AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ ಜಿಲ್ಲೆಯಲ್ಲಿ ಸ್ಫೂರ್ತಿ ಕಿರಣ ಕಾರ್ಯಕ್ರಮ, ಏನಿದರ ವಿಶೇಷತೆ?

ಶಾಲಾ ಕಾಲೇಜು ಮಕ್ಕಳ ವ್ಯಕ್ತಿತ್ವ ವಿಕಸನ, ಕೌಶಲ್ಯ ಸುಧಾರಣೆ, ಆತ್ಮ ವಿಶ್ವಾಸ ಹೆಚ್ಚಿಸುವಿಕೆ, ಉತ್ತಮ ನಡವಳಿಕೆ, ಪರಿಣಾಮಕಾರಿ ಸಂವಹನ ಕೌಶಲ್ಯ ಬೆಳಸುವ ಅವಶ್ಯಕತೆ ಇದೆ. ಇದೇ ಕಾರಣಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಸ್ಫೂರ್ತಿ ಕಿರಣ ಎಂಬ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ.

ಕಲಬುರಗಿ ಜಿಲ್ಲೆಯಲ್ಲಿ ಸ್ಫೂರ್ತಿ ಕಿರಣ ಕಾರ್ಯಕ್ರಮ, ಏನಿದರ ವಿಶೇಷತೆ?
ಸ್ಫೂರ್ತಿ ಕಿರಣ ಕಾರ್ಯಕ್ರಮ ಹಿನ್ನೆಲೆ ಶಾಲಾ ಮಕ್ಕಳೊಂದಿಗೆ ಕಾಲ ಕಳೆದ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್
ಸಂಜಯ್ಯಾ ಚಿಕ್ಕಮಠ
| Edited By: |

Updated on: Aug 18, 2023 | 7:40 PM

Share

ಕಲಬುರಗಿ, ಆಗಸ್ಟ್ 18: ಶಾಲಾ ಕಾಲೇಜು ಮಕ್ಕಳ ವ್ಯಕ್ತಿತ್ವ ವಿಕಸನ, ಕೌಶಲ್ಯ ಸುಧಾರಣೆ, ಆತ್ಮ ವಿಶ್ವಾಸ ಹೆಚ್ಚಿಸುವಿಕೆ, ಉತ್ತಮ ನಡವಳಿಕೆ, ಪರಿಣಾಮಕಾರಿ ಸಂವಹನ ಕೌಶಲ್ಯ ಬೆಳಸುವ ನಿಟ್ಟಿನಲ್ಲಿ ಕಲಬುರಗಿ (Kalaburagi) ಜಿಲ್ಲೆಯಲ್ಲಿ ಸ್ಫೂರ್ತಿ ಕಿರಣ ಎಂಬ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ.

ಇಂದು ಜಿಲ್ಲಾಧಿಕಾರಿ ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ವಿವಿಧ ಕಾಲೇಜುಗಳಿಗೆ ಭೇಟಿ ನೀಡಿದ್ದರು. ತಮ್ಮ ಕಾಲೇಜಿಗೆ ಹೇಳದೆ ಕೇಳದೆ ಬಂದಿದ್ದ ಅಧಿಕಾರಿಗಳನ್ನು ನೋಡಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಅಚ್ಚರಿಗೊಂಡರು. ಆದರೆ ಕೆಲವೇ ನಿಮಿಷಗಳಲ್ಲಿ ಅಧಿಕಾರಿಗಳ ಭೇಟಿಯಿಂದ ವಿದ್ಯಾರ್ಥಿಗಳು ಖುಷಿ ಪಟ್ಟರು.

ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಗಜಾನನ್ ಬಾಳೆ ಹಾಗೂ ಆಹಾರ ಇಲಾಖೆ ಉಪನಿರ್ದೇಶಕ ಶಾಂತಗೌಡ ವಿ. ಗುಣಕಿ ಜಿಲ್ಲೆಯ ವಿವಿಧ ಕಾಲೇಜುಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಒಂದು ಗಂಟೆ ಕಾಲ ಸಂವಾದ ನಡೆಸಿದರು. ಮಕ್ಕಳ ಸಮಸ್ಯೆ ಆಲಿಸಿದ್ದಲ್ಲದೆ ಅವರಿಗೆ ಜೀವನದಲ್ಲಿ ಅಂದುಕೊಂಡ ಗುರಿ ಸಾಧನೆಗೆ ನೀತಿ ಪಾಠ ಬೋಧಿಸಿದರು.

ಇತ್ತೀಚೆಗೆ ಶಾಲಾ ಕಾಲೇಜು ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರದ ಅವಶ್ಯಕತೆ ಹೆಚ್ಚಾಗಿದೆ. ಜೊತೆಗೆ ಅವರಿಗೆ ಪ್ರೇರಣಾದಾಯಕ ಮಾತುಗಳನ್ನು ಹೇಳಿ, ಅವರನ್ನು ಹುರಿದುಂಬಿಸುವ ಕೆಲಸ ಕೂಡಾ ಆಗಬೇಕಿದೆ. ಆ ಮೂಲಕ ಅವರನ್ನು ಸಮಾಜದಲ್ಲಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಸ್ಫೂರ್ತಿ ಕಿರಣ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ಇದನ್ನೂ ಓದಿ: ಏರಿಯಾದಲ್ಲಿ ಏನೇ ಸಮಸ್ಯೆ ಇದ್ದರೂ ಮನೆಯಲ್ಲೇ ಕುಳಿತುಕೊಂಡು ದೂರು ನೀಡಿ; ರಾಜ್ಯದಲ್ಲೇ ಮೊದಲ ಪ್ರಯತ್ನಕ್ಕೆ ಕಲಬುರಗಿಯಲ್ಲಿ ಚಾಲನೆ

ಇಂತಹದೊಂದು ವಿಶಿಷ್ಟ ಯೋಜನೆಯನ್ನು ಜಿಲ್ಲಾಧಿಕಾರಿ ಪೌಜಿಯಾ ತರುನ್ನುಮ್ ಆರಂಭಿಸಿದ್ದಾರೆ. ಮಕ್ಕಳೇ ಈ ದೇಶದ ಸಂಪತ್ತು. ಅವರಿಗೆ ಸೂಕ್ತ ಮಾರ್ಗದರ್ಶನ ಸಿಗಲಿ ಎಂಬ ಉದ್ದೇಶದಿಂದ ಸ್ಫೂರ್ತಿ ಕಿರಣ ಕಾರ್ಯಕ್ರಮವನ್ನು ರೂಪಿಸಿದ್ದಾರೆ. ಅದರಂತೆ ವಾರದಲ್ಲಿ ಒಂದು ದಿನ ಶಾಲೆ ಕಾಲೇಜಿಗೆ ಉನ್ನತ ಅಧಿಕಾರಿಗಳು ಭೇಟಿ ನೀಡಿ ಮಕ್ಕಳೊಂದಿಗೆ ಬೆರೆತು ಅವರಿಗೆ ಪ್ರೇರಕ, ಸ್ಪೂರ್ಥಿದಾಯಕ ಮಾತುಗಳಿಂದ ಅವರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸಬೇಕೆಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರ ಒತ್ತಾಸೆಯಾಗಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯ ಐಎಎಸ್, ಐಪಿಎಸ್, ಐಎಫ್ಎಸ್ ಹಾಗೂ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಜಿಲ್ಲಾಧಿಕಾರಿ ಪತ್ರದಿಂದ ಪ್ರೇರಣೆಗೊಂಡ ಅನೇಕ ಅಧಿಕಾರಿಗಳು ಇಂದು ಜಿಲ್ಲೆಯ ವಿವಿಧ ಶಾಲೆ, ಕಾಲೇಜುಗಳಿಗೆ ಭೇಟಿ ನೀಡಿದ್ದರು.

ಅಲ್ಲದೆ, ಸ್ವತಃ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರೇ ಕಲಬುರಗಿ ನಗರದ ಹಳೇ ಎಸ್​​ಪಿ ಕಚೇರಿ ಎದುರುಗಡೆ ಇರುವ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿಗೆ ಭೇಟಿ ನೀಡಿದರು. ಮಕ್ಕಳೊಂದಿಗೆ ಬೆರೆತು ಕೆಲ ಹೊತ್ತು ಅವರೊಂದಿಗೆ ಮಾತುಕತೆ ನಡೆಸಿದರು. ಜೀವನದ ಗುರಿ ಸಾಧನೆಯೆಡೆಗೆ ನಿಮ್ಮ ಲಕ್ಷ್ಯ ಇರಬೇಕೆಂದು ಒತ್ತಿ ಹೇಳಿದರು.

ಅಲ್ಲದೆ, ತಾವು ಸಾಗಿ ಬಂದ ಹಾದಿಯನ್ನು ಮಕ್ಕಳಿಗೆ ಮನದಟ್ಟಾಗುವಂತೆ ತಿಳಿಸಿದ ಜಿಲ್ಲಾಧಿಕಾರಿ, ಮಕ್ಕಳೊಂದಿಗೆ ಕೂತು ಸೆಲ್ಫಿಗೆ ತೆಗೆಸಿಕೊಂಡರು. ತಮ್ಮ ನಡುವೆ ಜಿಲ್ಲೆಯ ದಂಡಾಧಿಕಾರಿಗಳನ್ನು ಕಂಡ ಮಕ್ಕಳಲ್ಲಿ ಸಂಭ್ರಮ ಮನೆ ಮಾಡಿತ್ತು.

ಜಿಲ್ಲಾಧಿಕಾರಿ ಕರೆಗೆ ಸ್ಪಂದಿಸಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ಅವರು ಸಹ ಗುರುವಾರ ಕಮಲಾಪೂರ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿ ಸ್ಫೂರ್ತಿದಾಯಕ ಭಾಷಣ ಮಾಡಿದರು. ಕಾಲೇಜು ಭೇಟಿ ಸವಿನೆನಪಿನಲ್ಲಿ ಕಾಲೇಜಿನ ಆವರಣದಲ್ಲಿ ಸಸಿ ನೆಟ್ಟರು.

ಭವಿಷ್ಯಕ್ಕಾಗಿ ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಿ

ಇನ್ನು ಕಲಬುರಗಿಯ ಮುಕ್ತಾಂಬಿಕಾ ಪದವಿ ಪೂರ್ವ ಕಾಲೇಜು ಮತ್ತು ಮಿಲಿಂದ್ ಪದವಿ ಪೂರ್ವ ಕಾಲೇಜಿಗೆ ಪ್ರೊಬೇಷನರ್ ಐಎಎಸ್ ಅಧಿಕಾರಿ ಗಜಾನನ್ ಬಾಲೆ ಅವರು ಭೇಟಿ ನೀಡಿ ಮಕ್ಕಳ ಸಮಸ್ಯೆ ಆಲಿಸಿ ಆತ್ಮೀಯವಾಗಿ ಮಾತಾಡಿಸಿದರು. ಮುಂದೆ ಜೀವನದಲ್ಲಿ ಏನಾಗಬೇಕು ಎಂಬ ಯೋಜನೆ ಈಗಲೇ ಹಾಕಿಕೊಂಡು ಅದರಂತೆ ಸಾಗಬೇಕು. ಭವಿಷ್ಯದ 10 ವರ್ಷದಲ್ಲಿ ಏನಾಗಬೇಕು ಎಂದುಕೊಂಡಿದ್ದೀರೋ ಅದಕ್ಕೆ ಇಂದಿನಿಂದಲೇ ಸಿದ್ಧತೆ ಮಾಡಿಕೊಳ್ಳಿ ಎಂದು ಕಿವಿ ಮಾತು ಹೇಳಿದರು.

ಇತ್ತ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ವಿ. ಗುಣಕಿ ಅವರು ಕಲಬುರಗಿ ನಗರದ ಗುರು ನಾಗಲಿಂಗೇಶ್ವರ ಪದವಿ ಕಾಲೇಜಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಹೊತ್ತು ಕಳೆದು ತಮ್ಮ ವಿಚಾರಗಳನ್ನು ಹಂಚಿಕೊಂಡರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?