AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ತಾಪುರದಲ್ಲಿ ಪಥಸಂಚಲನ ಫೈಟ್: RSS, ಭೀಮ ಆರ್ಮಿ ಬಳಿಕ ಮತ್ತೆರಡು ಸಂಘಟನೆಗಳಿಂದ ಅರ್ಜಿ

ಸಚಿವ ಪ್ರಿಯಾಂಕ್ ಖರ್ಗೆ ತವರು ಕ್ಷೇತ್ರ ಚಿತ್ತಾಪುರದಲ್ಲಿ ನವೆಂಬರ್ 2ರಂದು ಆರ್‌ಎಸ್‌ಎಸ್ ಪಥಸಂಚಲನಕ್ಕೆ ಪ್ಲ್ಯಾನ್ ಮಾಡಿದ್ದು, ಅನುಮತಿಗಾಗಿ ಕಲಬುರಗಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದೆ. ಆದ್ರೆ, ಅಂದೆ ನಮಗೂ ಪಥಸಂಚಲನಕ್ಕೆ ಪರ್ಮಿಷನ್ ನೀಡಿ ಎಂದು ದಲಿತ ಸಂಘಟನೆ ಭೀಮ ಆರ್ಮಿ ಮನವಿ ಮಾಡಿದೆ. ಅಲ್ಲದೇ ಕುರುಬ ಸಮುದಾಯವೂ ಸಹ ಎಸ್​ಟಿ ಮೀಸಲಾತಿಗಾಗಿ ಪ್ರತಿಭಟನೆ ನಡೆಸಲು ಮುಮದಾಗಿದೆ. ಈ ಎಲ್ಲಾ ಬೆಳವಣಿಗಳ ನಡುವೆ ಇದೀಗ ಮತ್ತೆರಡು ಸಂಘಟನೆಗಳು ಚಿತ್ತಾಪುರ ಅಖಾಡಕ್ಕಿಳಿದಿವೆ.

ಚಿತ್ತಾಪುರದಲ್ಲಿ ಪಥಸಂಚಲನ ಫೈಟ್: RSS, ಭೀಮ ಆರ್ಮಿ ಬಳಿಕ  ಮತ್ತೆರಡು ಸಂಘಟನೆಗಳಿಂದ ಅರ್ಜಿ
Chittapur
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Oct 23, 2025 | 7:11 PM

Share

ಕಲಬುರಗಿ, (ಅಕ್ಟೋಬರ್ 23): ಸಚಿವ ಪ್ರಿಯಾಂಕ್ ಖರ್ಗೆ  (Priyank Kharge)ಅವರ ತವರು ಕ್ಷೇತ್ರ ಚಿತ್ತಾಪುರ (Chittapur) ಸದ್ಯ ರಾಜ್ಯಾಧ್ಯಂತ ಸುದ್ದಿಯಲ್ಲಿದೆ. ಆರ್​​ಎಸ್​ಎಸ್​  (RSS)ಪಥಸಂಚಲನ ಸಂಬಂಧ ಭಾರೀ ಪೈಪೋಟಿ ನಡೆದಿದ್ದು, ನ್ಯಾಯಾಲಯದ ಮೆಟ್ಟಿಲೇರಿ ಇದೀಗ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​ಎಸ್​ ಅನುಮತಿಗಾಗಿ ಅರ್ಜಿ ಸಲ್ಲಿಸಿದೆ. ಇದಕ್ಕೆ ಪ್ರತಿಯಾಗಿ ದಲಿತ ಸಂಘಟನೆ ಭೀಮ್ ಆರ್ಮಿ ಸಹ ಅಂದೇ ಪಥಸಂಚಲನಕ್ಕೆ ಅನುಮತಿ ನೀಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ. ಹಾಗೇ ಕುರುಬ ಸಮುದಾಯ ಸಹ ಎಸ್​​ಟಿ ಮೀಸಲಾತಿಗಾಗಿ ಪ್ರತಿಭಟನೆ ಮಾಡಲು ಮುಂದಾಗಿದೆ. ಇದರ ನಡುವೆ ಇದೀಗ ರೈತ ಸಂಘಟನೆ ಹಾಗೂ ಕ್ರಿಶ್ಚಿಯನ್ ಸಮುದಾಯ (Farmers And christian) ಸಹ ಪಥಸಂಚಲನ ಮಾಡಲು ನಿರ್ಧರಿಸಿದೆ. ಇದರಿಂದ ಎಲ್ಲರ ಚಿತ್ತ ಇದೀಗ ಚಿತ್ತಾಪುರದತ್ತ ನೆಟ್ಟಿದೆ.

ರೈತ ಪಥಸಂಚಲನ

ಯಾವಾಗ ಇಲ್ಲಿ ಆರ್ ಎಸ್ ಎಸ್ ಪಥಸಂಚಲನ ಮಾಡಲು ಹೈಕೋರ್ಟ್ ಮೆಟ್ಟಿಲೆರಿತೋ ದಿನಕ್ಕೊಂದು ತಿರುವು ಪಡೆಯುತ್ತಲೇ ಇದೆ. ಸದ್ಯ ಆರ್ ಎಸ್ ಎಸ್ ನವೆಂಬರ್ 2ರಂದು ಪಥಸಂಚಲನ ಮಾಡುತ್ತೇವೆ ಎಂದು ಹೇಳಿದ್ದೇ ತಡ ನಾನು ಮುಂದು ತಾ ಮುಂದು ಎನ್ನುವಂತೆ ಬೇರೆ ಬೇರೆ ಸಂಘಟನೆಗಳು ಆರ್ಜಿ ಸಲ್ಲಿಸುತ್ತಲೇ ಇವೆ. ಇವತ್ತು ರೈತಸಂಘಟನೆ ಕೂಡಾ ಎಂಟ್ರಿ ಕೊಟ್ಟಿದೆ. ಹೌದು…ನವೆಂವರ್ 2ರಂದೇ ಕೇಂದ್ರ ಸರ್ಕಾರದ ವಿರುದ್ದ ಅತಿವೃಷ್ಟಿ ಪರಿಹಾರಕ್ಕಾಗಿ ಪ್ರತಿಭಟನೆ ನಡೆಸಲು ಮುಂದಾಗಿದೆ. ರೈತ ಪಥಸಂಚಲನ ಸಂಬಂಧ ರಾಜ್ಯ ರೈತ ಸಂಘಟನೆ ಹಸಿರ ಸೇನೆ ಬಣ ಅನುಮತಿಗಾಗಿ ಆರ್ಜಿ ಹಾಕಿದೆ. ಆರ್ ಎಸ್ ಎಸ್ ರೈತರ ಉದ್ದಾರಕ್ಕಾಗಿ ಮಾಡುತ್ತುಲ್ಲ. ನಾವು ರೈತರಿಗಾಗಿ ಹಾಗೂ ಎನ್ ಡಿಆರ್ ಎಫ್ ನಲ್ಲಿ ಕೇಂದ್ರ ಸರ್ಕಾರ ನಮಗೆ ಕಡಿಮೆ ಅನುದಾನ ನೀಡಿರುವುದನ್ನು ವಿರೋಧಿಸಿ ರೈತ ಪಥಸಂಚಲನ ಮಾಡಲಾಗುತ್ತೆ ಎಂದು ತಿಳಿಸಿದೆ.

ಇದನ್ನೂ ಓದಿ: ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ತ್ರಿಕೋನ ಸ್ಪರ್ಧೆ: ಆರ್​ಎಸ್ಎಸ್, ಭೀಮ ಆರ್ಮಿ ಬಳಿಕ ಮತ್ತೊಂದು ಸಂಘಟನೆ ಎಂಟ್ರಿ

ಕ್ರಿಶ್ಚಿಯನ್ ಸಮೂದಾಯದಿಂದ ಪ್ರಾರ್ಥನ ನಡಿಗೆ

ಇನ್ನು ನವೆಂಬರ್ 2ರಂದು ಚಿತ್ತಾಪುರದಲ್ಲಿ ಆರ್​​​ಎಸ್​​ಎಸ್​​ ಪಥಸಂಚಲನ ಮಾಡಲು ರಾಜ್ಯ ಕ್ರಿಶ್ಚಿಯನ್ ವೆಲ್ಪೇರ್ ಸೊಸೈಟಿ ಸಹ ಅನುಮತಿಗಾಗಿ ಆರ್ಜಿ ಸಲ್ಲಿಸಿದೆ. ನವೆಂಬರ್ 2 ಭಾನುವಾರವಾರವಾಗಿರುವುದರಿಂದ ಕ್ರಿಶ್ಚಿಯನ್ ಸಮೂದಾಯ ಸಹಜವಾಗೇ ಪ್ರಾರ್ಥನೆ ಮಾಡುತ್ತೆ. ಆದ್ರೆ ಅಂದು ಚರ್ಚ್​ ಬದಲಿಗೆ ಪ್ರಾರ್ಥನ ನಡಿಗೆ ಮಾಡುತ್ತೆವೆ ಎಂದು ಆರ್ಜಿ ಸಲ್ಲಿಕೆ ಮಾಡಿದೆ. ಆರ್ ಎಸ್ ಎಸ್ ಗೆ ಕೌಂಟರ್ ಆಗಿ ನಾವು ಪ್ರಾರ್ಥನ ನಡಿಗೆ ಮಾಡುತ್ತಿಲ್ಲ.ಬದಲಾಗಿ ಶಾಂತಿ ಸುವ್ಯವಸ್ಥೆ ಅರಿವು ಮೂಡಿಸಲು ಮಾಡುತ್ತಿದ್ದೇವೆ. ಇದನ್ನ ಆರ್ ಎಸ್ ಎಸ್ ಕೌಂಟರ್ ಅಂತ ತಿಳಿದುಕೊಂಡರೆ ಸ್ವಾಗತ ಮಾಡುತ್ತೇವೆ ಎಂದು ಕ್ರಿಶ್ಚಿಯನ್ ಸಮೂದಾಯದ ಮುಖಂಡರು ಹೇಳುತ್ತಿದ್ದಾರೆ.

ನ.2ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ 7 ಅರ್ಜಿ

ಸದ್ಯ ಇಲ್ಲಿವರೆಗೆ ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥಸಂಚಲನ ಮಾಡಲು ಒಟ್ಟು ಏಳು ಅರ್ಜಿ ಸಲ್ಲಿಕೆಯಾಗಿವೆ. ಎಲ್ಲಾ ಆರ್ಜಿಗಳನ್ನ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.ಅಲ್ಲದೇ ಈ ಬಗ್ಗೆ ಜಿಲ್ಲಾಡಳಿತ ಸಹ ಕೋಟ್೯ ವರದಿ ನೀಡಲಿದ್ದು, ಅದರ ಆದಾರದ ಮೇಲೆ ಕೋಟ್೯ ನಾಳೆ (ಅಕ್ಟೋಬರ್ 24) ವಿಚಾರಣೆ ನಡೆಸುತ್ತೆ. ಇದರಿಂದ ನಾಳೆ ನ್ಯಾಯಾಲಯದಲ್ಲಿ ಯಾರಿಗೆ ಅವಕಾಶ ಸಿಗುತ್ತೆ ಎನ್ನುವುದು ಕೂತುಹಲ ಮೂಡಿಸಿದೆ.

ಒಟ್ಟಿನಲ್ಲಿ ಆರ್ ಎಸ್ ಎಸ್ ಪಥಸಂಚಲನಕ್ಕೆ ಆರ್ಜಿ ಸಲ್ಲಿಸುತ್ತಿದ್ದಂತೆ ಉಳಿದವರು ಜಿದ್ದಿಗೆ ಬಿದ್ದವರಂತೆ ಆರ್ಜಿ ಸಲ್ಲಿಸಿದ್ದಾರೆ. ಅವೆಲ್ಲವೂ ನಾಳೆ ನ್ಯಾಯಾಲಯದ ಮುಂದೆ ಬರುತ್ತಿವೆ. ಹೀಗಾಗಿ ಎಲ್ಲರ ಚಿತ್ತ ನಾಳೆ ಕೋಟ್೯ ಕಲಾಪದತ್ತ ನೆಟ್ಟಿದೆ.

Published On - 7:10 pm, Thu, 23 October 25

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ