ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ ಪ್ರಕರಣ; 6 ಆರೋಪಿಗಳು ಅರೆಸ್ಟ್

| Updated By: ಆಯೇಷಾ ಬಾನು

Updated on: Nov 08, 2021 | 7:55 AM

ಸಾರ್ವಜನಿಕ ಸ್ಥಳದಲ್ಲಿಯೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. 6 ಜನ ಕೊಲೆ ಆರೋಪಿಗಳ ಪೈಕಿ ಐವರು ವಿದ್ಯಾರ್ಥಿಗಳಾಗಿದ್ದಾರೆ.

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ ಪ್ರಕರಣ; 6 ಆರೋಪಿಗಳು ಅರೆಸ್ಟ್
ಕೊಲೆ
Follow us on

ಕಲಬುರಗಿ: ಸಾರ್ವಜನಿಕ ಸ್ಥಳದಲ್ಲಿಯೇ ರೌಡಿಶೀಟರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಆರೋಪಿಗಳನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. 6 ಜನ ಕೊಲೆ ಆರೋಪಿಗಳ ಪೈಕಿ ಐವರು ವಿದ್ಯಾರ್ಥಿಗಳಾಗಿದ್ದಾರೆ. ಆಕಾಶ್ ಜಾಧವ್, ಮುರ್ತುಜಾ, ಸಾಗರ್, ಶುಭಂ, ಅಭಿಷೇಕ್, ಕೌಶಿಕ್‌ ಬಂಧಿತ ಆರೋಪಿಗಳು. ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳು, ಕಾರು ವಶಕ್ಕೆ ಪಡೆಯಲಾಗಿದೆ.

ಸೆಪ್ಟೆಂಬರ್ 4ರಂದು ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಅಭಿಷೇಕ್(24) ಕೊಲೆಯಾಗಿತ್ತು. ಕಲಬುರಗಿ ನಗರದ ವಿದ್ಯಾ ನಗರದ ನಿವಾಸಿ ಅಭಿಷೇಕ್ನನ್ನು ದುಷ್ಕರ್ಮಿಗಳು ಬಸ್ ನಿಲ್ದಾಣದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಮೃತ ಅಭಿಷೇಕ್ ಪೊಲೀಸ್ ಕಾನ್ಸ್ಟೇಬಲ್ ಪುತ್ರ. ಅಭಿಷೇಕ್ ತಂದೆ ಕಲಬುರಗಿ ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಾರೆ. ಕೊಲೆಯಾದ ಅಭಿಷೇಕ್ ಕೂಡ ರೌಡಿ ಶೀಟರ್. ಕಲಬುರಗಿ ನಗರದ ಅಶೋಕ ನಗರ ಸೇರಿದಂತೆ ಅನೇಕ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ ಕೇಸ್ಗಳು ಅಭಿಷೇಕ್ ಮೇಲಿದ್ದವು.

2020 ರಲ್ಲಿ ಕಲಬುರಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿ ಸಾಗರ್ ಅನ್ನೋ ಯುವಕನ ಮೇಲೆ ಅಭಿಷೇಕ್ ಮತ್ತು ಗ್ಯಾಂಗ್ ಅಟ್ಯಾಕ್ ಮಾಡಿತ್ತು. ಹೀಗಾಗಿ ಅದೇ ಸಾಗರ್ ಮತ್ತು ಆತನ ಗ್ಯಾಂಗ್ ನಿಂದ ಬರ್ಬರ ಕೊಲೆ ನಡೆದಿದೆ. ಕೊಲೆಯಾದ ಅಭಿಷೇಕ್ ಮುಂಜಾನೆ ಜಿಮ್ಗೆ ಹೋಗಲು ಮನೆಯಿಂದ ಹೊರ ಬಂದಿದ್ದ. ಮೊದಲು ಪಲ್ಸರ್ ಬೈಕ್ ನಿಂದ ಡಿಕ್ಕಿ ಹೊಡೆಸಿ ಬಳಿಕ ಅಟ್ಟಾಡಿಸಿಕೊಂಡು ಸಾಗರ್ ಮತ್ತು ಗ್ಯಾಂಗ್ ಅಭಿಷೇಕ್ನನ್ನು ಕೊಲೆ ಮಾಡಿದ್ದರು. ನೂರಾರು ಜನರ ನಡುವೆ ಬರ್ಬರವಾಗಿ ಕೊಲೆ ಮಾಡಿದ್ದರು.

ಇದನ್ನೂ ಓದಿ: Crime News: ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪೊಲೀಸ್ ಪೇದೆ ಮಗನ ಬರ್ಬರ ಕೊಲೆ