ಕಲಬುರಗಿ: ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ
ಇಬ್ಬರು ಅಪ್ರಾಪ್ತ ಬಾಲಕರು ಚಾಕು ತೋರಿಸಿ ಹೆದರಿಸಿ ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಾತಿನಿಧಿಕ ಚಿತ್ರImage Credit source: Shutterstock
ಕಲಬುರಗಿ, (ಡಿಸೆಂಬರ್ 19): ಅಪ್ರಾಪ್ತ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ(Rape) ಎಸಗಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಕಾಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ಮತ್ತು 16 ವರ್ಷದ ಇಬ್ಬರು ಬಾಲಕರು 10 ವರ್ಷದ ಬಾಲಕಿಗೆ ಚಾಕು ತೋರಿಸಿ ಬೆದರಿಸಿ ಅತ್ಯಾಚಾರ ಎಸಗಿದ್ದಾರೆ. ಅಲ್ಲದೇ ಅತ್ಯಾಚಾರ ಮಾಡಿ ಪರಸ್ಪರ ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ. ಬಾಲಕಿ ಹೆತ್ತವರು ಹೊಟ್ಟೆಪಾಡಿಗಾಗಿ ಮುಂಬೈನಲ್ಲಿ ಕೆಲಸಕ್ಕೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಅತ್ಯಾಚಾರಕ್ಕೊಳಗಾದ ಬಾಲಕಿ ಸಂಬಂಧಿಕರ ಮನೆಯಲ್ಲಿದ್ದು ಶಿಕ್ಷಣ ಕಲಿಯುತ್ತಿದ್ದಾಳೆ. ಸದ್ಯ ಈ ಬಗ್ಗೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ.