AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿ: 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಎಡವಟ್ಟು

ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌ ಅವರು ಮೃತಪಟ್ಟು 6 ತಿಂಗಳು ಕಳೆದ ನಂತರ ಇದೀಗ ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರನ್ನು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಿ ಎಡವಟ್ಟು ಮಾಡಿದೆ.

ಕಲಬುರಗಿ: 6 ತಿಂಗಳ ಹಿಂದೆ ಮೃತಪಟ್ಟ ಇಂಜಿನಿಯರ್ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಎಡವಟ್ಟು
ಮೃತ ಇಂಜಿನಿಯರ್ ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಎಡವಟ್ಟು
ದತ್ತಾತ್ರೇಯ ಪಾಟೀಲ, ಕಲಬುರಗಿ
| Updated By: ಆಯೇಷಾ ಬಾನು|

Updated on: Jul 13, 2024 | 11:46 AM

Share

ಕಲಬುರಗಿ, ಜುಲೈ.13: ಜಿಲ್ಲೆಯ ಸೇಡಂ ಪಟ್ಟಣದ ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್‌ ಅಶೋಕ ಪುಟಪಾಕ್‌ ಅವರು ಆರು ತಿಂಗಳ ಹಿಂದೆಯೇ ಮೃತಪಟ್ಟಿದ್ದರು (Death). ಆದರೆ ರಾಜ್ಯ ಸರ್ಕಾರ (Karnataka Government) ಅವರನ್ನು ಕೊಡಗಿಗೆ ವರ್ಗಾವಣೆ ಮಾಡಿ ಜುಲೈ 9ರಂದು ಆದೇಶ ಹೊರಡಿಸಿ ಯಡವಟ್ಟು ಮಾಡಿಕೊಂಡಿದೆ.

ನಗರಾಭಿವೃದ್ಧಿ ಇಲಾಖೆಯ ಕಿರಿಯ ಎಂಜಿನಿಯರ್ ಅಶೋಕ ಪುಟಪಾಕ್ ಅವರನ್ನು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರ ವಿಧಾನಸಭಾ ಕ್ಷೇತ್ರದಲ್ಲಿ ಈ ಎಡವಟ್ಟು ನಡೆದಿದೆ. ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ಅಶೋಕ ಭೀಮರಾಯ ಪುಟಪಾಕ್ (54) ಸೇಡಂ ಪುರಸಭೆಯಲ್ಲಿ ಕಿರಿಯ ಎಂಜಿನಿಯರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತೀವ್ರ ಅನಾರೋಗ್ಯದ ಕಾರಣ ಅವರು ಸೇಡಂನಲ್ಲಿ ಜನವರಿ 12ರಂದು ಮೃತಪಟ್ಟಿದ್ದರು. ಜ.13ರಂದು ದಿಗ್ಗಾಂವ ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಚಿತ್ತಾಪುರ, ವಾಡಿ, ಸೇಡಂ ಪುರಸಭೆಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.

ಇಲಾಖೆಯ ನೌಕರರೊಬ್ಬರು ಮೃತಪಟ್ಟಿರುವ ಬಗ್ಗೆ ಪೌರಾಡಳಿತ ವಿಭಾಗಕ್ಕೆ ಮಾಹಿತಿ ಇರಲಿಲ್ಲವೇ? ಒಂದು ವೇಳೆ ಮೃತಪಡುವ ಮುಂಚೆ ಅಶೋಕ ಅವರು ವರ್ಗಾವಣೆ ಕೋರಿದ್ದರೆ, ಅವರ ಮರಣದ ನಂತರ ವರ್ಗಾವಣೆ ಕಡತ ಮರು ಪರಿಶೀಲನೆ ಮಾಡದೇ ವರ್ಗಾವಣೆ ಮಾಡಲಾಗಿದೆಯೇ ಎಂಬ ಚರ್ಚೆ ನಡೆಯುತ್ತಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರವೆರೆಗೆ ಇಡಿ ಕಸ್ಟಡಿಗೆ

ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಕರೆಂಟ್ ಶಾಕ್, ಯುವಕ ಬಲಿ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹಳಿಯೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ರಿಪ್ಪನ್​ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ವ್ಯಾಸಂಗ ಮಾಡುತ್ತಿದ್ದ ಕಾರ್ತಿಕ್ ಮೃತ ದುರ್ದೈವಿ. ನಿನ್ನೆ ಬೆಳಗ್ಗೆ ಮನೆಯ ಮುಂಭಾಗ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯುತ್ ತಂತಿ ತಗುಲಿ ಕರೆಂಟ್ ಶಾಕ್ ಹೊಡೆದಿತ್ತು. ಸದ್ಯ ರಿಪ್ಪನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ