AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kalaburagi: ಶಾಸಕ ಅವಿನಾಶ್ ಜಾಧವ್, ಬೆಂಬಲಿಗರ ಕಾರ್​ಗಳ ಮೇಲೆ ಕಲ್ಲು ತೂರಾಟ, ಹಲ್ಲೆಗೆ ಯತ್ನ

ಶಾಸಕ ಡಾ.ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಕಾರ್​​ಗಳ ಮೇಲೆ ಕಲ್ಲು ತೂರಾಟ ಮತ್ತು ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದಿದೆ.

Kalaburagi: ಶಾಸಕ ಅವಿನಾಶ್ ಜಾಧವ್, ಬೆಂಬಲಿಗರ ಕಾರ್​ಗಳ ಮೇಲೆ ಕಲ್ಲು ತೂರಾಟ, ಹಲ್ಲೆಗೆ ಯತ್ನ
ಒಡೆದಿರುವ ಕಾರಿನ ಗಾಜು (ಎಡಚಿತ್ರ) ಶಾಸಕ ಅವಿನಾಶ್​ ಜಾದವ್​ (ಬಲಚಿತ್ರ)
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 16, 2023 | 7:48 AM

Share

ಮುಖ್ಯಾಂಶಗಳು

  • ಶಾಸಕ ಡಾ.ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಕಾರ್​​ಗಳ ಮೇಲೆ ಕಲ್ಲು ತೂರಾಟ ಮತ್ತು ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದಿದೆ.
  • ಚಿಂಚೋಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ.ಅವಿನಾಶ್ ಜಾಧವ್ ಚುನಾವಣೆ ಪ್ರಚಾರಕ್ಕೆಂದು ನಿನ್ನೆ (ಏ.15) ರಾತ್ರಿ ಚಂದನಕೇರಾ ಗ್ರಾಮಕ್ಕೆ ಹೋಗಿದ್ದರು.
  • ಈ ವೇಳೆ ಗ್ರಾಮದ ಕೆಲ ಕಿಡಿಗೇಡಿಗಳು ಡಾ. ಬಿ. ಆರ್​​ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲಾ ಅಂತ ನೆಪವೊಡ್ಡಿ ಜಗಳ ತೆಗೆದಿದ್ದಾರೆ.

ಕಲಬುರಗಿ: ಶಾಸಕ ಡಾ.ಅವಿನಾಶ್ ಜಾಧವ್ (Avinash Jadhav) ಮತ್ತು ಬೆಂಬಲಿಗರ ಕಾರ್​​ಗಳ ಮೇಲೆ ಕಲ್ಲು ತೂರಾಟ ಮತ್ತು ಹಲ್ಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಕಾಳಗಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ ನಡೆದಿದೆ. ಚಿಂಚೋಳಿ (Chincholi) ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಶಾಸಕ ಡಾ.ಅವಿನಾಶ್ ಜಾಧವ್ ಚುನಾವಣೆ ಪ್ರಚಾರಕ್ಕೆಂದು ನಿನ್ನೆ (ಏ.15) ರಾತ್ರಿ ಚಂದನಕೇರಾ ಗ್ರಾಮಕ್ಕೆ ಹೋಗಿದ್ದರು. ಈ ವೇಳೆ ಗ್ರಾಮದ ಕೆಲ ಕಿಡಿಗೇಡಿಗಳು ಡಾ. ಬಿ. ಆರ್​​ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲಾ ಅಂತ ನೆಪವೊಡ್ಡಿ ಜಗಳ ತೆಗೆದಿದ್ದಾರೆ. ನಂತರ ಕಾರುಗಳ ಮೇಲೆ ಕಲ್ಲೆಸೆದು, ಡಾ.ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ .

ಈ ಹಿನ್ನೆಲೆ ತಡರಾತ್ರಿ ಚಂದನಕೇರಾ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಕೈಗೊಂಡಿದ್ದಾರೆ. ತಡರಾತ್ರಿಯೇ ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಾಗೇ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಜೀವನ್!
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
ಅಂಗಡಿಗಳ ಮೇಲೆ ಪೊಲೀಸರ ಹಠಾತ್ ದಾಳಿ: 500ಕ್ಕೂ ಹೆಚ್ಚು ರೋಲ್‌ ಮಾಂಜಾ ದಾರ ವಶ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
4 ಎಮ್​ಎಲ್ಸಿ ಸ್ಥಾನಗಳಿಗೆ ಇಂದು ಮತದಾನ ಆರಂಭ
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಆಸಿಯಾ-ಸೌಂದರ್ಯಾ ಪೈಕಿ ಯಾರಾಗ್ತಾರೆ ಮುಂದಿನ ಕ್ಯಾಪ್ಟನ್?
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್