ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು: KKRTC ಬಸ್ ಚಾಲಕನ ಉದ್ಧಟತನದ ಮಾತಿಗೆ ಆಕ್ರೋಶ

Kalaburagi News: ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ ಬಸ್​ ಚಾಲಕ ಹೇಳಿರುವ ಬಗ್ಗೆ ಆರೋಪ ಕೇಳಿಬಂದಿದೆ. ಈ ಸಂಬಂಧ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ವೈರಲ್ ಆಗುತ್ತಿದೆ.

Follow us
Rakesh Nayak Manchi
|

Updated on:Jul 27, 2023 | 3:47 PM

ಕಲಬುರಗಿ, ಜುಲೈ 27: ನೀನು ಮುಸಲ್ಮಾನಳಾಗಿದ್ದರೆ ಬುರ್ಖಾ ಧರಿಸಿ ಮಾತನಾಡು ಎಂದು ವಿದ್ಯಾರ್ಥಿನಿಗೆ ಕೆಕೆಆರ್​ಟಿಸಿ (KKRTC) ಬಸ್ ಚಾಲಕ ಹೇಳಿದ್ದಾಗಿ ಆರೋಪ ಕೇಳಿಬಂದಿದೆ. ಈ ಸಂಬಂಧ ಬಸ್ ನಿಲ್ದಾಣದಲ್ಲಿ ಶಿಕ್ಷಕ ಮತ್ತು ಚಾಲಕನ ನಡುವೆ ನಡೆದ ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗುತ್ತಿದೆ.

ನೀನು ಮುಸಲ್ಮಾನಳಾ ಎಂದು ಪ್ರಶ್ನಿಸಿ ಹೆಸರು ಹೇಳುವಂತೆ ಚಾಲಕ ಕೇಳಿದ್ದಾರೆ. ಆದರೆ ನಾವು ಹೆಸರು ಹೇಳಲಿಲ್ಲ. ಈ ವೇಳೆ ಚಾಲಕ, ನೀನು ಮುಸಲ್ಮಾನರಾಗಿದ್ದರೆ ಮೊದಲು ಬುರ್ಖಾ ಹಾಕಿಕೊಂಡು ಮಾತನಾಡು ಎಂದು ಹೇಳಿದ್ದಾರೆ. ಅದಾಗ್ಯೂ, ಬಸ್ ಹತ್ತಲು ಯತ್ನಿಸಿದಾಗ ಹತ್ತಲು ಬಿಡಲಿಲ್ಲ ಎಂದು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನು ಓದಿ: Viral Video: ಹರಿಯಾಣ; 13 ಗಂಟೆಗಳ ಕ್ಯಾಬ್​ರೈಡ್​; ಚಾಲಕನಿಗೆ ಹಣ ಕೊಡಲು ನಿರಾಕರಿಸಿದ ಮಹಿಳೆ

ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಿಕ್ಷಕರೊಬ್ಬರು ಬಸ್ ನಿಲ್ದಾಣದಲ್ಲಿ ಚಾಲಕನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಬಸ್ ಟೈರ್ ಪಂಕ್ಚರ್ ಆಗಿದ್ದರಿಂದ ವಿದ್ಯಾರ್ಥಿಗಳನ್ನು ದೂರ ಹೋಗುವಂತೆ ಹೇಳಿದ್ದಾಗಿ ಚಾಲಕ ಹೇಳಿರುವುದಾಗಿ ವಿಡಿಯೋದಲ್ಲಿ ಕೇಳಿಸಬಹುದು. ಅಲ್ಲದೆ, ಕೆಲವು ವಿದ್ಯಾರ್ಥಿಗಳು ಕೂಡ ಚಾಲಕನನ್ನು ಪ್ರಶ್ನಿಸುತ್ತಿರುವುದನ್ನು ಕೂಡ ಕಾಣಬಹುದು.

ಕಲಬುರಗಿ ಜಿಲ್ಲೆಯ ಕಮಲಾಪುರ ಬಸ್ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. ಶಾಲೆಯಿಂದ ಮನೆಗೆ ವಾಪಸ್ ಆಗಲು ಓಕಳಿ ಗ್ರಾಮದ ವಿದ್ಯಾರ್ಥಿಗಳು ಬಸ್ ಹತ್ತಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:54 pm, Thu, 27 July 23

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ