ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುವೆ: ಸಿದ್ಧರಾಮಯ್ಯ ಘೋಷಣೆ

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಕಾಂಗ್ರೆಸ್​ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುವೆ: ಸಿದ್ಧರಾಮಯ್ಯ ಘೋಷಣೆ
ಸಿದ್ಧರಾಮಯ್ಯImage Credit source: thehansindia.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 06, 2023 | 3:59 PM

ಕಲಬುರಗಿ: ಕಾಂಗ್ರೆಸ್ (Congress)​ ಅಧಿಕಾರಕ್ಕೆ ಬಂದ ದಿನವೇ 10 ಕೆಜಿ ಅಕ್ಕಿ ಕೊಡಲು ಆದೇಶಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಜಿಲ್ಲೆಯ ಕಮಲಾಪುರ ಪಟ್ಟಣದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಬಿಜೆಪಿ ಸರ್ಕಾರ ಜನರ ರಕ್ತ ಕುಡಿಯಲು ಆರಂಭಿಸಿದೆ. ದೇಶದ ಇತಿಹಾಸದಲ್ಲಿ ಇಷ್ಟೊಂದು ಸುಳ್ಳು ಹೇಳಿದವರು ಯಾರೂ ಇಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಅಷ್ಟೊಂದು ಸುಳ್ಳು ಹೇಳುತ್ತಿದ್ದಾರೆ. ಮೂಗಿಗೆ ತುಪ್ಪ ಹಚ್ಚುತ್ತಾರೆಂದು ಕೇಳಿದ್ದೆ, ಹಣೆಗೆ ತುಪ್ಪ ಹಚ್ಚುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ನಾನು ಭಾಷಣ ಮಾಡುವಾಗಲೇ ಬಿಜೆಪಿಯವರು ಕರೆಂಟ್ ತೆಗೆಸಿದ್ದಾರೆ ​ 

ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಷಣ ವೇಳೆ ಕರೆಂಟ್​ ಕೈಕೊಟ್ಟಿದೆ. ವಿದ್ಯುತ್​ ಇಲ್ಲದೆ ಭಾಷಣ ಮಾಡಲಾಗದೆ ಸಿದ್ದರಾಮಯ್ಯ ಪರದಾಡಿದ್ದಾರೆ. ಜನರೇಟರ್ ಹಾಕಿಸಿಕೊಂಡು ಭಾಷಣ ಆರಂಭಿಸಿದ ಸಿದ್ದರಾಮಯ್ಯ, ನಾನು ಭಾಷಣ ಆರಂಭಿಸಿದಾಗಲೇ ಕರೆಂಟ್ ತೆಗೆಸಿದ್ದಾರೆ. ಬಿಜೆಪಿಯ ಮನೆಹಾಳರು ಕರೆಂಟ್​ ತೆಗೆಸಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ? ಹೆಚ್​ಡಿ ಕುಮಾರಸ್ವಾಮಿ ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು

ಕಾಂಗ್ರೆಸ್​ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಮೋದಿ ಬರ್ತಿದ್ದಾರೆ: ಸಿದ್ಧರಾಮಯ್ಯ ಟಾಂಗ್​

ಕಾಂಗ್ರೆಸ್​ ಕಾರ್ಯಕ್ರಮಗಳನ್ನು ಉದ್ಘಾಟಿಸಲು ಮೋದಿ ಬರ್ತಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ನಾವು ಅಡುಗೆ ಮಾಡಿದ್ದೇವೆ, ಅವರು ಬಡಿಸಲು ಬರುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರಿಗೆ ಪ್ರಧಾನಿ ಮೋದಿಯೇ ಬಂಡವಾಳ. ಹೀಗಾಗಿ ಬಿಜೆಪಿಯವರು ಮೋದಿ ಅನ್ನೋ ಗುಮ್ಮನನ್ನು ತೋರಿಸ್ತಿದ್ದಾರೆ. ರಾಜ್ಯಕ್ಕೆ ಮೋದಿ ಬರುವುದರಿಂದ ಬಿಜೆಪಿಗೆ ಯಾವುದೇ ಲಾಭ ಆಗಲ್ಲ. BSY ಪುತ್ರನನ್ನ ಮಂತ್ರಿ ಮಾಡಬೇಕಂತಲೇ ಸಂಪುಟ ವಿಸ್ತರಣೆ ಮಾಡ್ತಿಲ್ಲ. ಎಲ್ಲಾ ಇಲಾಖೆಗಳನ್ನು ಸಿಎಂ ಬೊಮ್ಮಾಯಿ ಅವರೇ ಇಟ್ಟುಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ಸುಮ್ಮ ಸುಮ್ಮನೆ ಹೆದರಿಸೋಕೆ ಬಂದರೆ ತೊಡೆ ತಟ್ಟೋದು ನನಗೆ ಗೊತ್ತಿದೆ: ಸಿದ್ದರಾಮಯ್ಯ

ಈ ಭಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲ್ಲಾ

ಇನ್ನು ಬ್ರಾಹ್ಮಣರನ್ನು ಸಿಎಂ ಮಾಡಲು ಆರ್​ಎಸ್​ಎಸ್ ನಿರ್ಧಾರ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಎಲ್ಲಾ ಮಾತುಗಳನ್ನು ನಾನು ಒಪ್ಪೋದಿಲ್ಲಾ. ಆದ್ರೆ ಯಾರನ್ನು ಸಿಎಂ ಮಾಡಬೇಕು ಅಂತ ಆರ್​ಎಸ್​ಎಸ್​ನವರೇ ನಿರ್ಧಾರ ಮಾಡ್ತಾರೆ. ಆದ್ರೆ ಈ ಭಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲ್ಲಾ ಎಂದು ಹೇಳಿದರು.

ಸಚಿವ ಅಶೋಕ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

ಚುನಾವಣೆ ಬಳಿಕ ಸಿದ್ದರಾಮಯ್ಯ ತೀರ್ಥ ಯಾತ್ರೆಗೆ ಹೋಗಬೇಕಾಗುತ್ತೆ ಎಂಬ ಸಚಿವ ಅಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಆರ್​.ಅಶೋಕ್​​ಗಿಂತ‌ ಮೊದಲು ನಾನು ರಾಜಕೀಯಕ್ಕೆ ಬಂದಿದ್ದೇನೆ. ಕೊನೆಯ ಚುನಾವಣೆ ಎಂದು ಹೇಳುವುದಕ್ಕೆ ಯಾವ ನೈತಿಕತೆ ಇದೆ. ನಾನು 45 ವರ್ಷಗಳಿಂದ ರಾಜಕೀಯದಲ್ಲಿ ಇದ್ದೇನೆ. ರಾಜ್ಯದಲ್ಲಿ ಬಿಜೆಪಿಗೆ ಯಾವಾಗ ಬಹುಮತ ಬಂದಿದೆ. ಈ ಚುನಾವಣೆಯಲ್ಲಿ ಬಿಜೆಪಿಗೆ 50ರಿಂದ 60 ಸ್ಥಾನ ಬರಬಹುದು ಅಷ್ಟೇ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.