ವಿಧಾನಪರಿಷತ್ ಸಭಾಪತಿ ಹುದ್ದೆಗೆ ಶಶೀಲ್ ನಮೋಶಿ ಲಾಬಿ: ಸಭಾಪತಿ ಹುದ್ದೆಗೆ ಪರಿಗಣಿಸುವಂತೆ ಮನವಿ

| Updated By: ಗಂಗಾಧರ​ ಬ. ಸಾಬೋಜಿ

Updated on: May 17, 2022 | 11:30 AM

ನಿನ್ನೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ಕುಮಾರ್ ಕಟೀಲು, ಸಿ.ಟಿ.ರವಿ ಭೇಟಿಯಾಗಿ ಮನವಿ ಮಾಡಿದ್ದು, ಪರಿಷತ್​ನಲ್ಲಿ ನಾನು ಹಿರಿಯ ಸದಸ್ಯನಾಗಿದ್ದು ಪರಿಗಣಿಸುವಂತೆ ತಿಳಿಸಿದ್ದಾರೆ. ಬಿಎಸ್​ವೈ ಜೊತೆಯೂ ಶಶೀಲ್ ನಮೋಶಿ ಆತ್ಮೀಯ ಸಂಬಂಧ ಹೊಂದಿದ್ದಾರೆ.

ವಿಧಾನಪರಿಷತ್ ಸಭಾಪತಿ ಹುದ್ದೆಗೆ ಶಶೀಲ್ ನಮೋಶಿ ಲಾಬಿ: ಸಭಾಪತಿ ಹುದ್ದೆಗೆ ಪರಿಗಣಿಸುವಂತೆ ಮನವಿ
ಶಶೀಲ್ ನಮೋಶಿ
Follow us on

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ 4 ಬಾರಿ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಶಶೀಲ್ ನಮೋಶಿ ಸದ್ಯ ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಬಸವರಾಜ ಹೊರಟ್ಟಿ ರಾಜೀನಾಮೆಯಿಂದ ತೆರವಾಗಿರೋ ಸಭಾಪತಿ ಹುದ್ದೆಗೆ ಸಾಕಷ್ಟು ಕಸರತ್ತು ನಡೆಯುತ್ತಿದೆ. ಜಿಲ್ಲೆಯ ಮಂತ್ರಿಮಂಡಲದಲ್ಲಿ ಯಾರಿಗೂ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಸಭಾಪತಿ ಹುದ್ದೆಯನ್ನಾದ್ರ ಜಿಲ್ಲೆಗೆ ನೀಡುವಂತೆ ಶಶೀಲ್ ನಮೋಶಿ ಮನವಿ ಮಾಡಿದ್ದಾರೆ. ನಿನ್ನೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್​ಕುಮಾರ್ ಕಟೀಲು, ಸಿ.ಟಿ.ರವಿ ಭೇಟಿಯಾಗಿ ಮನವಿ ಮಾಡಿದ್ದು, ಪರಿಷತ್​ನಲ್ಲಿ ನಾನು ಹಿರಿಯ ಸದಸ್ಯನಾಗಿದ್ದು ಪರಿಗಣಿಸುವಂತೆ ತಿಳಿಸಿದ್ದಾರೆ. ಬಿಎಸ್​ವೈ ಜೊತೆಯೂ ಶಶೀಲ್ ನಮೋಶಿ ಆತ್ಮೀಯ ಸಂಬಂಧ ಹೊಂದಿದ್ದಾರೆ.

ಪರಿಷತ್ ಹಂಗಾಮಿ ಸಭಾಪತಿ ನೇಮಕವಾದ ಬಳಿಕ ಹೊರಟ್ಟಿ ರಾಜಿನಾಮೆ ಅಂಗಿಕಾರ

ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗುತ್ತಿದ್ದು, ವಿಧಾನ ಪರಿಷತ್ ಹಂಗಾಮಿ ಸಭಾಪತಿ ನೇಮಕವಾದ ಬಳಿಕ ಬಸವರಾಜ ಹೊರಟ್ಟಿ ಅವರ ರಾಜಿನಾಮೆ ಅಂಗೀಕಾರವಾಗಲಿದೆ. ಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ನೇಮಕಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಪರಿಷತ್ ಹಂಗಾಮಿ ಸಭಾಪತಿ ನೇಮಕ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ನಿನ್ನೆ ಸಂಜೆ ರಾಜ್ಯಪಾಲರ ಜೊತೆ ಮಾತುಕತೆ ನಡೆಸಿದ್ದಾರೆ. ಮಲ್ಕಾಪುರೆ ಅವರ ನೇಮಕಕ್ಕೆ ಸಿಎಂ ಬೊಮ್ಮಾಯಿ ಒಲವು ಹೊಂದಿದ್ದಾರೆ. ಇನ್ನು ಹಂಗಾಮಿ ಸಭಾಪತಿ ನೇಮಕ ಸಂಬಂಧ ಕೆಲವೇ ಹೊತ್ತಿನಲ್ಲಿ ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಶಿಫಾರಸು ಕಳುಹಿಸಲಿದ್ದಾರೆ. ಹಂಗಾಮಿ ಸಭಾಪತಿ ನೇಮಕದ ಬಳಿಕ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಅಂಗೀಕಾರವಾಗಲಿದೆ. ಬಳಿಕ ಇಂದು ಸಂಜೆ ಅಥವಾ ನಾಳೆ ಹೊರಟ್ಟಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬಸವರಾಜ ಹೊರಟ್ಟಿ ಅವರು ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು ಜೆಡಿಎಸ್ ಪಕ್ಷಕ್ಕೆ ಆಘಾತ ತಂದಿದೆ. ಏಕೆಂದರೆ ಜನತಾದಳ ದಿಂದ 2000ನೇ ಇಸವಿಯಲ್ಲಿ ಜೆಡಿಎಸ್ ಸೇರ್ಪಡೆಗೊಂಡ ನಂತರ ಉತ್ತರ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷಕ್ಕೆ ಬಲಬಂದಂತಾಗಿತ್ತು. ಆದರೆ ಈಗ ಬಿಜೆಪಿ ಸೇರ್ಪಡೆಗೊಳ್ಳುತ್ತಿರುವುದು, ಜೆಡಿಎಸ್ ಪಕ್ಷಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ದೊಡ್ಡ ಹೊಡೆತ ಬೀಳುವ ಸಾಧ್ಯತೆಗಳಿವೆ.ಇನ್ನು ಬಿಜೆಪಿ ಸೇರ್ಪಡೆ ಕುರಿತು ಮಾತನಾಡಿರುವ ಬಸವರಾಜ ಹೊರಟ್ಟಿ ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ. ಆದರೆ ಅಮಿತ್ ಶಾ ಅವರ ಜೊತೆ ಏನೂ ವಿಶೇಷ ಚರ್ಚೆ ಮಾಡಿಲ್ಲ. ಯಾವುದೇ ಸ್ಥಾನಮಾನದ ಬಗ್ಗೆಯೂ ಚರ್ಚೆಯಾಗಿಲ್ಲ ಎಂದು ಹೇಳಿದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.