ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥ

| Updated By: ವಿವೇಕ ಬಿರಾದಾರ

Updated on: Jul 27, 2022 | 8:30 PM

ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ 40 ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಹಾವನೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ ಸೇವಿಸಿ ಶಾಲಾ ಮಕ್ಕಳು ಅಸ್ವಸ್ಥ
ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರ
Follow us on

ಕಲಬುರಗಿ: ಹಲ್ಲಿ ಬಿದ್ದಿರುವ ವಿಷ ಆಹಾರ (Food poison)  ಸೇವಿಸಿ 40 ಕ್ಕೂ ಹೆಚ್ಚು ಶಾಲಾ ಮಕ್ಕಳು (School Students) ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲ್ಲೂಕಿನ ಹಾವನೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಅಸ್ವಸ್ಥ ಮಕ್ಕಳಿಗೆ ಗೊಬ್ಬೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು (July 27) ಶಾಲೆಯಲ್ಲಿ ಮಧ್ಯಾಹ್ನ ಹಲ್ಲಿ ಬಿದ್ದಿರುವ ಬಿಸಿ ಊಟ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದಾರೆ.

ಆಹಾರ ಸೇವಿಸಿ ಮಕ್ಕಳು ವಾಂತಿ ಭೇದಿಯಿಂದ ಬಳಲಿದ್ದಾರೆ. ಅಡುಗೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಫಸಲ್ ಬಿಮಾ ಯೋಜನೆಯ ಬೆಳೆ ವಿಮೆ ನೀಡಲು ರೈತರ ಆಗ್ರಹ

ಚಿತ್ರದುರ್ಗ: ಫಸಲ್ ಬಿಮಾ ಯೋಜನೆಯ ಬೆಳೆ ವಿಮೆ ನೀಡಲು ರೈತರ ಆಗ್ರಹಿಸುತ್ತಿದ್ದು, ಕೃಷಿ ಇಲಾಖೆ ಕಚೇರಿಗೆ ಬೀಗ ಜಡಿದು ರೈತರು ಪ್ರತಿಭಟನೆ ಮಾಡಿದ್ದಾರೆ. ರೈತಪರ ಸಂಘಟನೆಗಳ ನೇತೃತ್ವದಲ್ಲಿ ಕೃಷಿ ಇಲಾಖೆ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದ್ದಾರೆ.

ಕೃಷಿ‌ ಅಧಿಕಾರಿಗಳು ಬೆಳೆ ವಿಮೆ ವಂಚನೆಯಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದಿದೆ. ವಿಮೆ ಕಂಪನಿಗಳ ಜೊತೆ ಸೇರಿ ಬೆಳೆ ವಿಮೆ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿ ಬರುತ್ತಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಅವರಿಗೆ ರೈತರು ತರಾಟೆಗೆ ತೆಗೆದುಕೊಂಡಿದ್ದಾರೆ. ಪೊಲೀಸರು, ಕೃಷಿ ಅಧಿಕಾರಿಗಳ ಜತೆ ರೈತರ ವಾಗ್ವಾದ ನಡೆಸಿದ್ದಾರೆ. ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ ಪತ್ರ ಸಲ್ಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Published On - 6:21 pm, Wed, 27 July 22