AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರ: ಕೊಂಕು ಮಾತನಾಡಿದ ಹೆಚ್​​.ಡಿ.ಕುಮಾರಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಇದು ಕೊನೆಯ ಚುನಾವಣೆ. ಆ ಮೇಲೆ ಕೋಲಾರಕ್ಕೂ ಸಿದ್ದರಾಮಯ್ಯ ಬೈಬೈ ಹೇಳಿ ಹೋಗುತ್ತಾರೆ ಎಂದು ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ ಟಾಂಗ್​ ನೀಡಿದ್ದಾರೆ.

ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರ: ಕೊಂಕು ಮಾತನಾಡಿದ ಹೆಚ್​​.ಡಿ.ಕುಮಾರಸ್ವಾಮಿ
ಸಿದ್ಧರಾಮಯ್ಯ, ಹೆಚ್​.ಡಿ. ಕುಮಾರಸ್ವಾಮಿ
TV9 Web
| Edited By: |

Updated on: Jan 09, 2023 | 6:15 PM

Share

ಕಲಬುರಗಿ: ಮಾಜಿ ಸಿಎಂ ಸಿದ್ಧರಾಮಯ್ಯ (Siddaramaiah) ಅವರು ಕೋಲಾರದಿಂದ ಸ್ಪರ್ಧಿಸುವುದಾಗಿ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತಾಗಿ ಮಾಜಿ ಸಿಎಂ ಹೆಚ್​​.ಡಿ.ಕುಮಾರಸ್ವಾಮಿ (HD Kumaraswamy) ಜಿಲ್ಲೆಯ ಆಳಂದ ತಾಲೂಕಿನ ಹಿರೊಳಿ ಗ್ರಾಮದಲ್ಲಿ ಹೇಳಿಕೆ ನೀಡಿದ್ದು,  ಮಾಜಿ ಸಿಎಂ ಸಿದ್ದರಾಮಯ್ಯ ಅವರದ್ದು ಇದು ಕೊನೆಯ ಚುನಾವಣೆ. ಆ ಮೇಲೆ ಕೋಲಾರಕ್ಕೂ ಸಿದ್ದರಾಮಯ್ಯ ಬೈಬೈ ಹೇಳಿ ಹೋಗುತ್ತಾರೆ. ಸಿದ್ದರಾಮಯ್ಯ ಸರ್ಕಾರವಿದ್ದಾಗ 5 ವರ್ಷ ಅಭಿವೃದ್ಧಿ ಏನೂ ಮಾಡಲಿಲ್ಲ. ಈಗಲಾದ್ರೂ ಸಿದ್ದರಾಮಯ್ಯ ಅಭಿವೃದ್ಧಿ ಮಾಡ್ತೀನಿ ಅಂತಾ ಹೇಳಿದ್ದಾರಾ? ನೀರಾವರಿ ಯೋಜನೆಗೆ 5 ಲಕ್ಷ ಕೋಟಿ ರೂ. ನೀಡುವೆ ಅಂತಾ ಹೇಳ್ತಾರೆ. ಐದು ವರ್ಷ ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಏನು ಮಾಡಿದ್ರು? ನೀರೇ ಕೊಡದವರು ಮಜ್ಜಿಗೆ ಕೊಡ್ತಾರಾ ಎಂದು ಪ್ರಶ್ನಿಸಿದರು. ಕೋಲಾರದಲ್ಲಿ ಜನರ ಆಶೀರ್ವಾದದಿಂದ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಾರೆ. ನಮ್ಮ ಅಭ್ಯರ್ಥಿ ಗೆಲ್ಲುವ ಬಗ್ಗೆ ಸಂಪೂರ್ಣ ವಿಶ್ವಾಸ ಇದೆ ಎಂದು ಹೆಚ್.​​ಡಿ. ಕುಮಾರಸ್ವಾಮಿ ಹೇಳಿದರು.

ಸೋಲು, ಗೆಲುವನ್ನು ಜನರು ನಿರ್ಧಾರ ಮಾಡುತ್ತಾರೆ 

ಕೊನೆಯ ಹಂತದಲ್ಲಿಯಾದ್ರು ಯಾವ ಕ್ಷೇತ್ರದಿಂದ ಸ್ಪರ್ದೆ ಮಾಡಬೇಕು ಅಂತ ತೀರ್ಮಾನ ಮಾಡಿದ್ದಾರೆ. ಇನ್ನಾದ್ರು ಮಾಜಿ ಸಿಎಂ ಬಗ್ಗೆ ಲಘುವಾಗಿ ಮಾತನಾಡೋದು ತಪ್ಪುತ್ತದೆ. ಬಿಜೆಪಿಯವರು ಮಾತನಾಡುವುದು ತಪ್ಪುತ್ತದೆ. ಸಿದ್ದರಾಮಯ್ಯ ಅವರು ಅನುಭವಯಿರುವ ದೊಡ್ಡ ರಾಜಕಾರಣಿ. ಸೀನಿಯರ್ ಲೀಡರ್ ಅವರೊಬ್ಬರೇ ಇರೋದು. ಎಲ್ಲಾ ಲೆಕ್ಕಾಚಾರ ಮಾಡಿ, ಸರ್ವೇ ಮಾಡಿ ನಿರ್ಧಾರ ಕೈಗೊಂಡಿದ್ದಾರೆ. ಅವರವರ ಪಕ್ಷದ ಅಭ್ಯರ್ಥಿ ಗೆಲ್ಲಲು ಎಲ್ಲಾ ರಾಜಕೀಯ ಪಕ್ಷಗಳು ಪ್ರಯತ್ನ ಪಡುತ್ತವೆ. ಸೋಲು, ಗೆಲುವನ್ನು ಜನರು ನಿರ್ಧಾರ ಮಾಡುತ್ತಾರೆ ಎಂದರು.

ಇದನ್ನೂ ಓದಿ: Siddaramaiah: ನಾನು ಕೋಲಾರದಿಂದ ಸ್ಪರ್ಧಿಸಲು ಸಿದ್ಧ, ಆದರೆ ಹೈಕಮಾಂಡ್ ತೀರ್ಮಾನಿಸಬೇಕು: ಸಿದ್ಧರಾಮಯ್ಯ

ಸಚಿವ ಆರಗ ಜ್ಞಾನೇಂದ್ರ ಬಗ್ಗೆ ನಾನು ಇಲ್ಲಸಲ್ಲದ ಆರೋಪ ಮಾಡಿಲ್ಲ

ಇನ್ನು ಸಚಿವ ಆರಗ ಜ್ಞಾನೇಂದ್ರ ಬಗ್ಗೆ ನಾನು ಇಲ್ಲಸಲ್ಲದ ಆರೋಪ ಮಾಡಿಲ್ಲ. ರಾಜ್ಯದಲ್ಲಿ ಅತಿಹೆಚ್ಚು ಜನರು ನನ್ನ ಜೊತೆ ಫೋಟೋ ತೆಗೆಸಿಕೊಳುತ್ತಾರೆ. ನನ್ನಷ್ಟು ಯಾವ ರಾಜಕಾರಣಿ ಜತೆಗೂ ಜನ ಫೋಟೋ ತೆಗೆಸಿಕೊಂಡಿಲ್ಲ. ಗೃಹಸಚಿವರ ಜತೆ ಫೋಟೋ ತೆಗೆಸಿಕೊಂಡಿದ್ದು ತಪ್ಪಲ್ಲ. ಆದರೆ ಸ್ಯಾಂಟ್ರೋ ರವಿ ಸರ್ಕಾರದ ಅಧಿಕಾರದಲ್ಲಿ ಭಾಗಿಯಾಗಿದ್ದಾನೆ. ಯಾವ್ಯಾವ ಇಲಾಖೆಗಳಲ್ಲಿ ಎಷ್ಟು ವರ್ಗಾವಣೆ ಆಗಿದೆ ತನಿಖೆ ಮಾಡಿಸಿ. ಆತನೇ ತಾನು ಡಿಜಿ ಮತ್ತು ಐಜಿಪಿ ಜತೆ ನೇರ ಸಂಪರ್ಕದಲ್ಲಿದ್ದೇನೆ ಅಂತಾನೆ. ಹೀಗಿರುವಾಗ ಪೊಲೀಸ್​ ಇಲಾಖೆಯಿಂದ ಹೇಗೆ ತನಿಖೆ ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರು ಭಯೋತ್ಪಾದನೆ ಬಗ್ಗೆ ಮಾತನಾಡುತ್ತಾರೆ. ಆದ್ರೆ ಸ್ಯಾಂಟ್ರೋ ರವಿ ಪ್ರಕರಣ ಅದಕ್ಕಿಂತ ದೊಡ್ಡ ಟೆರರಿಸಂ. ಭಯೋತ್ಪಾದನೆ ಅಮಾಯಕರ ಪ್ರಾಣ ತೆಗೆದುಕೊಳ್ಳುತ್ತದೆ. ಸಮಾಜಘಾತುಕ ಕೃತ್ಯಗಳು ಸಮಾಜವನ್ನೇ ಬಲಿ ತೆಗೆದುಕೊಳ್ಳುತ್ತದೆ. ನೀವು ಪೊಲೀಸರಿಂದ ಈ ವ್ಯಕ್ತಿ ಬಗ್ಗೆ ಏನು ತನಿಖೆ ಮಾಡಿಸುತ್ತೀರಿ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ಆಗಲಿ. ಸ್ಯಾಂಟ್ರೋ ರವಿ ಜಾಮೀನು ತೆಗೆದುಕೊಳ್ಳುವವರೆಗೂ ಬಿಟ್ಟುದ್ದು ಯಾಕೆ ಎಂದು ಹೆಚ್​​.ಡಿ.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್