AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕ್ ಖರ್ಗೆಯಿಂದಾಗಿ ಬಿಜೆಪಿ ಹೆಚ್ಚಿನ ಮತಗಳಿಂದ ಗೆಲ್ಲುತ್ತದೆ: ಮಾಜಿ ಶಾಸಕ ರಾಜುಗೌಡ

ಕಲಬುರಗಿಯಲ್ಲಿ ಬಿಜೆಪಿ ಮಾಜಿ ಶಾಸಕ ರಾಜುಗೌಡ ಅವರು ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು. ಖರ್ಗೆ ಯಾವ ಖಾತೆ ಸಚಿವ ಗೊತ್ತಿಲ್ಲ. ನನ್ನ ಎದುರು ಯಾರೂ ಇಲ್ಲ ಅನ್ನೋದು ತಲೆಯಲ್ಲಿ ತುಂಬಿದೆ. ಎಲ್ಲದರಲ್ಲೂ ಅಡ್ಡಡ್ಡ ಬರೋದು ಅವರಿಗೆ ರೂಢಿಯಾಗಿದೆ ಎಂದರು. ಅಲ್ಲದೆ, ನನ್ನ ಹೆಣ ಕೂಡ ಬಿಜೆಪಿಗೆ ಹೋಗಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ರಾಜುಗೌಡ, ಬಿಜೆಪಿ ರಾಮಭಕ್ತರ ಪಕ್ಷ, ಪ್ರಿಯಾಂಕ್​ ಖರ್ಗೆ ಬಿಜೆಪಿಗೆ ಬರುವುದು ಬೇಡ ಎಂದರು.

ಪ್ರಿಯಾಂಕ್ ಖರ್ಗೆಯಿಂದಾಗಿ ಬಿಜೆಪಿ ಹೆಚ್ಚಿನ ಮತಗಳಿಂದ ಗೆಲ್ಲುತ್ತದೆ: ಮಾಜಿ ಶಾಸಕ ರಾಜುಗೌಡ
ಪ್ರಿಯಾಂಕ್ ಖರ್ಗೆ ಮತ್ತು ರಾಜು ಗೌಡ
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: Rakesh Nayak Manchi|

Updated on: Feb 24, 2024 | 6:55 PM

Share

ಕಲಬುರಗಿ, ಫೆ.24: ಕಲಬುರಗಿಯಲ್ಲಿ ಬಿಜೆಪಿ ಮಾಜಿ ಶಾಸಕ ರಾಜುಗೌಡ (Rajugowda) ಅವರು ಪ್ರಿಯಾಂಕ್ ಖರ್ಗೆ (Priyank Kharge) ವಿರುದ್ಧ ವಾಗ್ದಾಳಿ ನಡೆಸಿದರು. ಖರ್ಗೆ ಯಾವ ಖಾತೆ ಸಚಿವ ಗೊತ್ತಿಲ್ಲ. ನನ್ನ ಎದುರು ಯಾರೂ ಇಲ್ಲ ಅನ್ನೋದು ತಲೆಯಲ್ಲಿ ತುಂಬಿದೆ. ಎಲ್ಲದರಲ್ಲೂ ಅಡ್ಡಡ್ಡ ಬರೋದು ಅವರಿಗೆ ರೂಢಿಯಾಗಿದೆ ಎಂದರು.

ಪದೇಪದೆ ಹಿಂದೂಗಳ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತಾಡುತ್ತಾರೆ. ಇವರಿಗೆ ಏನು ಗೋಲ್ಡ್ ಮೆಡಲ್ ಕೊಡುತ್ತಾರಾ ಎಂದು ಆಕ್ರೋಶ ಹೊರಹಾಕಿದ ರಾಜುಗೌಡ, ಬಿಜೆಪಿ, ಆರ್​ಎಸ್​​ಎಸ್​​ಗೆ ನನ್ನ ಹೆಣನೂ ಹೋಗುವುದಿಲ್ಲವೆಂದು ಹೇಳಿದ್ದಾರೆ. ಬಿಜೆಪಿಯಲ್ಲಿ ನಾನೊಬ್ಬನೇ ಉಳಿದರೂ ನಿನ್ನ ಬಿಜೆಪಿಗೆ ಸೇರಿಸಿಕೊಳ್ಳಲ್ಲ. ಬಿಜೆಪಿ ರಾಮಭಕ್ತರ ಪಕ್ಷ, ಪ್ರಿಯಾಂಕ್​ ಬಿಜೆಪಿಗೆ ಬರುವುದು ಬೇಡ. ಈ ಬಾರಿ ಪ್ರಿಯಾಂಕ್ ಅವ​ರಿಂದಲೇ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಬಿಜೆಪಿ ಗೆಲ್ಲುತ್ತದೆ ಎಂದರು.

ಇದನ್ನೂ ಓದಿ: Karnataka Budget Session:  ಸಾಕ್ಷ್ಯ ನೀಡಲು ತನಿಖಾ ಆಯೋಗದ ಮುಂದೆ ಬಸನಗೌಡ ಪಾಟೀಲ್ ಹಾಜರಾಗಿಲ್ಲ: ಪ್ರಿಯಾಂಕ್ ಖರ್ಗೆ, ಸಚಿವ

ಇತ್ತೀಚೆಗೆ, ವಿಧಾನಸಭೆ ಅಧಿವೇಶನದಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ಕಾಂಗ್ರೆಸ್ ನಾಯಕರನ್ನು ಕಾಲೆಳೆಯುವ ಪ್ರಯತ್ನ ಮಾಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು “ಈ ದೇಶದಲ್ಲಿ ಕಟ್ಟರ್ ಕಾಂಗ್ರೆಸಿಗರೇ ಬಿಜೆಪಿ ಬರುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಹೆಸರು ಕೂಡ ಕೇಳಿಬರುತ್ತಿದೆ ಎಂದಿದ್ದರು. ಇದಕ್ಕೆ ಕೂಡಲೇ ಪ್ರತಿಕ್ರಿಯಿಸಿದ್ದ ಪ್ರಿಯಾಂಕ್ ಖರ್ಗೆ, ನನ್ನ ಹೆಣನೂ ಬಿಜೆಪಿಗೆ ಹೋಗಲ್ಲ. ನಮ್ಮ ಕುಟುಂಬದ ರಕ್ತದಲ್ಲೇ ಬಿಜೆಪಿ, ಆರ್​ಎಸ್​ಎಸ್​ ಇಲ್ಲ ಎಂದಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ಯುದ್ಧ ವಿಮಾನ ಪತನ, ಇಬ್ಬರು ಸಾವು
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಜೈಲಿನಲ್ಲೇ ಉಗ್ರರಿಗೆ ರಾಜಾತಿಥ್ಯ, ಗೃಹ ಇಲಾಖೆ ನಿದ್ದೆ ಮಾಡ್ತಿದೆ: ಅಶೋಕ್
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹುದ್ದೆ ಒಪ್ಪಿಕೊಂಡರೂ ಸಿದ್ದರಾಮಯ್ಯ ಸಿಎಂ ಬಿಡಬೇಕಿಲ್ಲ: ಸತೀಶ್ ಜಾರಕಿಹೊಳಿ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಹೇಗಿದೆ ನೋಡಿ ತುಕಾಲಿ ಸಂತೋಷ್ ಹೆಣ್ಣಿನ ಅವತಾರ
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗಡ್ಕರಿಯವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದು ಸಂತೋಷ: ಶಿವಕುಮಾರ್
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗುಜರಾತ್​​ನಲ್ಲಿ ಸೇತುವೆ ಕುಸಿತ, ನದಿಗೆ ಬಿದ್ದ ವಾಹನಗಳು, 9 ಮಂದಿ ಸಾವು
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ಗಂಭೀರ ನಡಿಗೆ, ಧೈರ್ಯಶಾಲಿ ಅನೆಗಳನ್ನು ಅಯ್ಕೆ ಮಾಡಲಾಗುತ್ತದೆ: ಅರಣ್ಯಾಧಿಕಾರಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ನಮೀಬಿಯಾದ ಸಾಂಪ್ರದಾಯಿಕ ಡ್ರಮ್ ನುಡಿಸಿದ ಪ್ರಧಾನಿ ಮೋದಿ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಬ್ರೆಜಿಲ್​​ನಲ್ಲಿ ಮೋದಿ: ಶಿವತಾಂಡವ ಸ್ತೋತ್ರ, ಭರತನಾಟ್ಯ, ಸಾಂಬಾ ರೆಗಿ ಗೀತೆ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ
ಕೋಳಿ ಸಾರಿನ  ಋಣ; ತರುಣ್ ಜೊತೆ ಸಿನಿಮಾ ಮಾಡ್ತಾರೆ ಶಿವಣ್ಣ