ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್‌ನಲ್ಲಿ ನಡೆದಿದೆ. ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ
ಮೃತ ಯುವಕ
Follow us
ಕಿರಣ್ ಹನುಮಂತ್​ ಮಾದಾರ್
|

Updated on: Apr 30, 2023 | 7:53 AM

ಕಲಬುರಗಿ: ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ವಿಶ್ವವಿದ್ಯಾಲಯ ಆವರಣದ ಪಾಳು ಬಿದ್ದ ಗೋಡಾನ್‌ನಲ್ಲಿ ನಡೆದಿದೆ. ಜ್ಯೋತಿಬಾ ಪುಲೆ ಬಡಾವಣೆಯ ನಿವಾಸಿ ಶಶಾಂಕ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಆನ್‌ಲೈನ್ ಎನಿಮೇಶನ್ ಕೆಲಸ ಮಾಡುತ್ತಿದ್ದ ಮೃತ ಶಶಾಂಕ್, ಕೆಲಸದಲ್ಲಿ ಬಹಳಷ್ಟು ಒತ್ತಡ ಹಾಕಿಕೊಂಡಿದ್ದ. ಇದೀಗ ಕೆಲಸದ ಒತ್ತಡ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕುವಿನಿಂದ ಇರಿದು ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ

ಬೆಂಗಳೂರು: ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ವಿದ್ಯಾರ್ಥಿಯ ಬರ್ಬರ ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್ ದಾಖಲಾಗಿದ್ದು, ಈ ಕುರಿತು ಪೊಲೀಸರು ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿದ್ದಾರೆ.

ಇದನ್ನೂಓದಿ:ಶಿವಮೊಗ್ಗ: ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಖೈದಿ ಆತ್ಮಹತ್ಯೆ; ಒಂದೇ ವಾರದಲ್ಲಿ ಎರಡು ಖೈದಿಗಳ ಸಾವು

ಎಣ್ಣೆ ನಶೆಯಲ್ಲಿ ಕಿರಿಕ್: ಅತ್ತಿಗೆ, ಅಣ್ಣನ ಮಗನನ್ನ ಕತ್ತರಿಸಿ ಕೊಂದ ಬಾಮೈದ

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲುಕಿನ ಹೆಗಡಹಳ್ಳಿ ಭೀಕರ ಡಬಲ್ ಮರ್ಡರ್​​ಗೆ ಸಾಕ್ಷಿಯಾಗಿದೆ. ಹೌದು ಏ.27 ರ ಮದ್ಯಾಹ್ನ ಶಾಂತಮ್ಮ ಹಾಗೂ ಯಶವಂತ್ ಎಂಬುವವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದಾರೆ. ಇದೇ ವೇಳೆ ಗದ್ದೆ ಬಳಿ ಬಂದ ಮೈದುನ ಸತೀಶ್​ ಎಂಬಾತ ನೀರಿನ ವಿಚಾರಕ್ಕೆ ಕಿರಿಕ್ ತೆಗೆದಿದ್ದಾನೆ. ಶಾಂತಮ್ಮ ಹಾಗೂ ಸತೀಶ್​ನಿಗೂ ಮಾತಿನ ಚಕಮಕಿ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ, ರೊಚ್ಚಿಗೆದ್ದ ಸತೀಶ ಮಿಷನ್ ಮನೆಯಲ್ಲಿದ್ದ ಕುಡುಗೋಲು ತೆಗೆದುಕೊಂಡು ಬಂದು ಏಕಾಏಕಿ ದಾಳಿ ಮಾಡಿದ್ದಾನೆ. ಹೌದು ಶಾಂತಮ್ಮಳ ತಲೆ ಎದೆ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಮನಸೋ ಇಚ್ಛೆ ಕೊಚ್ಚಿ ಹಾಕಿದ್ದಾನೆ. ಕುಡುಗೋಲಿನ ಏಟಿಗೆ ಶಾಂತಮ್ಮ ಅರಚಾಡುತ್ತ ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾಳೆ. ಅಮ್ಮನ ಚೀರಾಟ, ಕೂಗಾಟ ಕೇಳಿದ ಮಗ ಯಶವಂತ್ ಓಡೋಡಿ ಬಂದು, ತಾಯಿ ಸಹಾಯಕ್ಕೆ ಮುಂದಾಗಿದ್ದಾನೆ. ಈ ವೇಳೆ ಯಶವಂತ್ ಮೇಲೆಯೂ ದಾಳಿ ನಡೆಸಿದ ಸತೀಶ ಆತನನ್ನು ಕೊಚ್ಚಿ ಕೊಂದಿದ್ದಾನೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ