ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ

| Updated By: ಗಂಗಾಧರ​ ಬ. ಸಾಬೋಜಿ

Updated on: Sep 22, 2023 | 3:44 PM

ತೀರ್ವ ಬರಗಾಲದಿಂದ ಜನ, ರೈತರು ಕಂಗಾಲಾಗಿದ್ದಾರೆ. ಬರಪರಿಸ್ಥಿತಿಯ ಹಿನ್ನಲೆಯಲ್ಲಿ ನರೇಗಾ ಯೋಜನೆ ಯಡಿಯಲ್ಲಿ ಮಾನವ ದಿನಗಳನ್ನು ಹೆಚ್ಚಿಸಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಹೆಚ್ಚಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಸಚಿವ ಪ್ರಿಯಾಂಕ್ ಖರ್ಗೆ
ಸಚಿವ ಪ್ರಿಯಾಂಕ್ ಖರ್ಗೆ
Follow us on

ಕಲಬುರಗಿ, ಸೆಪ್ಟೆಂಬರ್​ 22: ರಾಜ್ಯದಲ್ಲಿ ತೀರ್ವ ಬರ ಆವರಿಸಿದೆ. ಈಗಾಗಲೇ ಸರ್ಕಾರ ಬರಗಾಲ ಪೀಡಿತ ತಾಲೂಕು ಗಳನ್ನು ಕೂಡಾ ಘೋಷಣೆ ಮಾಡಿದೆ. ತೀರ್ವ ಬರಗಾಲ ದಿಂದ ಜನ, ರೈತರು ಕಂಗಾಲಾಗಿದ್ದಾರೆ. ಬರಪರಿಸ್ಥಿತಿಯ ಹಿನ್ನಲೆಯಲ್ಲಿ ನರೇಗಾ ಯೋಜನೆಯಡಿಯಲ್ಲಿ ಮಾನವ ದಿನಗಳನ್ನು ಹೆಚ್ಚಿಸಲು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಗಿರಿರಾಜ್ ಸಿಂಗ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ತಾವು ಇತ್ತೀಚೆಗೆ ದೆಹಲಿ ಭೇಟಿ ನೀಡಿದ್ದ ಸಂದರ್ಭದಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವರನ್ನು ಭೇಟಿ ಮಾಡಲು ಸಮಯವನ್ನು ಕೇಳಿದ್ದೆ ಆದರೆ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ ಎಂದು ಉಲ್ಲೇಖಿಸಿ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ನರೇಗಾ ಯೋಜನೆ ಅಡಿಯಲ್ಲಿ ನಿಯಮಿತವಾಗಿ ಉದ್ಯೋಗ ಸೃಷ್ಟಿಸುವಲ್ಲಿ ಮುಂಚೂಣಿಯಲ್ಲಿದ್ದು ವೈಯಕ್ತಿಕ ಹಾಗೂ ಸಮುದಾಯದ ಸ್ವತ್ತುಗಳನ್ನು ನಿರ್ಮಿಸುತ್ತಿದೆ. ಪ್ರಸಕ್ತ ವರ್ಷದಲ್ಲಿ ಕರ್ನಾಟಕ 13 ಕೋಟಿ ಕೆಲಸದ ದಿನಗಳನ್ನು ಕಾರ್ಮಿಕ ಬಜೆಟ್’ನಲ್ಲಿ ಹಂಚಿಕೆ ಮಾಡಿದ್ದು ಈಗಾಗಲೇ 8.48 ಕೋಟಿ ಕೆಲಸದ ದಿನಗಳ ಉದ್ಯೋಗ ಸೃಷ್ಟಿಸಿದೆ.

ಇದನ್ನೂ ಓದಿ: ಕಾವೇರಿ ಜಲ ವಿವಾದ, ನಾಳೆ ಬೆಂಗಳೂರಿನಲ್ಲೂ ಬಿಜೆಪಿ ಪ್ರತಿಭಟನೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು 31 ಜಿಲ್ಲೆಗಳ 195 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರವು ಘೋಷಿಸಿದೆ.

ಪ್ರಸ್ತುತ ಬರ ಪೀಡಿತ ತಾಲೂಕುಗಳಲ್ಲಿ 20.86 ಲಕ್ಷ ಕುಟುಂಬಗಳಿಗೆ 7.36 ಕೋಟಿ ಕೆಲಸದ ದಿನಗಳ ಉದ್ಯೋಗವನ್ನು ಒದಗಿಸಲಾಗಿದೆ. ತೀವ್ರ ಬರದ ಹಿನ್ನಲೆಯಲ್ಲಿ ಬರ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಉದ್ಯೋಗಕ್ಕಾಗಿ ಬೇಡಿಕೆಯಿದ್ದು ರಾಜ್ಯ ಸರ್ಕಾರ ಈಗಾಗಲೇ 100 ದಿನಗಳಿಂದ 150 ದಿನಗಳವರೆಗೆ ಕೆಲಸದ ದಿನಗಳ ಹೆಚ್ಚಳಕ್ಕಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಇದನ್ನೂ ಓದಿ: ಬೆಳಗಾವಿ: ಮಲಪ್ರಭಾ ಡ್ಯಾಂನಿಂದ 4 ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಬಿಡುಗಡೆ

ಈ ಬರ ಪೀಡಿತ ಪ್ರದೇಶಗಳಿಗೆ ಪ್ರಸಕ್ತ ವರ್ಷದಲ್ಲಿ ಒಟ್ಟು 1234 ಲಕ್ಷ ಕೆಲಸದ ದಿನಗಳು ಮಂಜೂರಾಗಿದ್ದು, 100 ರಿಂದ 150 ದಿನಗಳಿಗೆ ಈ ಅವಧಿಯನ್ನು ಹೆಚ್ಚಿಸುವುದರಿಂದ ಒಟ್ಟು ಕೆಲಸದ ದಿನಗಳ ಮೇಲೆ ಪರಿಣಾಮ ಬೀರಲಿದೆ. ಅಲ್ಲದೆ ಸರ್ಕಾರವು ಪ್ರಸಕ್ತ ಆರ್ಥಿಕ ವರ್ಷದ 5.5 ತಿಂಗಳಿನಲ್ಲಿ ಪ್ರತಿ ತಿಂಗಳು1.52 ಕೋಟಿ ಕೆಲಸದ ದಿನಗಳ ಉದ್ಯೋಗ ಸೃಷ್ಟಿಸಿದೆ. ಪ್ರಸಕ್ತ ವರ್ಷಕ್ಕೆ 1300 ಲಕ್ಷ ಕೆಲಸದ ದಿನಗಳ ಅನುಮೋದನೆ ಮಾತ್ರ ಇದ್ದು, ಇದನ್ನು 1800 ಲಕ್ಷ ದಿನಗಳಿಗೆ ಹೆಚ್ಚಿಸುವುದರಿಂದ ರಾಜ್ಯದ ಕಾರ್ಮಿಕ ಬಜೆಟ್ ಬೇಗನೆ ಮುಗಿದು ಹೋಗಲಿದೆ.

ಆದ್ದರಿಂದ ಈ ಬರ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನರೇಗಾ ಕೆಲಸದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಮತ್ತು ಕರ್ನಾಟಕದ ಆರ್ಥಿಕ ವರ್ಷ 2023-24ಕ್ಕೆ ಕಾರ್ಮಿಕ ಬಜೆಟ್ ಅನ್ನು 1300 ಲಕ್ಷದಿಂದ 1800 ಲಕ್ಷ ಕೆಲಸದ ದಿನಗಳಿಗೆ ಹೆಚ್ಚಿಸಲು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದೇನೆ ಎಂದು‌ ಸಚಿವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Fri, 22 September 23