AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಪ್ರತಿಮೆ ತೆರವು: ಸಿಡಿದೆದ್ದ ಅಭಿಮಾನಿಗಳು, ಕಲಬುರಗಿ ಚಲೋ ಎಚ್ಚರಿಕೆ

ಇತ್ತೀಚೆಗೆ ಕಲಬುರಗಿಯ ಹೈಕೋರ್ಟ್ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯರ 9 ಅಡಿ ಎತ್ತರದ ಪ್ರತಿಮೆಯನ್ನು ಪಾಲಿಕೆ ತೆರವು ಮಾಡಿತ್ತು. ಸದ್ಯ ಈ ವಿಚಾರದಿಂದ ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶಗೊಂಡಿದ್ದು, ಕಲಬುರಗಿ ಚಲೋ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಹಿಂದುಳಿದ ವರ್ಗಗಳ ಸಂಘಟನೆ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಪ್ರತಿಮೆ ತೆರವು: ಸಿಡಿದೆದ್ದ ಅಭಿಮಾನಿಗಳು, ಕಲಬುರಗಿ ಚಲೋ ಎಚ್ಚರಿಕೆ
ಸಿದ್ದರಾಮಯ್ಯ ಪ್ರತಿಮೆImage Credit source: tv9 kannada
ಅನಿಲ್​ ಕಲ್ಕೆರೆ
| Edited By: |

Updated on:Sep 19, 2026 | 8:29 PM

Share

ಬೆಂಗಳೂರು/ಕಲಬುರಗಿ, ಸೆಪ್ಟೆಂಬರ್​ 19: ಇತ್ತೀಚೆಗೆ ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ 9 ಅಡಿ ಎತ್ತರದ ಪ್ರತಿಮೆಯನ್ನು ಪ್ರತಿಷ್ಠಾನೆ ಮಾಡಲಾಗಿತ್ತು. ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ತೆರವುಗೊಳಿಸಿದ್ದರು. ಸದ್ಯ ಈ ವಿಚಾರ ಸಿದ್ದರಾಮಯ್ಯ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದ್ದು, ಕಲಬುರಗಿ ಚಲೋ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ‘ಕಲಬುರಗಿ ಚಲೋ’ ಎಚ್ಚರಿಕೆ

ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ತೆರವು ವಿಚಾರವಾಗಿ ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಸಂಘಟನೆ ರಾಜ್ಯಾಧ್ಯಕ್ಷ ರಾಮಚಂದ್ರಪ್ಪ ಪ್ರತಿಕ್ರಿಯಿಸಿದ್ದು, ‘ಸಿದ್ದರಾಮಯ್ಯ ಅವರು ಸಾಮಾಜಿಕ ಕಳಕಳಿಯಿಂದ ಆಡಳಿತ ಮಾಡಿಕೊಂಡು ಬಂದ ಧಿಮಂತ್ ನಾಯಕ. ಅವರ ಮೂರ್ತಿಯನ್ನ ಅಭಿಮಾನಿಗಳು ಪ್ರತಿಷ್ಠಾಪನೆ ಮಾಡಿದ್ದರು. ಅವತ್ತು ವಿಮೋಚನಾ ದಿನಾಚರಣೆಗೆ ಅಲ್ಲಿಗೆ ಸಿಎಂಗೆ ಹೋಗಿದ್ದರು. ಅವರಿಗೆ ಈ ವಿಚಾರ ಗೊತ್ತಿಲ್ಲ ಅಂತಲ್ಲ, ಅವರ ಬಳಿ ಇಂಟೆಲಿಜೆನ್ಸ್ ಇದೆ’ ಎಂದರು.

ಇದನ್ನೂ ಓದಿ: ಕಲಬುರಗಿಯಲ್ಲಿ ರಾತ್ರೋರಾತ್ರಿ ಸಿದ್ದರಾಮಯ್ಯ ಪ್ರತಿಮೆ ಪ್ರತಿಷ್ಠಾಪನೆ; ನಗರ ಪಾಲಿಕೆಯಿಂದ ತೆರವು

‘ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಕೂಡ ನಿರ್ಲಕ್ಷ ತೋರಿದ್ದಾರೆ. ಆ ಭಾಗದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳಿದ್ದಾರೆ. ಅವರು ಆಕ್ರೋಶಗೊಳ್ಳುವ ಮುಂಚೆ ಜಿಲ್ಲಾಡಳಿತ ಮತ್ತು ಸರ್ಕಾರ ಕೂಡಲೇ ಎಚ್ಚೆತ್ತುಕೊಳ್ಳಬೇಕು ಇಲ್ಲವಾದರೆ ಕಲಬುರಗಿ ಚಲೋ ಮಾಡುತ್ತೇವೆ. ಕಲಬುರಗಿ ಚಲೋದಲ್ಲಿ ರಾಜ್ಯದ ಎಲ್ಲಾ ಸಿದ್ದರಾಮಯ್ಯ ಅಭಿಮಾನಿಗಳು ಭಾಗಿ ಆಗುತ್ತಾರೆ’ ಎಂದು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ.

LIVE TV

ಸಿಎಂ ಅಲ್ಲೇ ಇದ್ರೂ ಪ್ರತಿಮೆ ತೆರವು ಮಾಡಿದ್ದಾರೆ: ರಾಮಚಂದ್ರಪ್ಪ

ಪ್ರತಿಮೆ ತೆರವು ವೇಳೆ ಸಿಎಂ ಡಿಕೆ ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಅಲ್ಲೇ ಇದ್ದರು. ಹೀಗಿದ್ರೂ ಸಿದ್ದರಾಮಯ್ಯನವರ ಪ್ರತಿಮೆ ತೆರವು ಮಾಡಿದ್ದಾರೆ. ಅಂದರೆ ಅಧಿಕಾರಿಗಳ ಮೇಲೆ ಒತ್ತಡ ಇದೆ ಎಂದು ಗೊತ್ತಾಗುತ್ತೆ’ ಎಂದಿದ್ದಾರೆ.

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ಪ್ರತಿಭಟನೆ

ಇನ್ನು ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ಪ್ರತಿಭಟನೆ ನಗರದ ಜಗತ್ ವೃತದಿಂದ ಪಾಲಿಕೆ ಕಚೇರಿವರೆಗೆ ಕುರುಬ ಸಮುದಾಯದಿಂದ ಬೃಹತ್ ಪ್ರತಿಭಟನೆ ಮಾಡಿದರು. ಈ ಕೂಡಲೇ ಸಿದ್ದರಾಮಯ್ಯ ಪ್ರತಿಮೆ ಮರು ಸ್ಥಾಪಿಸುವಂತೆ ಆಗ್ರಹಿಸಿದರು. ಬಳಿಕ ಕುರುಬರ ಸಂಘದ ಪ್ರದಾನ ಕಾರ್ಯದರ್ಶಿ ಸೋಮಶೇಖರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ‘2023ರಲ್ಲಿ ಹೈಕೋರ್ಟ್ ಸರ್ಕಲ್​ಗೆ ಸಿದ್ದರಾಮಯ್ಯ ವೃತ್ತ ಎಂದು ಘೋಷಣೆ ಮಾಡಿದೆ. ಆ ಘೋಷಣೆ ಆಗಿದ್ದ ಬೋರ್ಡ್ ಅನ್ನು ಸಹ ತೆರವು ಮಾಡಲಾಗಿದೆ. ಇನ್ನೆರಡು ದಿನಗಳಲ್ಲಿ ಪ್ರತಿಮೆ ಅನಾವರಣ ಮಾಡದೆ ಹೋದರೆ ಉಗ್ರ ಹೋರಾಟ ಮಾಡುತ್ತೇವೆ. ಕಲಬುರಗಿ ಚಲೋ ಮಾಡುತ್ತೇವೆ. ಇಡೀ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ’ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:47 pm, Sat, 19 September 26

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು