ಕಲಬುರಗಿ: ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ಪ್ರಕರಣ: ಶಾಲಾ ಮುಖ್ಯ ಶಿಕ್ಷಕಿ ಅಮಾನತು

ಕಲಬುರಗಿ ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಚಿಣಮಗೇರಾ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನ 1.30 ರ ಊಟದ ಸಮಯದಲ್ಲಿ ವಿದ್ಯಾರ್ಥಿನಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದ ಘಟನೆ ನಡೆದಿದ್ದು, ಇದೀಗ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

ಕಲಬುರಗಿ: ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ ಪ್ರಕರಣ: ಶಾಲಾ ಮುಖ್ಯ ಶಿಕ್ಷಕಿ ಅಮಾನತು
ಕಲಬುರಗಿ
Follow us
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 17, 2023 | 5:30 PM

ಕಲಬುರಗಿ, ನ.17: ಬಿಸಿಯೂಟದ ಸಾಂಬರ್ ಪಾತ್ರೆಗೆ ಎರಡನೇ ತರಗತಿಯ ಮಹಾಂತಮ್ಮ ಎಂಬ ವಿದ್ಯಾರ್ಥಿನಿ (Student) ಬಿದ್ದು ಗಂಭೀರ ಗಾಯಗೊಂಡ ಘಟನೆ ನಿನ್ನೆ(ನ.16) ಕಲಬುರಗಿ ಜಿಲ್ಲೆಯ ಅಫಜಲಪುರ(Afzalpur) ತಾಲೂಕಿನ ಚಿಣಮಗೇರಾ ಶಾಲೆಯಲ್ಲಿ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚಿಣಮಗೇರಾ ಶಾಲೆಯ ಮುಖ್ಯಶಿಕ್ಷಕಿ ಹಾಗೂ ಸಹಶಿಕ್ಷಕನನ್ನು ಅಮಾನತು ಮಾಡಿ ಕಲಬುರಗಿ ಡಿಡಿಪಿಐ ಸಕ್ರೆಪ್ಪಗೌಡ ಬಿರಾದರ ಅವರು ಆದೇಶ ಹೊರಡಿಸಿದ್ದಾರೆ. ಮುಖ್ಯಶಿಕ್ಷಕಿ ಲಾಲಬಿ ನಾದಾಫ್ ಹಾಗೂ ಸಹಶಿಕ್ಷಕ ರಾಜು ಚವ್ಹಾಣ ಅಮಾನತುಗೊಂಡವರು.

ಘಟನೆ ವಿವರ

ಅಫಜಲಪುರ ತಾಲೂಕಿನ ಚಿಣಮಗೇರಾ ಗ್ರಾಮದ ಬಾಲಕಿ. ಅದೇ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಎರಡನೇ ತರಗತಿ ಓದುತ್ತಿದ್ದಳು. ಮಧ್ಯಾಹ್ನ 1.30 ರ ಊಟದ ಸಮಯದಲ್ಲಿ ವಿದ್ಯಾರ್ಥಿನಿ ಮಹಾಂತಮ್ಮ, ಊಟ ಮಾಡಲು ಅಡುಗೆ ಕೋಣೆಯತ್ತ ಹೋಗಿದ್ದಾಳೆ. ಈ ವೇಳೆ ಮಹಾಂತಮ್ಮ ಆಯಾತಪ್ಪಿ ಬಿಸಿಯೂಟದ ಸಾಂಬಾರ್ ಪಾತ್ರೆಗೆ ಬಿದ್ದಿದ್ದಾಳೆ. ತೀವ್ರ ಗಾಯಗಳಾಗಿದ್ದ ಮಹಾಂತಮ್ಮನನ್ನು ಸದ್ಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಾಲೆಯಲ್ಲಿ ಮಧ್ಯಾಹ್ನ ಬಿಸಿ ಊಟ ತಯಾರು ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಗಾಣಗಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಬಿಸಿಯೂಟದ ಸಾಂಬರ್​ ಪಾತ್ರೆಗೆ ಬಿದ್ದು ವಿದ್ಯಾರ್ಥಿನಿಗೆ ಗಂಭೀರ ಗಾಯ: ಶಾಲಾ ಶಿಕ್ಷಕರ ನಿರ್ಲಕ್ಷ ಆರೋಪ

ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ದುರ್ಘಟನೆ

ಮಕ್ಕಳು ಅಡುಗೆ ಕೋಣೆಯತ್ತ ಬರದಂತೆ ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು. ಆದರೆ, ಇಲ್ಲಿ ಮಾತ್ರ ಇಬ್ಬರ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿ ಆಯಾ ತಪ್ಪಿ ಸಾಂಬಾರ್ ಪಾತ್ರೆಗೆ ಬಿದ್ದಿದ್ದು, ತೀವ್ರ ತರದ ಸುಟ್ಟ ಗಾಯಗಳೊಂದಿಗೆ ಕಲಬುರಗಿ ಜಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದಾಳೆ. ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದ ಪರಿಣಾಮದಿಂದಲೇ ಬಾಲಕಿ ಸಾಂಬಾರ್ ಪಾತ್ರೆಯಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದಾಳೆಂದು ಪೋಷಕರು ಆರೋಪ ಮಾಡಿದ್ದರು. ಅದರಂತೆ ಶಿಕ್ಷಕರ ಮತ್ತು ಅಡುಗೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಪುಟ್ಟ ಬಾಲಕಿಯೋರ್ವಳು ಸಾಂಬಾರ್ ಪಾತ್ರೆಗೆ ಬಿದ್ದು ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿದ್ದು, ನಿರ್ಲಕ್ಷ್ಯ ವಹಿಸಿದ ಶಿಕ್ಷಕರು ಅಮಾನತುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್