Polluted Water: ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರ ಸಾವು, 60ಕ್ಕೂ ಹೆಚ್ಚು ಜನ ಅಸ್ವಸ್ಥ

ಗ್ರಾಮದಲ್ಲಿ ಕಳೆದ 15 ದಿನಗಳಿಂದ ವಾಂತಿ ಬೇಧಿ ಉಲ್ಬಣಗೊಂಡಿದೆ. ಕಲುಷಿತ ನೀರು ಸೇವನೆಯಿಂದ ಜನರಲ್ಲಿ ವಾಂತಿ ಬೇಧಿ ಹೆಚ್ಚಾಗಿದೆ.

Polluted Water: ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರ ಸಾವು, 60ಕ್ಕೂ ಹೆಚ್ಚು ಜನ ಅಸ್ವಸ್ಥ
ಕಲುಷಿತ ನೀರು ಸೇವಿಸಿ ವಾಂತಿ, ಭೇದಿ
Updated By: ಆಯೇಷಾ ಬಾನು

Updated on: Sep 30, 2021 | 11:16 AM

ಕಲಬುರಗಿ: ಕಲುಷಿತ ನೀರು ಸೇವಿಸಿ ವಾಂತಿ, ಭೇದಿಯಾಗಿ ಇಬ್ಬರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ದಸ್ತಾಪುರ ಗ್ರಾಮದಲ್ಲಿ 48 ವರ್ಷದ ಕಮಲಾಬಾಯಿ ಕೊಬ್ರೆ ಹಾಗೂ ನಾಗೂರು ಗ್ರಾಮದ 55 ವರ್ಷದ ಮಹಿಳೆ ದ್ರೌಪದಿ ಮೃತಪಟ್ಟ ಮಹಿಳೆಯರು.

ಕಲುಷಿತ ನೀರು ಸೇವನೆಯಿಂದ ಗ್ರಾಮದಲ್ಲಿ ಕಳೆದ 15 ದಿನಗಳಿಂದ ವಾಂತಿ ಬೇಧಿ ಉಲ್ಬಣಗೊಂಡಿದೆ. ಮಕ್ಕಳು, ಮಹಿಳೆಯರು ಸೇರಿ 60 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಕಮಲಾಪೂರ ಸರಕಾರಿ ಆಸ್ಪತ್ರೆ, ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶುದ್ಧ ಕುಡಿಯುವ ನೀರು ನೀಡದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಮತ್ತೊಂದೆಡೆ ಮೃತ ಕಮಲಾಬಾಯಿ ಕೊಬ್ರೆ ಮತ್ತು ದ್ರೌಪದಿ ಕಾಲರಾದಿಂದ ಮೃತಪಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತರು ಕೆಲವು ದಿನಗಳಿಂದ ವಾಂತಿ ಭೇದಿಯಿಂದ ಬಳಲುತ್ತಿದ್ದರು. ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾರೆಂದ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಆದ್ರೆ ವೈದ್ಯರು ಕಾಲರಾದಿಂದ ಮೃತಪಟ್ಟಿರುವುದಾಗಿ ಶಂಕಿಸಿದ್ದು ಈ ಬಗ್ಗೆ ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ದೃಢಪಡಿಸಿಲ್ಲ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಲುಷಿತ ನೀರು ಸೇವಿಸಿ 60 ಜನರಿಗೆ ಕೆಮ್ಮು, ನೆಗಡಿ, ಭೇದಿ

Published On - 11:05 am, Thu, 30 September 21