ಕಲಬುರಗಿ: ಹಲಕರ್ಟಾ ಬಳಿ ಭೀಕರ ರಸ್ತೆ ಅಪಘಾತ, ಟ್ಯಾಂಕರ್ – ಆಟೋ ಡಿಕ್ಕಿಯಾಗಿ 6 ಮಂದಿ ಸಾವು
ಟ್ಯಾಂಕರ್ ಡಿಕ್ಕಿ(Accident)ಯಾಗಿ ಆಟೋದಲ್ಲಿ ಆಟೋದಲ್ಲಿ ತೆರಳುತ್ತಿದ್ದ 6 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ(Chittapura)ತಾಲೂಕಿನ ಹಲಕರ್ಟಾ ಬಳಿ ಗುರುವಾರ ಸಂಜೆ ಸಂಭವಿಸಿದೆ.
ಕಲಬುರಗಿ, ನ.09: ಟ್ಯಾಂಕರ್ ಡಿಕ್ಕಿ(Accident)ಯಾಗಿ ಆಟೋದಲ್ಲಿ ಆಟೋದಲ್ಲಿ ತೆರಳುತ್ತಿದ್ದ 6 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ(Chittapura)ತಾಲೂಕಿನ ಹಲಕರ್ಟಾ ಬಳಿ ಗುರುವಾರ ಸಂಜೆ ಸಂಭವಿಸಿದೆ. ಮೃತಪಟ್ಟವರೆಲ್ಲೂ ನಾಲವಾರ ಗ್ರಾಮದ ಒಂದೇ ಕುಟುಂಬದವರಾಗಿದ್ದಾರೆ. ಮೃತರನ್ನು ನಾಸ್ಮೀನ್ ಬೇಗಂ, ಬಿ.ಬಿ.ಫಾತಿಮಾ, ಅಬೂಬಕರ್, ಮರಿಯಮ್, ಮೊಹಮ್ಮದ್ ಪಾಷಾ, ಆಟೋ ಚಾಲಕ ಬಾಬಾ ಎಂದು ಗುರುತಿಸಲಾಗಿದೆ.
ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ತೆರಳುವಾಗ ದುರಂತ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ, ಕೆಕೆಆರ್ಟಿಸಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ; ಚಾಲಕನಿಗೆ ಗಂಭೀರ ಗಾಯ
ಯಾದಗಿರಿ: ಲಾರಿ ಹಾಗೂ ಕೆಕೆಆರ್ಟಿಸಿ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಘಟನೆ ಯಾದಗಿರಿ ತಾಲೂಕಿನ ಸೌದಗಾರ ಕ್ರಾಸ್ ಬಳಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಬಸ್ ಡ್ರೈವರ್ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಇನ್ನು ಈ ಬಸ್ ಯಾದಗಿರಿಯಿಂದ ಸೇಡಂ ಕಡೆ ಹೊರಟ್ಟಿತ್ತು. ಈ ವೇಳೆ ಲಾರಿ ಬಸ್ಗೆ ಗುದ್ದಿದೆ. ಬಸ್ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಯಾದಗಿರಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ:ಮಂಡ್ಯ ಅಪಘಾತ: ಎಚ್ಚೆತ್ತುಕೊಂಡ ಅಧಿಕಾರಿಗಳು: ವಿಸಿ ನಾಲೆಗೆ ತಡೆಗೋಡೆ ನಿರ್ಮಿಸುವ ಕಾರ್ಯ ಆರಂಭ
ಕ್ರೂಸರ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ದುರ್ಮರಣ
ತುಮಕೂರು: ತಾಲೂಕಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕ್ರೂಸರ್ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಗಂಗಾವತಿ ಮೂಲದ ಶಂಕರ್(35), ಸತೀಶ್(40) ಮೃತ ರ್ದುದೈವಿಗಳು. ಅಪಘಾತದಲ್ಲಿ ಮತ್ತೋರ್ವನಿಗೆ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಈ ಕುರಿತು ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಅಪಘಾತ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:42 pm, Thu, 9 November 23