ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ

ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿಧಾನದ 371 ಜೆ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿದೆ. ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಅಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ್ದು, ಪ್ರತಿ ವರ್ಷ ಸರ್ಕಾರ ಐದು ಸಾವಿರ ಕೋಟಿ ಅನುಧಾನ ನೀಡುತ್ತಿದೆ.

ಸಂವಿಧಾನದ 371 ಜೆ ವಿಧಿಯಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ
ಪ್ರಾತಿನಿಧಿಕ ಚಿತ್ರ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 19, 2023 | 7:32 PM

ಕಲಬುರಗಿ, ಜುಲೈ 19: ಕಲ್ಯಾಣ ಕರ್ನಾಟಕ (Kalyana Karnataka) ಭಾಗಕ್ಕೆ ಸಂವಿಧಾನದ 371 ಜೆ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿದೆ. ಹಿಂದುಳಿದ ಭಾಗ ಎನ್ನುವ ಹಣೆಪಟ್ಟಿ ಅಳಿಸಲು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿದ್ದು, ಪ್ರತಿ ವರ್ಷ ಸರ್ಕಾರ ಐದು ಸಾವಿರ ಕೋಟಿ ರೂ. ಅನುದಾನ ನೀಡುತ್ತಿದೆ. ಜೊತೆಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕೂಡಾ ನೀಡಿದೆ. ಆದರೆ ಮೀಸಲಾತಿ ಸರಿಯಾಗಿ ಸಿಗ್ತಿಲ್ಲಾ, ಅನುದಾನ ಸದ್ಭಳಕೆ ಆಗ್ತಿಲ್ಲಾ ಎನ್ನುವ ಅನೇಕ ಆರೋಪಗಳಿದ್ದವು. ಇದೀಗ ಕಲ್ಯಾಣ ಕರ್ನಾಟಕ ಭಾಗದ ಅನುಷ್ಠಾನದ ಪ್ರಗತಿ ಪರಿಶೀಲನೆಗೆ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಲಾಗಿದೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕಾಗಿ ಸರ್ಕಾರ ಹೊರಡಿಸಲಾದ ಅನುಷ್ಠಾನದ ಪ್ರಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಸಮಿತಿಯನ್ನು ರಚಿಸಲಾಗಿದ್ದು, ಆ ಸಮಿತಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಐಟಿ, ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: ಸೋರುತ್ತಿರುವ ಸರ್ಕಾರಿ ಶಾಲೆ ಕೊಠಡಿಗಳು; ಪ್ರಾಣ ಭಯದಲ್ಲಿಯೇ ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಈ ಹಿನ್ನೆಲೆಯಲ್ಲಿ ಸರ್ಕಾರದ ಜಂಟಿ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ. ಸಂಪುಟ ಉಪ ಸಮಿತಿ ಸದಸ್ಯರನ್ನಾಗಿ, ಸಚಿವರಾದ ಈಶ್ವರ ಖಂಡ್ರೆ, ರಹೀಂ ಖಾನ್, ಡಾ ಶರಣಪ್ರಕಾಶ ಪಾಟೀಲ್, ಡಿ. ಸುಧಾಕರ್, ಬಿ.ನಾಗೇಂದ್ರ ಹಾಗೂ ಎನ್ ಎಸ್ ಬೋಸರಾಜ್ ನೇಮಿಸಲಾಗಿದೆ.

ಇದನ್ನೂ ಓದಿ: ಹೆಡ್ ಕಾನ್​ಸ್ಟೇಬಲ್ ಹತ್ಯೆ ಪ್ರಕರಣ: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು, ಸಾಧ್ಯವಿಲ್ಲ ಎಂದ ಪರಮೇಶ್ವರ

ಭಾರತದ ಸಂವಿಧಾನದ ಅನುಚ್ಛೇದ 371 ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿರುವ ಪ್ರಯುಕ್ತ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿಯನ್ನು ಸಚಿವ ಸಂಪುಟದ ಉಪ ಸಮಿತಿ ಪರಿಶೀಲಿಸಲಿದೆ. ಸದರಿ ಸಮಿತಿಗೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಈ ಸಮಿತಿಗೆ ಅಗತ್ಯ ನೆರವು ನೀಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!