ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ

ರಾಮನಗರದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ಎಸೆದ ಪ್ರಕರಣದ ಬೆನ್ನಲ್ಲೇ ಕಲಬುರಗಿಯಲ್ಲಿ​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಸುಲ್ತಾನಪುರ ರೈಲ್ವೆ ನಿಲ್ದಾಣದ ಬಳಿ ಈ ಪ್ರಕರಣ ನಡೆದಿದ್ದು, ಓರ್ವ ಮಹಿಳಾ ಪ್ರಯಾಣಿಕೆಗೆ ಗಾಯವಾಗಿದೆ.

ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ತೂರಾಟ; ಓರ್ವ ಮಹಿಳೆಗೆ ಗಾಯ
ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ ಮೇಲೆ ಕಲ್ಲು ಎಸೆಯಲಾಗಿದ್ದು, ಮಹಿಳಾ ಪ್ರಯಾಣಿಕರೊಬ್ಬರು ಗಾಯಗೊಂಡಿದ್ದಾರೆ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: Rakesh Nayak Manchi

Updated on: Jul 08, 2023 | 4:23 PM

ಕಲಬುರಗಿ: ಕರ್ನಾಟಕದಲ್ಲಿ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರಣಗಳು ಹೆಚ್ಚಾಗುತ್ತಿದೆ. ನಿನ್ನೆಯಷ್ಟೇ ರಾಮನಗರದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ (Vande Bharat Express Train) ಮೇಲೆ ಕಲ್ಲು ಎಸೆದಿದ್ದ ಪ್ರಕರಣ ನಡೆದಿತ್ತು. ಇಂದು ಚಲಿಸುತ್ತಿದ್ದ ಕಲಬುರಗಿ-ಬೀದರ್​ ಪ್ಯಾಸೆಂಜರ್ ರೈಲಿನ (Kalaburagi-Bidar Passenger) ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಸುಲ್ತಾನಪುರ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಆಶಾ ಕಾರ್ಯಕರ್ತೆಯಾಗಿರುವ ಸುಮಿತ್ರಾ ಎಂಬವರ ಕತ್ತಿನ ಭಾಗಕ್ಕೆ ಗಾಯವಾಗಿದ್ದು, ಸಹ ಪ್ರಯಾಣಿಕರಿಂದ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಸಂಚಾರ ದೇಶದ ವಿವಿಧ ರಾಜ್ಯಗಳಲ್ಲಿ ಆರಂಭಗೊಂಡಿದೆ. ಆದರೆ ಕೆಲವು ಕಿಡಿಗೇಡಿಗಳು ಈ ರೈಲಿನ ಮೇಲೆ ಕಲ್ಲೆಸೆಯುತ್ತಿದ್ದಾರೆ. ಕರ್ನಾಟಕದ ಮೊದಲ ವಂದೇ ಭಾರತ್​ ಎಕ್ಸಪ್ರೆಸ್​ ರೈಲು ಮೈಸೂರು-ಚೆನ್ನೈ ರೈಲಿಗೆ ಕಲ್ಲು ಎಸೆದಿದ್ದ ಘಟನೆ ಕೆ ಆರ್​ ಪುರಂ ಮತ್ತು ಬೆಂಗಳೂರು ಕಂಟೋನ್​​ಮೆಂಟ್​​ ರೇಲ್ವೆ ನಿಲ್ದಾಣದ ಮಧ್ಯೆ ನಡೆದಿತ್ತು. ಘಟನೆಯಲ್ಲಿ ಎರಡು ಗಾಜುಗಳಿಗೆ ಹಾನಿಯಾಗಿತ್ತು.

ಇದನ್ನೂ ಓದಿ: Vande Bharat Express: ಚಿಕ್ಕಮಗಳೂರಿನಲ್ಲೂ ವಂದೇ ಭಾರತ್ ರೈಲಿಗೆ ಮತ್ತೆ ಕಲ್ಲೇಟು: ಸ್ಥಳಕ್ಕೆ ಪೊಲೀಸರ ಭೇಟಿ

ಇದಾದ ನಂತರ ಇತ್ತೀಚೆಗೆ ಆರಂಭವಾದ ಧಾರವಾಡ-ಬೆಂಗಳೂರು ವಂದೇ ಭಾರತ್ ರೈಲಿಗೆ ಚಿಕ್ಕಮಗಳೂರಿನ ಬೀರೂರು ಪಟ್ಟಣದ ಬಳಿ ಕಲ್ಲೆಸೆಯಲಾಗಿತ್ತು. ಇದಾದ ಎರಡು ದಿನಗಳ ನಂತರ (ಜುಲೈ 1) ಕಿಡಿಗೇಡಿಗಳು ದಾವಣಗೆರೆ ನಗರದ ಹೊರವಲಯದ ಜಿಎಂಐಟಿ ಹಿಂಭಾಗದಲ್ಲಿ ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಕಲ್ಲೆಸೆದಿದ್ದರು. ಘಟನೆಯಲ್ಲಿ ಸಿ-4 ಕೋಚ್‌ನ ಕಿಟಕಿ ಗಾಜು ಹಾನಿಗೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಪ್ರಕರಣ ಸಂಬಂಧ ಇಬ್ಬರು ಬಾಲಕರನ್ನು ಪೊಲೂಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ (ಜುಲೈ 7) ರಾಮನಗರ ತಾಲ್ಲೂಕಿನ ವಡೇರಹಳ್ಳಿ ಬಳಿ ಮೈಸೂರನಿಂದ ಬೆಂಗಳೂರು ಕಡೆ ರೈಲು ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿನ ಮೇಲೆ ಕಲ್ಲು ಹೊಡೆಯಲಾಗಿತ್ತು. ಘಟನೆಯಲ್ಲಿ ರೈಲಿನ ಗಾಜು ಪುಡಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ತನಿಖೆ ನಡೆಸುತ್ತಿದ್ದಾರೆ. ಅದರಂತೆ ರಾಜ್ಯದಲ್ಲಿ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರ ಮಾಡಲು ಆರಂಭಿಸಿದ ನಂತರ ಈವರೆಗೆ ಐದು ಕಲ್ಲೆಸೆತ ಪ್ರಕರಣಗಳು ನಡೆದಿವೆ. ಈ ಪೈಕಿ ನಾಲ್ಕು ಪ್ರಕರಣಗಳು ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಹೊಡೆದಿರುವುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ