವೇತನ ಬಿಡುಗಡೆ: ಮೂವರಿಗೆ ಕಡ್ಡಾಯ ನಿವೃತ್ತಿ

ಕಳೆದ ಜೂನ್ 1ಕ್ಕೆ 836 ತಕರಾರು ಪ್ರಕರಣಗಳು ನಮ್ಮ ಮುಂದಿದ್ದವು. ಕಳೆದ 6 ತಿಂಗಳ ಅವಧಿಯಲ್ಲಿ 388 ವಿಲೇವಾರಿ ಮಾಡಿದೆ. ಇನ್ನೂ 1-5 ವರ್ಷ ಮತ್ತು ಮೇಲ್ಪಟ್ಟ ಬಾಕಿ ಇದ್ದ ಎಲ್ಲಾ 141 ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ. 6 ತಿಂಗಳು-1 ವರ್ಷ ಅವಧಿಯಡಿಯಲ್ಲಿ ಬಾಕಿ ಇದ್ದ 169 ಪ್ರಕರಣಗಳಲ್ಲಿ 141 ಪ್ರಕರಣಗಳು ಇತ್ಯರ್ಥ ಪಡಿಸಿದೆ.

ಇ-ಆಫೀಸ್ ಕಾರ್ಯನಿರ್ವಹಣೆ

ಕಂದಾಯ ಇಲಾಖೆ ವ್ಯಾಪ್ತಿಯ ಕಚೇರಿಯಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ವಿಲೇವಾರಿಗೆ ಇ-ಆಫೀಸ್ ಅನುಷ್ಠಾನಗೊಳಿಸಲಾಗಿದ್ದು, ಕಳೆದ 6 ತಿಂಗಳ ಅವಧಿಯಲ್ಲಿ ಜಿಲ್ಲೆಯ 11 ತಹಶೀಲ್ದಾರ ಕಚೇರಿಗಳಲ್ಲಿ 1,13,383 ಕಡತಗಳು ಸೃಜಿಸಿದ್ದು, 1,10,856 ಕಡಗಳನ್ನು ವಿಲೇವಾರಿ ಮಾಡಲಾಗಿದೆ. ಕಳೆದ 6 ತಿಂಗಳಲ್ಲಿ ವಿಲೇವಾರಿ ಕಡತ ಪ್ರಮಾಣ ನೋಡಿದಾಗ ಅದು ಶೇ.98ಕ್ಕೆ ತಲುಪಿದೆ. ಇದರಿಂದ ಜನರಿಗೆ ತ್ವರಿತ ನ್ಯಾಯ ಸಿಗುವಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ