RSS ವೇಷಧರಿಸಿ ಲಾಠಿ ಹಿಡಿದು ಫೋಸ್ ಕೊಟ್ಟ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು; ಫೋಟೋ ವೈರಲ್

| Updated By: ಆಯೇಷಾ ಬಾನು

Updated on: Jan 07, 2023 | 10:00 AM

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮೂವರು ಪ್ರಾಧ್ಯಾಪಕರು ಆರ್‌ಎಸ್‌ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟಿದ್ದಾರೆ. ಈ ಫೋಟೋ ವೈರಲ್ ಆಗಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ.

RSS ವೇಷಧರಿಸಿ ಲಾಠಿ ಹಿಡಿದು ಫೋಸ್ ಕೊಟ್ಟ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು; ಫೋಟೋ ವೈರಲ್
ವಿದ್ಯಾರ್ಥಿ ಜೊತೆ RSS ವೇಷಧರಿಸಿ ಲಾಠಿ ಹಿಡಿದು ಫೋಸ್ ಕೊಟ್ಟ ಪ್ರಾಧ್ಯಾಪಕರು
Follow us on

ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮೂವರು ಪ್ರಾಧ್ಯಾಪಕರು ಆರ್‌ಎಸ್‌ಎಸ್ ಯೂನಿಫಾರ್ಮ್ ಹಾಕಿ ಲಾಠಿ ಹಿಡಿದು ಫೋಸ್ ಕೊಟ್ಟಿದ್ದಾರೆ. ಈ ಫೋಟೋ ವೈರಲ್ ಆಗಿದ್ದು ಇದಕ್ಕೆ ವಿರೋಧ ವ್ಯಕ್ತವಾಗಿದೆ.

ಸಹಾಯಕ ಪ್ರಾಧ್ಯಾಪಕರಾದ ಸಾರ್ವಜನಿಕ ಆಡಳಿತ ವಿಭಾಗದ ಡಾ.ಅಲೋಕ್ ಕುಮಾರ್ ಗೌರವ್‌, ಮನಃಶಾಸ್ತ್ರದ ವಿಭಾಗದ ಡಾ.ವಿಜಯೇಂದ್ರ ಪಾಂಡೆ ಮತ್ತು ಜೀವ ವಿಜ್ಞಾನ ವಿಭಾಗದ ಡಾ.ರಾಕೇಶ್ ಕುಮಾರ್ ಅವರು RSS ವೇಷಧಾರಿ ವಿದ್ಯಾರ್ಥಿ ಜೊತೆ ತಾವು ವೇಷಧಾರಿಗಳಾಗಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋ ಸದ್ಯ ವೈರಲ್ ಆಗಿದ್ದು ಚರ್ಚೆಗೆ ಗ್ರಾಸವಾಗಿದೆ. ಕೆಲ ದಿನಗಳ ಹಿಂದೆ ವಿವಿ ಕ್ಯಾಂಪಸ್‌ನಲ್ಲಿ ನಡೆದಿದ್ದ ಆರ್‌ಎಸ್‌ಎಸ್ ಪಥಸಂಚಲನದ ವೇಳೆ ಈ ಫೋಟೋವನ್ನು ಕ್ಲಿಕ್ಕಿಸಲಾಗಿತ್ತು.

ಇದನ್ನೂ ಓದಿ: ಖಾಸಗಿ ಶಾಲೆಗಳಿಗೆ ಶುಲ್ಕ ನಿಗದಿಪಡಿಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ವಿಶ್ವವಿದ್ಯಾಲಯದ ಗಮನಕ್ಕೆ ತರದೇ ಬೋಧನೆ ಮತ್ತು ಸಂಶೋಧನೆಗೆ ಹೊರತುಪಡಿಸಿ ಇತರೆ ಚಟುವಟಿಕೆಗಳಲ್ಲಿ ಬೋಧಕ ವರ್ಗವು ತೊಡಗಬಾರದು ಮತ್ತು ವಿಶ್ವವಿದ್ಯಾಲಯದ ನೌಕರರು ಯಾವ ಸಂಘಟನೆ ಜೊತೆ ಗುರುತಿಸಿಕೊಳ್ಳಬಾರದು ಎಂಬ ನಿಯಮವಿದೆ’ ಎಂದು ಸಿಯುಕೆ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಆದ್ರೆ ಕೇಂದ್ರೀಯ ವಿಶ್ವವಿದ್ಯಾಲಯದ ಅಧ್ಯಾಪಕರು ಬೋಧನೆಗೆ ಮಾತ್ರ ಸೀಮಿತರಾಗಬೇಕು. ಬೇರೆ ಚಟುವಟಿಕೆ ನಡೆಸಬಾರದು. ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರು ಆರ್‌ಎಸ್‌ಎಸ್‌ ಗಣವೇಷಧಾರಿಗಳಾಗಿದ್ದು ನನ್ನ ಗಮನಕ್ಕೆ ಬಂದಿಲ್ಲ. ಈ ಕುರಿತು ಪರಿಶೀಲಿಸುವೆ’ ಎಂದು ವಿಶ್ವವಿದ್ಯಾಲಯದ ಕುಲಸಚಿವ ಡಾ.ಬಸವರಾಜ ಡೋಣುರ ಮಾಹಿತಿ ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:00 am, Sat, 7 January 23