ಆಳಂದದ ದರ್ಗಾದಲ್ಲಿ ನಡೆಯುತ್ತೆ ಶಿವರಾತ್ರಿ ಪೂಜೆ: ದರ್ಗಾ ಸಮಿತಿಗೆ ಸುಪ್ರೀಂನಲ್ಲೂ ಶಾಕ್

ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿದೆ. ದರ್ಗಾ ಸಮಿತಿಯ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಈ ಮಹತ್ವದ ತೀರ್ಪಿನಿಂದ ಮಹಾಶಿವರಾತ್ರಿ ಪೂಜೆಗೆ ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ. ಶಾಂತಿ ಕಾಪಾಡಲು ಕಲಬುರಗಿ ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕೈಗೊಳ್ಳಲಿದೆ.

ಆಳಂದದ ದರ್ಗಾದಲ್ಲಿ ನಡೆಯುತ್ತೆ ಶಿವರಾತ್ರಿ ಪೂಜೆ: ದರ್ಗಾ ಸಮಿತಿಗೆ ಸುಪ್ರೀಂನಲ್ಲೂ ಶಾಕ್
ಸಾಂದರ್ಭಿಕ ಚಿತ್ರ
Edited By:

Updated on: Feb 12, 2026 | 2:23 PM

ಕಲಬುರಗಿ, ಫೆ.12: ಆಳಂದದ ವಿವಾದಿತ ಲಾಡ್ಲೇ ಮಶಾಕ್ ದರ್ಗಾದಲ್ಲಿ ಶಿವರಾತ್ರಿ ಪೂಜೆ (Aland Dargah Shivaratri Puja) ನಡೆಸುವ ವಿಚಾರಕ್ಕೆ ಸಂಬಂಧಿಸಿಂತೆ ಸುಪ್ರೀಂ ಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ನೆನ್ನೆ (ಫೆ.11) ಕಲಬುರಗಿ ಹೈಕೋರ್ಟ್‌ ​ ಪೀಠ ಶಿವರಾತ್ರಿ ಪೂಜೆಗೆ ಅನುಮತಿ ನೀಡಿದ ಬೆನ್ನಲ್ಲೇ, ಇದೀಗ ಸುಪ್ರೀಂ ಕೋರ್ಟ್​ ಹೈಕೋರ್ಟ್​​ನ ಆದೇಶವನ್ನು ಎತ್ತಿ ಹಿಡಿಯುವ ಮೂಲಕ ದರ್ಗಾ ಸಮಿತಿಗೆ ಶಾಕ್​​​ ನೀಡಿದೆ. ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾಶಿವರಾತ್ರಿಯಂದು ಪೂಜೆ ಸಲ್ಲಿಸಲು ಸುಪ್ರೀಂ ಕೋರ್ಟ್ ಸಂಪೂರ್ಣ ಅನುಮತಿ ನೀಡಿದೆ. ದರ್ಗಾ ಆವರಣದಲ್ಲಿ ಪೂಜೆಗೆ ಅವಕಾಶ ನೀಡಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ದರ್ಗಾ ಸಮಿತಿಯು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಪೂಜೆಗೆ ತಡೆ ನೀಡಲು ನಿರಾಕರಿಸಿದೆ.

ಸಂವಿಧಾನದ 32ನೇ ವಿಧಿ (Article 32) ಇಂತಹ ಉದ್ದೇಶಗಳಿಗಾಗಿ ಅಲ್ಲ ಎಂದು ಸುಪ್ರೀಂ ಕೋರ್ಟ್ ಅರ್ಜಿದಾರರ ವಿರುದ್ಧ ಗರಂ ಆಗಿದೆ. ಕೂಡಲೇ ಅರ್ಜಿಯನ್ನು ಹಿಂಪಡೆಯುವಂತೆ ದರ್ಗಾ ಪರ ಅರ್ಜಿದಾರರಿಗೆ ಸೂಚನೆ ನೀಡಿದೆ. ಕರ್ನಾಟಕ ಹೈಕೋರ್ಟ್ ಕೂಡ ದರ್ಗಾ ಆವರಣದಲ್ಲಿರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಅವಕಾಶ ನೀಡಿತ್ತು. ಈಗ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಹೈಕೋರ್ಟಿನ ಆದೇಶವನ್ನು ಎತ್ತಿಹಿಡಿದೆ. ಇದೀಗ ಈ ಆದೇಶದ ಮೂಲಕ ಈ ಬಾರಿಯ ಮಹಾಶಿವರಾತ್ರಿಯಂದು ಪೂಜೆ ನಡೆಸಲು ಇದ್ದ ಕಾನೂನು ಅಡೆತಡೆಗಳು ನಿವಾರಣೆಯಾಗಿವೆ.

ಇದನ್ನೂ ಓದಿ: ಅಳಂದ ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಕೋರ್ಟ್‌ ಗ್ರೀನ್‌ ಸಿಗ್ನಲ್‌

ಆಳಂದದ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿ ರಾಘವ ಚೈತನ್ಯ ಶಿವಲಿಂಗವಿದೆ. ಇಲ್ಲಿ ಪೂಜೆ ಸಲ್ಲಿಸುವ ವಿಚಾರವಾಗಿ ಕಳೆದ ಕೆಲವು ವರ್ಷಗಳಿಂದ ಎರಡು ಸಮುದಾಯಗಳ ನಡುವೆ ಕಾನೂನು ಹೋರಾಟ ನಡೆಯುತ್ತಿದೆ. ಶಾಂತಿ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತವು ಕೆಲವು ನಿರ್ಬಂಧಗಳನ್ನು ವಿಧಿಸುತ್ತಾ ಬಂದಿತ್ತು. ಸುಪ್ರೀಂ ಕೋರ್ಟ್ ಪೂಜೆಗೆ ಅವಕಾಶ ನೀಡಿರುವುದರಿಂದ, ಮಹಾಶಿವರಾತ್ರಿಯಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಕಲಬುರಗಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಆಳಂದನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:28 pm, Thu, 12 February 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us