AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆ ಸಚಿವರಾದ ಬಳಿಕ ಕಲಬುರಗಿಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಳ: ಸಿದ್ದಲಿಂಗ ಸ್ವಾಮೀಜಿ ಆರೋಪ

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದಲಿಂಗ ಸ್ವಾಮೀಜಿ, ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಮೀರಿ ದುಷ್ಟಶಕ್ತಿಗಳ ಅಟ್ಟಹಾಸ ಮಿತಿಮೀರಿದೆ. ಕಲಬುರಗಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ.ಗೂಂಡಾಗಳ ಪ್ರಭುತ್ವ ಮಿತಿಮೀರಿದೆ ಎಂದು ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಸಚಿವರಾದ ಬಳಿಕ ಕಲಬುರಗಿಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಳ: ಸಿದ್ದಲಿಂಗ ಸ್ವಾಮೀಜಿ ಆರೋಪ
ಸಚಿವ ಪ್ರಿಯಾಂಕ್ ಖರ್ಗೆ
ದತ್ತಾತ್ರೇಯ ಪಾಟೀಲ್​
| Edited By: |

Updated on: Nov 20, 2023 | 3:24 PM

Share

ಕಲಬುರಗಿ, ನವೆಂಬರ್ 20: ಪ್ರಿಯಾಂಕ್ ಖರ್ಗೆ (Priyank Kharge) ಸಚಿವರಾಗಿ ನೇಮಕವಾದ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ ಎಂದು ಶ್ರೀರಾಮ ಸೇನೆ (Sri Ram Sena) ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ (Siddhalinga Swamiji) ಆರೋಪಿಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಚಿತ್ತಾಪುರದಲ್ಲಿ ಅಕ್ರಮ ನಡೆಯುತ್ತಿದೆ. ಅದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಮ್ಮಕ್ಕಿದೆ‌ ಎಂದು ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಅಪರಿಚಿತರಿಂದ ಮಾರಣಾಂತಿಕ ಹಲ್ಲೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಲಬುರಗಿ ಜಿಲ್ಲೆಯಲ್ಲಿ ಕಾನೂನು ಮೀರಿ ದುಷ್ಟಶಕ್ತಿಗಳ ಅಟ್ಟಹಾಸ ಮಿತಿಮೀರಿದೆ. ಕಲಬುರಗಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಗೂಂಡಾಗಳ ಪ್ರಭುತ್ವ ಮಿತಿಮೀರಿದೆ. ಅಕ್ರಮ ಮರಳು ಲಾರಿ ಹಿಡಿದು ಮಣಿಕಂಠ ರಾಠೋಡ್ ಪೊಲೀಸ್ ಠಾಣೆಗೆ ಒಪ್ಪಿಸಿದರೆ, ಅವರ ಮೇಲೆಯೇ ರಾಬರಿ ಕೇಸ್ ಹಾಕಿದ್ದಾರೆ ಎಂದು ಸ್ವಾಮೀಜಿ ಆರೋಪಿಸಿದ್ದಾರೆ.

ಆಸ್ಪತ್ರೆ ಶುಚಿತ್ವದ ಬಗ್ಗೆ ಪ್ರಶ್ನೆ ಮಾಡಿದಕ್ಕೆ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬುದಾಗಿ ಮಣಿಕಂಠ ಅವರ ಮೇಲೆ ಕೇಸ್ ದಾಖಲಿಸಿದ್ದಾರೆ. ಹಾಗಾದರೆ ಹೋರಾವನ್ನೇ ಮಾಡಬಾರದಾ? ಪ್ರಿಯಾಂಕ್ ಖರ್ಗೆ ಅವರದ್ದು ಬೇರೆಯೇ ಸಂವಿಧಾನ ಇದೆಯೇ? ಜಿಲ್ಲೆಯಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚಾಗಿದೆ. ಮಣಿಕಂಠ ರಾಠೋಡ್ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನ ಶೀಘ್ರ ಬಂಧಿಸಬೇಕು. ಇಲ್ಲದಿದ್ರೆ ಕಲಬುರಗಿ ಎಸ್ಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಮಾಡುವುದಾಗಿ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಕೊಟ್ಟು ಅಧಿಕಾರ ಪಡೆಯೋದು ಕಾಂಗ್ರೆಸ್ ಸಂಸ್ಕೃತಿ: ಸಚಿವ ಪ್ರಿಯಾಂಕ್ ಖರ್ಗೆ‌ಗೆ ವಿಪಕ್ಷ ನಾಯಕ ಆರ್​. ಅಶೋಕ್ ತಿರುಗೇಟು

ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿವೆ. ಪ್ರಿಯಾಂಕ್ ಖರ್ಗೆ ಕಾರ್ಯವೈಖರಿ ಬಗ್ಗೆ ಪ್ರತಿಪಕ್ಷ ಬಿಜೆಪಿ ಆಗಾಗ ವಾಗ್ದಾಳಿ ನಡೆಸುತ್ತಲೇ ಇದೆ. ಈ ಮಧ್ಯೆ, ಪ್ರಿಯಾಂಕ್ ಖರ್ಗೆ ಸಹ ತಮ್ಮ ವಿರುದ್ಧದ ಆರೋಪಗಳಿಗೆ ತೀಕ್ಷ್ಣ ತಿರುಗೇಟು ನೀಡುತ್ತಲೇ ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದತ್ತಾತ್ರೇಯ ಪಾಟೀಲ್​
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More