ಲಾರಿ-ಕಾರು ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ
ಕಲಬುರಗಿ: ಲಾರಿ ಮತ್ತು ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಕಮಲಾಪುರ ತಾಲೂಕಿನ ಕುದ್ರಿಮೋತಿ ಬಳಿ ಸಂಭವಿಸಿದೆ. ರೋಷನ್ ದರ್ಗಿ(20), ಸಂತೋಷ್(24) ಮೃತ ದುರ್ದೈವಿಗಳು. ಮೃತ ರೋಷನ್ ಮತ್ತು ಸಂತೋಷ್ ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on
ಕಲಬುರಗಿ: ಲಾರಿ ಮತ್ತು ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಕಮಲಾಪುರ ತಾಲೂಕಿನ ಕುದ್ರಿಮೋತಿ ಬಳಿ ಸಂಭವಿಸಿದೆ. ರೋಷನ್ ದರ್ಗಿ(20), ಸಂತೋಷ್(24) ಮೃತ ದುರ್ದೈವಿಗಳು.
ಮೃತ ರೋಷನ್ ಮತ್ತು ಸಂತೋಷ್ ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.