ಕಲಬುರಗಿ, (ಮಾರ್ಚ್ 06): ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬ್ಯಾಗ್ನಲ್ಲಿದ್ದ ಬಾಂಬ್ ಬ್ಲಾಸ್ಟ್ ಆಗಿತ್ತು. ಇದರ ಬೆನ್ನಲ್ಲೇ ರಾಜ್ಯದೆಲ್ಲೆಡೆ ಪೊಲೀಸರು ಅಲರ್ಟ್ ಆಗಿದ್ದು, ಬಸ್ ಸ್ಟ್ಯಾಂಡ್, ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ ಪರಿಶೀನಲೆ ನಡೆಸಿದ್ದಾರೆ. ಇದರ ಮಧ್ಯೆ ಕಲಬುರಗಿ(Kalaburagi) ಬಸ್ ನಿಲ್ದಾಣದಲ್ಲಿ ಅನುಮಾನಸ್ಪದ ಬ್ಯಾಗ್ (suspicious bag) ಪತ್ತೆಯಾಗಿದೆ. ಇದನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ (squad bomb squad) ದೌಡಾಯಿಸಿದೆ.
ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಬಳಿ ಇರುವ ಬಸ್ ಸ್ಟಾಪ್ ನಲ್ಲಿ ಬ್ಯಾಗ್ ಪತ್ತೆಯಾಗಿದೆ. ಬಹಳ ಹೊತ್ತು ಅದೇ ಸ್ಥಳದಲ್ಲಿ ಬ್ಯಾಗ್ ಇದೆ. ಅದು ಯಾರದ್ದು ಏನು ಎನ್ನುವುದು ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಬ್ಯಾಗ್ ಕಂಡು ಸ್ಥಳೀಯರು ಆತಂಕದಿಂದ ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿ ಬಾಂಬ್ ಸ್ಕ್ವಾಡ್ ದಳ ಬ್ಯಾಗ್ ತಪಾಸಣೆ ನಡೆಸಿತು. ಆದರೆ ಬ್ಯಾಗ್ನಲ್ಲಿ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ಪೊಲೀಸರು ಬ್ಯಾಗ್ ಅನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ. ಬಳಿಕ ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಇದನ್ನೂ ಓದಿ: Karnataka NIA Raid: ರಾಜ್ಯದ 3 ಜಿಲ್ಲೆಗಳಲ್ಲಿ ಎನ್ಐಎ ಶೋಧ, 3 ಜನ ವಶಕ್ಕೆ
ಒಂದ್ಕಡೆ ಬಾಂಬ್ ಬೆದರಿಕೆ ಆದ್ರೆ, ಮತ್ತೊಂದೆಡೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್ಐಎ ತನಿಖೆ ಶುರು ಮಾಡಿದೆ. ಇನ್ನೊಂದೆಡೆ ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆಯ ಮಾಹಿತಿ ಮೇರೆಗೆ ಎನ್ಎಐ ಅಧಿಕಾರಿಗಳ ಮತ್ತೊಂದಿಷ್ಟು ತಂಡ ದೇಶಾದ್ಯಂತ ಹಲವೆಡೆ ಭರ್ಜರಿ ಕಾರ್ಯಾಚರಣೆ ನಡೆಸಿವೆ. ಇನ್ನು ಪೊಲೀಸರು ಸಹ ಅಲರ್ಟ್ ಆಗಿದ್ದು, ಜನಬಿಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಅಲ್ಲದೇ ಬಸ್ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ಗಳನ್ನು ತಪಾಸಣೆ ನಡೆಸುತ್ತಿದ್ದಾರೆ.
ಹೀಗೆ ಬ್ಯಾಗ್ನಲ್ಲಿ ಬಾಂಬ್ ಫಿಕ್ಸ್ ಮಾಡಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಿಸಲಾಗಿದೆ. ಹೀಗಾಗಿ ಅನುಮಾಸ್ಪದ ವಸ್ತುಗಳು ಕಂಡುಬಂದರೆ ಕೂಡಲೇ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಇದರ ಮಧ್ಯೆ ನಿನ್ನೆ ಬಾಂಬ್ ಬೆದರಿಕೆ ಇಮೇಲ್ ಸಹ ಬಂದಿದೆ. ಇದರಿಂದ ರಾಜ್ಯದೆಲ್ಲಡೆ ಕಟ್ಟೆಚ್ಚರ ವಹಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ