ಕಲಬುರಗಿ: ಅನೈತಿಕ ಸಂಬಂಧದ ಶಂಕೆ, ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಲಬುರಗಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಸೊನ್ನ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯಲ್ಲಿ ಸಂತೋಷ್(25) ಎಂಬಾತನ ಶವ ಪತ್ತೆಯಾಗಿದ್ದು, ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ(ಏ.8) ಮನೆಯಿಂದ ಹೊರಹೋಗಿದ್ದ ಸಂತೋಷ. ಇಂದು(ಏ.9) ಮುಂಜಾನೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆತನ ಶವ ಪತ್ತೆಯಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ, ಓರ್ವ ಸಾವು
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕವಡಿಮಟ್ಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನು ಬಸ್ನಲ್ಲಿದ್ದ ಕೆಲವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಹುಮ್ನಾಬಾದ್ಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಿದ್ದ ಪ್ರಕರಣ: ಆರೋಪಿ ಭರತ್ ಶೆಟ್ಟಿಗೆ ಕೊಲೆ ಬೆದರಿಕೆ ಸಂದೇಶ
ಕಿಡಿಗೇಡಿಗಳ ಕೃತ್ಯಕ್ಕೆ ಸುಟ್ಟು ಕರಕಲಾದ 6 ಲಕ್ಷ ಮೌಲ್ಯದ 80 ಕ್ವಿಂಟಲ್ ಹತ್ತಿ
ಯಾದಗಿರಿ: ತೋಟದ ಮನೆಯಲ್ಲಿ ಶೇಖರಿಸಿಟ್ಟಿದ್ದ 6 ಲಕ್ಷ ಮೌಲ್ಯದ 80 ಕ್ವಿಂಟಲ್ ಹತ್ತಿಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬದ್ದೆಪಲ್ಲಿ ಗ್ರಾಮದಲ್ಲಿ ನಡೆದಿದೆ. ಕನಕಪ್ಪ ಎಂಬ ರೈತನಿಗೆ ಸೇರಿದ ಹತ್ತಿ ಇದಾಗಿದ್ದು, ಇದರ ಜೊತೆ ತೋಟದ ಮನೆಯಲ್ಲಿ ಕಟ್ಟಿದ್ದ ಎರಡು ಕುರಿಗಳು ಸಹ ಸಾವನ್ನಪ್ಪಿವೆ. ಇದೀಗ ಹತ್ತಿ ಬೆಲೆ ಕುಸಿತ ಆಗಿದ್ದರಿಂದ ರೈತ ತೋಟದ ಮನೆಯಲ್ಲಿ ಹತ್ತಿ ಶೇಖರಿಸಿಟ್ಟಿದ್ದ. ಆದರೆ ನಿನ್ನೆ(ಏ.8) ತಡ ರಾತ್ರಿ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ರೈತ ಕನಕಪ್ಪ ಆರೋಪಿಸಿದ್ದಾರೆ. ಈ ಕುರಿತು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮನೆ ಮುಂದಿನ ಜಮೀನು ವಿಚಾರಕ್ಕೆ ಕಿರಿಕ್; ಎರಡು ಕುಟುಂಬಗಳ ನಡುವೆ ಮಾರಾಮಾರಿ
ಬೆಂಗಳೂರು ಗ್ರಾಮಾಂತರ: ಮನೆ ಮುಂದಿನ ಜಮೀನು ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿಯಾಗಿದ್ದು, ಪರಸ್ಪರ ದೊಣ್ಣೆ ಮತ್ತು ಕಲ್ಲುಗಳಿಂದ ಹಲ್ಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಹಳಿಯೂರು ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ ಮತ್ತು ಮುನಿಆಂಜಿನಪ್ಪ ಕುಟುಂಬಸ್ಥರ ನಡುವೆ ಜಗಳವಾಗಿದೆ. ಹೌದು ಮನೆ ಮುಂದಿನ 6 ಗುಂಟೆ ಜಮೀನು ವಿಚಾರಕ್ಕೆ ಕಳೆದ ಹಲವು ತಿಂಗಳುಗಳಿಂದ ಎರಡು ಕುಟುಂಬಗಳ ನಡುವೆ ವಿವಾದ ನಡೆಯುತ್ತಿದ್ದು. ಹೀಗಾಗಿ ನಿನ್ನೆ ಮನೆ ಮುಂದೆ ಸಿಸಿ ಕ್ಯಾಮರಾ ಅಳವಡಿಕೆಗೆ ಮುಂದಾಗಿದ್ದ ನಾರಾಯಣಸ್ವಾಮಿ ಕುಟುಂಬಸ್ಥರು. ಈ ವೇಳೆ ಸಿಸಿ ಕ್ಯಾಮರಾ ಅಳವಡಿಕೆ ವಿಚಾರಕ್ಕೆ ನಡೆದ ಜಗಳದಲ್ಲಿ ದೊಣ್ಣೆಗಳಿಂದ ಹಲ್ಲೆ ಮಾಡಿಕೊಂಡಿದ್ದಾರೆ. ಇನ್ನು ಹಲ್ಲೆಯಿಂದ ನಾಲ್ಕು ಜನರಿಗೆ ಗಾಯಗಳಾಗಿದ್ದು, ಸರ್ಕಾರಿ ಆಸ್ವತ್ರೆಗೆ ದಾಖಲಿಸಲಾಗಿದೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ