545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ; ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

ಆರೋಪಿಗಳ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲದೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳು ನಿರಂತರವಾಗಿ ಅರೆಸ್ಟ್ ಆಗುತ್ತಿದ್ದಾರೆ.

545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಭ್ರಷ್ಟಾಚಾರ ಪ್ರಕರಣ; ದಿವ್ಯಾ ಹಾಗರಗಿ ಸೇರಿ 8 ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ
ಸಾಂದರ್ಭಿಕ ಚಿತ್ರ
Follow us
TV9 Web
| Updated By: sandhya thejappa

Updated on:Jun 11, 2022 | 8:34 AM

ಕಲಬುರಗಿ: 545 ಪಿಎಸ್ಐ ಹುದ್ದೆಗಳಿಗೆ (PSI Recruitment) ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ (CID) ಅಧಿಕಾರಿಗಳು ಕಠಿಣ ಶ್ರಮ ವಹಿಸಿದ್ದಾರೆ. ಆರೋಪಿಗಳ ತನಿಖೆಯಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಅಲ್ಲದೆ ಅಕ್ರಮದಲ್ಲಿ ಭಾಗಿಯಾಗಿದ್ದ ಆರೋಪಿಗಳು ನಿರಂತರವಾಗಿ ಅರೆಸ್ಟ್ ಆಗುತ್ತಿದ್ದಾರೆ. ಇನ್ನು ಅಧಿಕಾರಿಗಳ ಹಾರ್ಡ್​ವರ್ಕ್​ನಿಂದ ಬಂಧನಕ್ಕೆ ಒಳಗಾಗಿರುವ ಯಾರಿಗೂ ಜಾಮೀನು ಸಿಗುತ್ತಿಲ್ಲ. ದಿವ್ಯಾ ಹಾಗರಗಿ, ಮಹಾಂತೇಶ್ ಪಾಟೀಲ್ ಸೇರಿ 8 ಆರೋಪಿಗಳ ಜಾಮೀನು ಅರ್ಜಿಗಳು ತಿರಸ್ಕೃತವಾಗಿವೆ. ನಿನ್ನೆ ಜಾಮೀನು ಅರ್ಜಿ ತಿರಸ್ಕೃತಗೊಳಿಸಿ ಕಲಬುರಗಿ 1ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.

 ರುದ್ರಗೌಡ ಪಾಟೀಲ್​ನ ಮತ್ತಿಬ್ಬರು ಆಪ್ತರಯ ಅರೆಸ್ಟ್: ಪ್ರಕರಣದಲ್ಲಿ ಕಿಂಗ್​ಪಿನ್​ ರುದ್ರಗೌಡ ಪಾಟೀಲ್​ನ ಮತ್ತಿಬ್ಬರು ಆಪ್ತರನ್ನು ಅರೆಸ್ಟ್ ಮಾಡಲಾಗಿದೆ. ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ನಿವಾಸಿ ಅಸ್ಲಂ ಮುಜಾವರ್ ಹಾಗೂ ಕರಜಗಿ ಗ್ರಾಮದ ಮೂಲದ ಮುನಾಫ್ ಜಮಾದಾರ್ ಬಂಧಿತರು. ಇವರಿಬ್ಬರೂ ರುದ್ರಗೌಡ ಜೊತೆ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ಬಂಧಿತ ಆರೋಪಿಗಳು ಬ್ಲೂಟೂತ್ಗಳನ್ನು ಸರಬರಾಜು ಮಾಡುತ್ತಿದ್ದರು. ಜೊತೆಗೆ, ರುದ್ರಗೌಡ ಪಾಟೀಲ್ ಜೊತೆ ಸೇರಿ ಅಭ್ಯರ್ಥಿಗಳ ಜೊತೆ ಇವರಿಬ್ಬರೂ ಡೀಲ್ ಮಾಡುತ್ತಿದ್ದರು. ಅಕ್ರಮವಾಗಿ ಪರೀಕ್ಷೆ ಬರೆಯಲು ಸಿದ್ದರಿದ್ದವರನ್ನು ಹುಡುಕಿ ರುದ್ರಗೌಡ ಪಾಟೀಲ್​ಗೆ ಭೇಟಿ ಮಾಡಿಸುತ್ತಿದ್ದರು.

ಇದನ್ನೂ ಓದಿ: Justin Bieber: ವೈರಸ್​ನಿಂದ ಜಸ್ಟಿನ್​ ಬೀಬರ್​ ಮುಖಕ್ಕೆ ಪಾರ್ಶ್ವವಾಯು; ಖ್ಯಾತ ಗಾಯಕನಿಗೆ ಕಾಡುತ್ತಿದೆ ಗಂಭೀರ ಸಮಸ್ಯೆ

ಕಲಬುರಗಿಯಲ್ಲಿ ಮತ್ತೊಂದು ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಬಯಲು: ನಗರದ ನೊಬೆಲ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿದ್ದ ಪರೀಕ್ಷಾ ಕೇಂದ್ರದಲ್ಲಿ ಇಸ್ಮಾಯಿಲ್ ಖಾದೀರ್ ಅಕ್ರಮವಾಗಿ ಪರೀಕ್ಷೆ ಬರೆದಿದ್ದ. ಕಿಂಗ್ ಪಿನ್ ರುದ್ರಗೌಡ ಪಾಟೀಲ್ ನೀಡಿದ್ದ ಎಲೆಕ್ಟ್ರಾನಿಕ್ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮವಾಗಿ ಪರೀಕ್ಷೆ ಬರೆದು ಇನ್ ಸರ್ವಿಸ್ ಕೋಟಾದಲ್ಲಿ ಆಯ್ಕೆಯಾಗಿದ್ದ. ಸದ್ಯ ಧಾರವಾಡದಲ್ಲಿ ಮೀಸಲು ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿರೋ ಇಸ್ಮಾಯಿಲ್, ರುದ್ರಗೌಡ ಪಾಟೀಲ್ ಸೇರಿ ಆರು ಜನರ ವಿರುದ್ಧ ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಸಿಐಡಿ ಡಿವೈಎಸ್​ಪಿ ಪ್ರಕಾಶ್ ರಾಠೋಡ್ ರಿಂದ ದೂರು ದಾಖಲಾಗಿದೆ. ಕಳೆದ ಒಂದು ವಾರದಿಂದ ಇಸ್ಮಾಯಿಲ್ ಖಾದೀರ್ ನಾಪತ್ತೆಯಾಗಿದ್ದಾನೆ.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:30 am, Sat, 11 June 22

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ