ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ಆರೋಪಿ ಸಾವು

| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2022 | 10:20 AM

ಕೆಟ್ಟು ನಿಂತ ಬೈಕ್​ ಪರಿಶೀಲಿಸುತ್ತಿದ್ದಾಗ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಸ್ನೇಹಿತನನ್ನೇ ಕಿರಾತಕ ಹತ್ಯೆಗೈದಿದ್ದಾನೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ಆರೋಪಿ ಸಾವು
ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ, ಪರಿಶೀಲನೆ.
Follow us on

ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆಸ್ಪತ್ರೆಯ 3ನೇ ಮಹಡಿಯಿಂದ ಬಿದ್ದು ಆರೋಪಿ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ. ಮುನ್ನಾ ಅಲಿಯಾಸ್ ಶೇಖ್ ಸೊಹೆಲ್(30) ಮೃತ ಆರೋಪಿ. ಮುನ್ನಾ ಕಲಬುರಗಿಯ ಹಮಾಲವಾಡಿ ಬಡಾವಣೆಯ ನಿವಾಸಿ. ದರೋಡೆ ಕೇಸ್​ನಲ್ಲಿ ಆರೋಪಿ ಬಂಧಿಸಿದ್ದ ಪೊಲೀಸರು, ಕೋರ್ಟ್​ಗೆ ಹಾಜರುಪಡಿಸುವ ಮುನ್ನ ಕೊವಿಡ್ ಟೆಸ್ಟ್​​ಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಘಟನೆ ನಡೆದಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಮಾರಕಾಸ್ತ್ರಗಳಿಂದ ಕೊಚ್ಚಿ ಸ್ನೇಹಿತನನ್ನೇ ಹತ್ಯೆಗೈದ ಸ್ನೇಹಿತ

ಬೆಳಗಾವಿ: ಕೆಟ್ಟು ನಿಂತ ಬೈಕ್​ ಪರಿಶೀಲಿಸುತ್ತಿದ್ದಾಗ ವ್ಯಕ್ತಿಯ ಬರ್ಬರ ಹತ್ಯೆ ಮಾಡಿರುವಂತಹ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ನಿನ್ನೆ ಸಂಜೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಸ್ನೇಹಿತನನ್ನೇ ಕಿರಾತಕ ಹತ್ಯೆಗೈದಿದ್ದಾನೆ. ಸ್ನೇಹಿತನಿಂದಲೇ ಗದಗಯ್ಯ ಹಿರೇಮಠ(40) ಬರ್ಬರ ಕೊಲೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಕೊಂಡಸಕೊಪ್ಪದ ನಿವಾಸಿ ಗದಗಯ್ಯ, ಸ್ನೇಹಿತ ವಿಠ್ಠಲ ಸಾಂಬ್ರೇಕರ್ ಎಂಬಾತನಿಂದ ಕೃತ್ಯವೆಸಗಲಾಗಿದೆ. ಮಾರುಕಟ್ಟೆಯಿಂದ ಬೈಕ್​ನಲ್ಲಿ ಊರಿಗೆ ತೆರಳುವಾಗ ಘಟನೆ ನಡೆದಿದೆ. ತಾರಿಹಾಳ ಕ್ರಾಸ್ ಬಳಿ ಬೈಕ್ ಕೆಟ್ಟಿದೆ ಅಂತಾ ವಿಠ್ಠಲ ನಿಲ್ಲಿಸಿದ್ದು, ಬೈಕ್ ಪರಿಶೀಲನೆ ಮಾಡುವಾಗ ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 100 ಕೋಟಿ ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡ ಡಿಆರ್​ಐ ಅಧಿಕಾರಿಗಳು

ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಲಾರಿ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ. ಪೊಲೀಸರು ಮೃತ ಮೂವರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಲಾರಿ ಚಾಲಕನಿಗೆ ಗಾಯವಾಗಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಲಾರಿ ಮತ್ತು ಕ್ಯಾಂಟರ್ ಮಧ್ಯೆ ಅಪಘಾತ: ಚಾಲಕ ಸಾವು

ಮಂಡ್ಯ: ಲಾರಿ ಮತ್ತು ಕ್ಯಾಂಟರ್ ಮಧ್ಯೆ ಅಪಘಾತ ಸಂಭವಿಸಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಬಳಿ ನಡೆದಿದೆ. ಕ್ಯಾಂಟರ್‌ನಲ್ಲಿದ್ದ ತಮಿಳುನಾಡಿನ ಮುರುಗೇಶ್, ಕೃಷ್ಣವೇಲು ಇಬ್ಬರಿಗೆ ಗಾಯಗಳಾಗಿದ್ದು, ಅವರಿಗೆ ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕ್ಯಾಂಟರ್​ನಲ್ಲಿ ಕುರಿಗಳನ್ನು ಸಾಗಿಸುತ್ತಿದ್ದು, ಅಪಘಾತದ ರಭಸಕ್ಕೆ ಕ್ಯಾಂಟರ್‌ನಲ್ಲಿದ್ದ ಐದು ಕುರಿಗಳು ಸಾವನ್ನಪ್ಪಿವೆ. ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:20 am, Sat, 27 August 22